ಮಾದರಿಯಾಗದ ಜಿಎಸ್ಬಿ: ಎಸ್ಪಿಎಂ
ತುಮಕೂರು: ತುಮಕೂರು ಬಿಜೆಪಿ ಸಂಸದ ಜಿ.ಎಸ್. ಬಸವರಾಜು ಅವರ ಕಳೆದ 5 ವರ್ಷಗಳ ಸಾಧನೆ ಏನು ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಪ್ರಶ್ನಿಸಿದ್ದಾರೆ.
ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ದಿನ ಕೂಡ ಸಂಸತ್ನಲ್ಲಿ ಕ್ಷೇತ್ರದ ಜ್ವಲಂತ ಸಮಸ್ಯೆಗಳ ಕುರಿತು ಜಿ.ಎಸ್. ಬಸವರಾಜ್ ಮಾತನಾಡಲಿಲ್ಲ. ತುಮಕೂರು ಕ್ಷೇತ್ರ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿದೆ. ರಾಜಕೀಯವಾಗಿ ಮತ್ತೊಬ್ಬರಿಗೆ ಮಾದರಿಯಾಗುವಂತಹ ಕೆಲಸವನ್ನು ಜಿಎಸ್ಬಿ ಎಂದಿಗೂ ಮಾಡಲಿಲ್ಲ ಎಂದು ದೂರಿದರು.
ಚಿನ್ನಾಭರಣ ಮೇಲೆ ಎಸ್ಬಿಎಂ ಸಾಲ
ಶಿರಾ: ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಶಿರಾ ಶಾಖೆ ವತಿಯಿಂದ ಚಿನ್ನಾಭರಣಗಳ ಮೇಲೆ ಕೃಷಿ, ಬೆಳೆಸಾಲ, ಕೃಷಿಯೇತರ ಚಿನ್ನಾಭರಣ ಸಾಲ ನೀಡಲಾಗುವುದು ಎಂದು ವ್ಯವಸ್ಥಾಪಕ ಎಸ್.ಭಾಸ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೃಷಿ, ಬೆಳೆ ಸಾಲ, ಕೃಷಿಯೇತರ ಚಿನ್ನಾಭರಣ ಸಾಲ ನೀಡಲಾಗುವುದು ಎಂದು ವ್ಯವಸ್ಥಾಪಕರು ತಿಳಿಸಿದ್ದಾರೆ. ಮಾಹಿತಿಗೆ ದೂ.08135275229 ಇಲ್ಲಿಗೆ ಸಂಪರ್ಕಿಸಲು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

