ತುಮಕೂರು

ಭಾರತ್ ನಿರ್ಮಾಣ ಯಾತ್ರೆಗೆ ಚಾಲನೆ

Published On :

ತುಮಕೂರು: ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ತುಮಕೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಭಾರತ್ ನಿರ್ಮಾಣ ಯಾತ್ರೆಗೆ ನಗರದ ಕೋಟೆ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಪಾದಯಾತ್ರೆ ಆರಂಭಿಸಲಾಯಿತು.
ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಷಫೀ ಅಹಮದ್ ಅವರು, ಸೋನಿಯಾಗಾಂಧಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರ ಆದೇಶದ ಮೇರೆಗೆ ತುಮಕೂರು ನಗರದಲ್ಲಿ ಪಾದಯಾತ್ರೆ ನಡೆಸಲಾಯಿತು. ಉಳಿದಂತೆ ಎಲ್ಲ ತಾಲೂಕು ಕೇಂದ್ರಗಳಲ್ಲೂ ಯಾತ್ರೆಯನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ನಗರ ಶಾಸಕ ಡಾ.ಎಸ್.ರಫೀಕ್ ಅಹಮದ್ ಅವರು ಮಾತನಾಡಿ, ಕಳೆದ 10 ವರ್ಷಗಳ ಅವಧಿಯ ಕೇಂದ್ರ ಸರ್ಕಾರದ ಸಾಧನೆ, ಸುಮಾರು 9 ತಿಂಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಂತಹ ಅನ್ನಭಾಗ್ಯ, ಶಾದಿಭಾಗ್ಯ, ರೈತರಿಗೆ ಬಡ್ಡಿರಹಿತ ಸಾಲ, ಕ್ಷೀರಭಾಗ್ಯ ಸೇರಿದಂತೆ ತುಮಕೂರು ನಗರದಲ್ಲಿ ಸುಮಾರು 200 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಕಾಂಗ್ರೆಸ್ ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದೆ ಎಂದರು.
ಹಾಗಾಗಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಗರದ ಜನತೆ ಸರ್ವಾನುಮತದಿಂದ ಕಾಂಗ್ರೆಸ್ ಅಭ್ಯರ್ಥಿಗೆ ಮತ ಚಲಾಯಿಸುವ ಮೂಲಕ ಕಾಂಗ್ರೆಸ್‌ಗೆ ಗೆಲವು ತಂದುಕೊಡುವಂತೆ ಅವರು ನಗರದ ಜನರಲ್ಲಿ ಮನವಿ ಮಾಡಿದರು.
ಇದೇ ವೇಳೆ ಕೇಂದ್ರ ಸರ್ಕಾರದ ಆಹಾರ ಭದ್ರತಾ ಕಾಯಿದೆ, ಭೂ ಸ್ವಾಧೀನ ಕಾಯಿದೆ, ದುರ್ಬಲ ವರ್ಗದವರ ಸಬಲೀಕರಣ, ಆಧಾರ್ ಕಾರ್ಡ್, ನೇರ ನಗದು ವರ್ಗಾವಣೆ, ಯುವ ಜನಾಂಗಕ್ಕೆ ಅವಕಾಶಗಳು, ಅಲ್ಪ ಸಂಖ್ಯಾತರಿಗೆ ಸಮಾನ ಅವಕಾಶಗಳು, ಮಹಿಳೆಯರ ಸುರಕ್ಷತೆ, ಮಾಹಿತಿಹಕ್ಕು ಕಾಯಿದೆ, ಕಡ್ಡಾಯ ಶಿಕ್ಷಣ ಕಾಯಿದೆ, ರಸ್ತೆ ವ್ಯಾಪಾರಿಗಳ ಕಾಯಿದೆ, ಇಂದಿರಾ ಆವಾಸ್ ಯೋಜನೆ, ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್ ಯೋಜನೆಗಳ ಬಗ್ಗೆ ನಗರದ ಸುಮಾರು 75 ರಿಂದ 80 ಸಾವಿರಕ್ಕೂ ಹೆಚ್ಚು ಮತದಾರರನ್ನು ಸಂಪರ್ಕಿಸುವ ಮೂಲಕ ಅವರಲ್ಲಿ ಪಕ್ಷದ ಸಾಧನೆಗಳ ಬಗ್ಗೆ ಅರಿವು ಮೂಡಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.