17 ರಿಂದ ಉದ್ಧಾನ ವೀರಭದ್ರಸ್ವಾಮಿ, ಭದ್ರಕಾಳಮ್ಮ ಜಾತ್ರಾ ಮಹೋತ್ಸವ
ಕನ್ನಡಪ್ರಭ ವಾರ್ತೆ , ತುಮಕೂರು , ಮಾ.11
ತುಮಕೂರು ಸಮೀಪದ ಹಳೇ ನಿಜಗಲ್ನಲ್ಲಿರುವ ಉದ್ದಾನ ವೀರಭದ್ರಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಮಾ. 17 ರಿಂದ 19 ರವರೆಗೆ ಉದ್ಧಾನ ವೀರಭದ್ರಸ್ವಾಮಿ ಮತ್ತು ಭದ್ರಕಾಳಮ್ಮನವರ ಜಾತ್ರಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.
ಮಾ. 17 ರಂದು ಬೆಳಗ್ಗೆ ವೀರಭದ್ರಸ್ವಾಮಿ ಸೇರಿದಂತೆ ವಿವಿಧ ದೇವರುಗಳಿಗೆ ಜಲಾಭಿಷೇಕ, ಕ್ಷೀರಾಭಿಷೇಕ, ಮಹಾರುದ್ರಾಭಿಷೇಕ ಏರ್ಪಡಿಸಲಾಗಿದೆ. ಮಾ. 18 ರಂದು ಬೆಳಗ್ಗೆ ವೀರಭದ್ರಸ್ವಾಮಿ ಹಾಗೂ ಭದ್ರಕಾಳಮ್ಮನವರಿಗೆ ಆಭರಣ ಅಲಂಕಾರ ಹಮ್ಮಿಕೊಳ್ಳಲಾಗಿದೆ.
ಅಂದು ರಾತ್ರಿ ಅಗ್ನಿಕುಂಡ ಹಾಗೂ ಆರತಿ, ವೀರಗಾಸೆ ಕುಣಿತ, ನಂದಿದ್ವಜ ಕುಣಿತವಿದ್ದು, ಹಿರೇಮಠಾಧ್ಯಕ್ಷ ಡಾ. ಶಿವಾನಂದ ಶಿವಾಚಾರ್ಯ ಸ್ವಾಮಿಗಳ ಸಾನಿಧ್ಯದಲ್ಲಿ ಕಾರ್ಯಕ್ರಮ ನಡೆಯಲಿವೆ. ಮಾ. 19 ರಂದು ಬೆಳಗ್ಗೆ ರುದ್ರಾಭಿಷೇಕ, ಹೂವಿನ ಅಲಂಕಾರ, ಸಂಜೆ ವೀರಭದ್ರಸ್ವಾಮಿ,
ಭದ್ರಕಾಳಮ್ಮ, ನಿಜಗಲ್ ಗ್ರಾಮ ದೇವತೆ ಮಾರಮ್ಮ ಉತ್ಸವ ಮೂರ್ತಿಗಳ ವೈಭವದ ಮುತ್ತಿನ ಪಲ್ಲಕ್ಕಿ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಕಾಳಿಕಾ ಮಠ ಮಹಾಸಂಸ್ಥಾನದ ಯೋಗೇಶ್ವರ ಋಷಿಕುಮಾರ ಸ್ವಾಮಿಯವರು ನಂದಿಧ್ವಜ, ವೈಭವದ ಮುತ್ತಿನ ಪಲ್ಲಕ್ಕಿ ಉತ್ಸವ ಉದ್ಘಾಟಿಸಲಿದ್ದಾರೆ. ತಮಿಳ್ನಾಡಿನ ಹೆಸರಾಂತ ಜಾನಪದ ಕಲಾತಂಡಗಳಿಂದ ಊರಿನ ಪ್ರಮುಖ ಬೀದಿಗಳಲ್ಲಿ ಜನಪದ ಕಲೆಗಳೊಂದಿಗೆ ನೃತ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉದ್ದಾನ ವೀರಭದ್ರಸ್ವಾಮಿ ಸೇವಾ ಟ್ರಸ್ಟ್ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

