ತುಮಕೂರು

ಮತದಾನ ಜಾಗೃತಿ ಕಾರ್ಯಕ್ರಮ

Published On :

ತಿಪಟೂರು: ಹದಿನೆಂಟು ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ಪಟ್ಟಿಯಲ್ಲಿ ತಪ್ಪದೇ ಹೆಸರನ್ನು ನೋಂದಾಯಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಹಾಕಬೇಕೆಂದು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ಎಸ್.ವಿ.ಇ.ಇ.ಪಿ ವತಿಯಿಂದ ತಾಲೂಕಿನ ಎಲ್ಲಾ ಪ್ರಥಮ ದರ್ಜೆ ಕಾಲೇಜಿಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರವನ್ನು ಹಮ್ಮಿಕೊಳ್ಳಾಗಿತ್ತು. ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳಾದ ಬಿ.ಜೆ. ಪ್ರಭುಸ್ವಾಮಿ, ಸಿ.ಎಸ್.ಕಾಂತರಾಜು, ಪ್ರಭು, ಕೋಡಾಚಾರ್, ಬಿ.ಎನ್.ಬಸವರಾಜು, ಎಸ್.ಸಿ. ಜಗದೀಶ್ ಅವರ  ತಂಡ ವಿವಿಧ ಪ್ರಥಮ ದರ್ಜೆ ಕಾಲೇಜುಗಳಿಗೆ ತೆರಳಿ ಒಟ್ಟು ಸುಮಾರು 5000 ವಿದ್ಯಾರ್ಥಿಗಳಿಗೆ ಮತದಾನದ ಪಾವಿತ್ರ್ಯತೆ ಕುರಿತು ಮಾಹಿತಿ ನೀಡಿದರು.
 ಕ್ಷೇತ್ರ ಶಿಕ್ಷಣಾಧಿಕಾರಿಗಳ ಮಾರ್ಗದರ್ಶನದಂತೆ 5ತಂಡಗಳಲ್ಲಿ ಬೂತ್‌ಮಟ್ಟದ ಅಧಿಕಾರಿಗಳ ಜೊತೆಯಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಲ್ಲಾಗಟ್ಟಿ ಅಡವಪ್ಪ ಪ್ರಥಮ ದರ್ಜೆ ಕಾಲೇಜು, ಕಲ್ಪತರು ವಿಜ್ಞಾನ ಪ್ರಥಮ ದರ್ಜೆ ಕಾಲೇಜು, ಕಲ್ಪತರು ಶಿಕ್ಷಣ ಮಹಾವಿದ್ಯಾಲಯ, ಉದಯ ಭಾರತಿ ಪ್ರಥಮ ದರ್ಜೆ ಕಾಲೇಜು, ಶ್ರೀ ಬಸವೇಶ್ವರ ತಾಂತ್ರಿಕ ಮಹಾವಿದ್ಯಾಲಯ, ಶ್ರೀ ಬಸವೇಶ್ವರ ಶಿಕ್ಷಣ ಮಹಾವಿದ್ಯಾಲಯ ಮತ್ತು ನೊಣವಿನಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಮ್ಮಿಕೊಳ್ಳಲಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.