ಎಸ್ಎಸ್ಐಟಿಯಲ್ಲಿ ತಂತ್ರ-2014 ಆರಂಭ
ತುಮಕೂರು: ಐಎಸ್ಟಿಇ ಸ್ಟೂಡೆಂಟ್ಸ್ ಚಾಪ್ಟರ್ ಆಯೋಜಿತ ಎರಡು ದಿನದ ರಾಷ್ಟ್ರಮಟ್ಟದ ತಾಂತ್ರಿಕ ವಿಚಾರ ಸಂಕಿರಣ ತಂತ್ರ-2014 ಶ್ರೀ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆರಂಭಗೊಂಡಿತು.
ಎಸ್ಎಸ್ಐಟಿ ಕ್ಯಾಂಪಸ್ನಲ್ಲಿ ಏರ್ಪಟ್ಟ ಕಾರ್ಯಕ್ರಮವನ್ನು ಬೆಂಗಳೂರಿನ ಕಾಗ್ನಿಜೆಂಟ್ ಟೆಕ್ನಾಲಜಿ
ಸರ್ವಿಸಸ್ನ ಉಪಾಧ್ಯಕ್ಷ ಬಾಲಗೋಪಾಲಕೃಷ್ಣನ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸದಾ ಕ್ರಿಯಾತ್ಮಕವಾಗಿ ಕೆಲಸ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಸವಾಲುಗಳನ್ನು ಎದುರಿಸುವಂಥ ಗುಣಗಳನ್ನು ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಎಸ್ಎಸ್ಐಟಿ ಪ್ರಾಂಶುಪಾಲ ಡಾ.ಕೆ.ಎ. ಕೃಷ್ಣಮೂರ್ತಿ, ಡೀನ್ ಡಾ. ಎಂ ಜೆಡ್ ಕುರಿಯನ್, ಪ್ರೊ. ಎಂ.
ಸಿದ್ದಪ್ಪ, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ.ಕೆ.ಬಿ. ಶಿವಕುಮಾರ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗಾಗಿ ಅನೇಕ ಸ್ವರ್ಧೆಗಳನ್ನು ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

