ಯುಪಿಎ ಸರ್ಕಾರದ ಸಾಧನೆ ಅಪಾರ
ಕ.ಪ್ರ. ವಾರ್ತೆ ಹೆಬ್ಬೂರು ಮಾ.15
ಡಾ. ಮನಮೋಹನಸಿಂಗ್ ನೇತೃತ್ವದ ಯುಪಿಎ ಸರ್ಕಾರ ಕಳೆದ 10 ವರ್ಷಗಳಲ್ಲಿ ಅಪಾರ ಸಾಧನೆ ಮಾಡಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ ಅಭಿಪ್ರಾಯಪಟ್ಟರು.
ಹೆಬ್ಬೂರಿನಿಂದ ನಾಗವಲ್ಲಿ ತನಕ ಪಾದಯಾತ್ರೆ ಕೈಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಜನಪರ ಕೆಲಸ: ಯುಪಿಎ ಸರ್ಕಾರ ಕಳೆದ 10 ವರ್ಷಗಳಲ್ಲಿ ಜನಪರ ಕೆಲಸಗಳನ್ನು ಮಾಡಿದೆ. ಎಲ್ಲಾ ವರ್ಗದ ಜನರಿಗೆ ಆದ್ಯತೆ ನೀಡಿದೆ ಎಂದು ಹೇಳಿದರು. ಹಾಗೆಯೇ ಕಳೆದ 9 ತಿಂಗಳಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೂಡ ಜನಪರ ಯೋಜನೆಗಳನ್ನು ನೀಡುತ್ತಾ ಬಂದಿದೆ ಎಂದರು.
ಸಿದ್ದರಾಮಯ್ಯ ಅವಧಿಯಲ್ಲಿ ಅನ್ನಭಾಗ್ಯ ಯೋಜನೆಯಡಿ ರು.1ಗೆ ಅಕ್ಕಿ ನೀಡಲಾಗಿದೆ. ರು. 2 ಹಾಲಿಗೆ ಸಬ್ಸಿಡಿ ನೀಡಲಾಗಿದೆ ಎಂದು ತಿಳಿಸಿದರು. ಹಾಗೆಯೇ ಕಾಂಗ್ರೆಸ್ ಪಕ್ಷ ಹೆಬ್ಬೂರಿನಲ್ಲಿ ಚಾರಿತ್ರಿಕ ಸ್ತ್ರೀಶಕ್ತಿ ಸಮಾವೇಶ ನಡೆಸಿದ್ದು ಇತಿಹಾಸ ಎಂದರು.
ಜಿಎಸ್ಬಿ ಕೊಡುಗೆ ಶೂನ್ಯ: ಸಂಸದ ಜಿ.ಎಸ್. ಬಸವರಾಜು ಕಳೆದ ಐದು ವರ್ಷಗಳಲ್ಲಿ ತುಮಕೂರಿಗೆ ಏನನ್ನೂ ಮಾಡಿಯೇ ಇಲ್ಲ. ಅದೇ ಲಕ್ಕಪ್ಪನವರು ತುಮಕೂರಿಗೆ ಎಚ್ಎಂಟಿ ಕಾರ್ಖಾನೆ ತಂದರು ಎಂದರು. ತುಮಕೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ನಿಂದ ಸ್ಪರ್ಧಿಸಿರುವ ಮುದ್ದಹನುಮೇಗೌಡ ಸೌಮ್ಯ ಸ್ವಭಾವದ ವ್ಯಕ್ತಿ. ಮಾಜಿ ಶಾಸಕರಾಗಿ ಹಲವಾರು ಕಾರ್ಯಕ್ರಮ ರೂಪಿಸಿದ್ದಾರೆ ಎಂದರು. ತಾವು ವಿರೋಧ ಪಕ್ಷದಲ್ಲಿದ್ದಾಗ ಹೆಬ್ಬೂರು ಗೂಳೂರು ಏತ ನೀರಾವರಿ ಯೋಜನೆಗೆ ಹೋರಾಟ ಮಾಡಿರುವುದಾಗಿ ತಿಳಿಸಿದರು. ಈ ಬಾರಿ ತಮ್ಮನ್ನು ಆಯ್ಕೆ ಮಾಡಿ ಕಳುಹಿಸದರೆ ಮತ್ತಷ್ಟು ಒಳ್ಳೆಯ ಕೆಲಸ ಮಾಡುವುದಾಗಿ ತಿಳಿಸಿದರು.
