'ಮರುಪಾವತಿ ಸಾಲದವಿತರಣೆಗೆ ಬಲು ಸುಲಭ'
ಕುಣಿಗಲ್: ಯಾವುದೇ ಬ್ಯಾಂಕ್ ಸಾಲದ ರೂಪದಲ್ಲಿ ನೀಡುವ ಹಣವೂ ಇತರೆ ಜನರು ಬ್ಯಾಂಕಿನಲ್ಲಿ ಹೂಡಿದ ಹಣವಾಗಿರುತ್ತದೆ. ಬ್ಯಾಂಕುಗಳು ಜನರಿಂದ, ಜನರಿಗಾಗಿ ಮತ್ತು ಜನತೆಯ ಹಿತಕ್ಕಾಗಿ ಎಂಬುದನ್ನು ಮನಗಂಡು ಸಾಲ ಸೌಲಭ್ಯ ಪಡೆವವರು ನಿಗದಿತ ಅವಧಿಯೊಳಗೆ ಸಾಲ ಮರುಪಾವತಿ ಮಾಡುವಂತೆ ಪಟ್ಟಣದ ಇಂಡಿಯನ್ ಓವರ್ಸೀಸ್ ಬ್ಯಾಂಕ್ ವ್ಯವಸ್ಥಾಪಕ ಶ್ರೀನಿವಾಸ್ ಕಿವಿಮಾತು ಹೇಳಿದರು.
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕ್ ಗ್ರಾಹಕರಿಗೆ ಲೋಕ ಅದಾಲತ್ ಮೂಲಕ ರಾಜಿ ಸಂಧಾನದಿಂದ ಪ್ರಕರಣ ಇತ್ಯರ್ಥಕ್ಕೆ ಹಮ್ಮಿಕೊಂಡಿದ್ದ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗ್ರಾಹಕರ ಅವಶ್ಯಕತೆಗೆ ಅನುಗುಣವಾಗಿ ಬ್ಯಾಂಕುಗಳ ಆರ್ಥಿಕ ಸಾಲ ಸೌಲಭ್ಯಯ ಕಲ್ಪಿಸುತ್ತವೆ. ಆದರೆ ಪಡೆದಂತಹವರು ಸಕಾಲದಲ್ಲಿ ಮರುಪಾವತಿ ಮಾಡುವ ಮೂಲಕ ತಾವು ಅಭಿವೃದ್ದಿ ಹೊಂದಿ ಬ್ಯಾಂಕನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಮೂಲಕ ಬ್ಯಾಂಕಿನಲ್ಲಿ ಠೇವಣಿ ಹೂಡಿದ ಜನತೆಗೂ ಅನುಕೂಲವಾಗುವಂತೆ ಮಾಡಬೇಕು ಎದರು.
ನ್ಯಾಯಾಧೀಶೆ ಆರ್.ಶಾರದ ಮಾತನಾಡಿ, ಐಒಬಿ ಮತ್ತು ಕಲ್ಪತರು ಗ್ರಾಮೀಣ ಬ್ಯಾಂಕ್ನ ಒಟ್ಟು 108 ಪ್ರಕರಣಗಳನ್ನು ರಾಜಿ ಸಂಧಾನಕ್ಕೆ ಕೈಗೆತ್ತಿಕೊಳ್ಳಲಾಗಿದ್ದು ಮುಂದಿನ ದಿನಗಳಲ್ಲಿ ಇತರೆ ಬ್ಯಾಂಕುಗಳು ಮುಂದೆ ಬಂದಲ್ಲಿ ಅವರ ಗ್ರಾಹಕರ ಪ್ರಕರಣ ಬಗೆಹರಿಸಲು ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದರು.
ನ್ಯಾಯಾಧೀಶೆ ದಾಕ್ಷಾಯಿಣಿ, ಎಪಿಪಿ ಸುರೇಖ ಹಿರೇಮಠ, ವಕೀಲರ ಸಂಘದ ಅಧ್ಯಕ್ಷ ದಯಾನಂದ, ಚಂದ್ರಶೇಖರ್, ರಂಗಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