ನಿಂಗಪ್ಪ ಸೇರ್ಪಡೆ: ಇದೇ ಸಂದರ್ಭದಲ್ಲಿ ಕೆಜೆಪಿಯಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಎಚ್. ನಿಂಗಪ್ಪ ತಮ್ಮ ಬೆಂಬಲಿಗರೊಂದಿಗೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು.
ಸಂಸದ ಜಿ.ಎಸ್. ಬಸವರಾಜುಗೆ ನಿಷ್ಠೆ ಇಲ್ಲ
ತುಮಕೂರು: ಕಳೆದ ಐದು ವರ್ಷಗಳಿಂದ ತುಮಕೂರು ಲೋಕಸಭಾ ಸದಸ್ಯರಾಗಿದ್ದ ಜಿ.ಎಸ್.ಬಸವರಾಜು ಕ್ಷೇತ್ರದಲ್ಲಿ ಕಣ್ಣಿಗೆ ಕಾಣುವ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ.ಪರಮೇಶ್ವರ ಆರೋಪಿಸಿದರು. ಅವರು ಜಿಲ್ಲೆಯ ಅಭಿವೃದ್ಧಿ ಬಗ್ಗೆ ಕಿಂಚಿತ್ತೂ ಕಾಳಜಿ ವಹಿಸಿಲ್ಲ. ಅಷ್ಟೇ ಅಲ್ಲ ಅವರು ಆಯ್ಕೆಯಾಗಿದ್ದ ಪಕ್ಷಕ್ಕೂ ಅವರು ನಿಷ್ಠರಾಗಿ ನಡೆದುಕೊಂಡಿಲ್ಲ ಎಂದು ಲೇವಡಿ ಮಾಡಿದರು.
'ಲೋಕಸಭೆ ಫಲಿತಾಂಶ ರಾಜ್ಯ ಸರ್ಕಾರಕ್ಕೆ ಜನಾದೇಶವಲ್ಲ'
ತುಮಕೂರು: ನರೇಂದ್ರ ಮೋದಿ ಅಲೆಯೂ ಇಲ್ಲ. ನಮೋ ನಾಯಕತ್ವದಿಂದ ರಾಜ್ಯ, ರಾಷ್ಟ್ರ ರಾಜಕಾರಣ, ಕಾಂಗ್ರೆಸ್ ಪಕ್ಷದ ಮೇಲೆ ಯಾವ ಪರಿಣಾಮವೂ ಬೀರದು ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಆತ್ಮವಿಶ್ವಾಸ ವ್ಯಕ್ತಪಡಿಸಿದರು.
ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಅವರು ಮಾತನಾಡಿದರು.
ನರೇಂದ್ರ ಮೋದಿ ಯಾರೆಂಬುದು ಕರ್ನಾಟಕದ ಜನರಿಗೇ ಗೊತ್ತೇ ಇರಲಿಲ್ಲ. ಆದರೆ ಕಳೆದ ಕೆಲವು ತಿಂಗಳುಗಳಿಂದ ಅವರು ಪದೇ-ಪದೇ ರಾಜ್ಯಕ್ಕೆ ಭೇಟಿ ಕೊಟ್ಟ ಪರಿಣಾಮ ರಾಜ್ಯದ ಕೆಲವು ಭಾಗದ ಜನರಿಗೆ ಅವರ ಹೆಸರಿನ ಪರಿಚಯವಾಗಿದೆ. ಅದರಿಂದ ಕಾಂಗ್ರೆಸ್ ಪಕ್ಷಕ್ಕೆ ಸ್ವಲ್ಪ ಮಟ್ಟಿನ ದುಷ್ಪರಿಣಾಮ ಉಂಟಾಗಿದೆ ಎಂದರು.
ಅಳತೆಗೋಲಲ್ಲ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಫಲಿತಾಂಶ ರಾಜ್ಯ ಸರ್ಕಾರದ ಸಾಧನೆಗಳ ಮಾನದಂಡವಲ್ಲ.ಅಳತೆಗೋಲೂ ಅಲ್ಲ ಎಂದ ಪರಮೇಶ್ವರ್, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ್ಲಾಘಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಷಫಿ ಅಹಮದ್, ಶಾಸಕ ಡಾ.ರಫೀಕ್ ಅಹಮದ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ರಾಜಣ್ಣ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

