ತುಮಕೂರು

'ಬಸವರಾಜು ಸ್ಪರ್ಧೆ ಮತದಾರರ ಕರ್ಮ'

Published On :

ಮಧುಗಿರಿ: ಕಳೆದ ಲೋಕಸಭೆಯಲ್ಲಿ ರಾಜ್ಯ ಮತ್ತು ಕ್ಷೇತ್ರದ ಬಗ್ಗೆ ಒಂದೇ ಒಂದು ಪ್ರಶ್ನೇ ಕೇಳದ ಸಂಸದ ಜಿ.ಎಸ್.ಬಸವರಾಜು ಈ ಬಾರಿ ನಡೆಯಲಿರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಮತದಾರರ ದೌರ್ಭಾಗ್ಯ ಎಂದು ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಲೇವಡಿ ಮಾಡಿದರು.
ಮಧುಗಿರಿ ತಾಲೂಕು ಕಾಂಗ್ರೆಸ್ ಸಮಿತಿಯಿಂದ ತಿಪ್ಪಾಪುರ ಗ್ರಾಮದಿಂದ ಐ.ಡಿ.ಹಳ್ಳಿವರೆಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ ಮಾಹಿತಿ ಜನರಿಗೆ ಮುಟ್ಟಿಸುವ ಜನ ಜಾಗೃತಿ  ಪಾದಯಾತ್ರೆಯಲ್ಲಿ ಭಾಗವಹಿಸಿ ಐಡಿಹಳ್ಳಿಯಲ್ಲಿ ನಡೆದ  ಬಹಿರಂಗ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಜನರು ಕೊಟ್ಟ ಅಧಿಕಾರವನ್ನು ಕಾಳಜಿ  ವಹಿಸಿ ನಿಭಾಯಿಸದ ಜಿಎಸ್‌ಬಿ  ಮರು ಆಯ್ಕೆಗೆ ಅರ್ಹರಲ್ಲ. ಈಗ 5 ವರ್ಷ ಕೇಂದ್ರದಿಂದ ಎಷ್ಟು ಅನುದಾನ ತಂದಿದ್ದೀರಿ, ತಮ್ಮ ಕೊಡುಗೆ ಏನು, ಎಷ್ಟು ಗ್ರಾಮಗಳಿಗೆ ಭೇಟಿ ನೀಡಿ ಜನರ ಕಷ್ಟ ಕಾರ್ಪಣ್ಯಕ್ಕೆ ಸ್ಪಂದಿಸಿದ್ದೀರಾ ಎಂದು ಪ್ರಶ್ನಿಸಿ, ನಿಮ್ಮ 5 ವರ್ಷಗಳ ಸಾಧನೆ ಶೂನ್ಯ ಎಂದರು.
ಈ ಸಲ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಿ ಕಳಿಸಿದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಕೊಂಡಿಯಾಗಿ ಕೆಲಸ ಮಾಡುತ್ತೇನೆ. ರಾಜ್ಯಕ್ಕೆ ಅನ್ಯಾಯವಾದರೆ ಸಂಸತ್ತಲ್ಲಿ ಧ್ವನಿ ಎತ್ತಿ ತುಮಕೂರು ಲೋಕಸಭಾ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಪ್ರಮಾಣಿಕವಾಗಿ ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.
ಸಾಧನೆಯೇ ಶ್ರೀರಕ್ಷೆ: ಶಾಸಕ ಕೆ.ಎನ್.ರಾಜಣ್ಣ,  ಸಿಎಂ ಸಿದ್ದರಾಮಯ್ಯ ಸರ್ಕಾರ 9 ತಿಂಗಳ ಸಾಧನೆ ಈ ಚುನಾವಣೆಯಲ್ಲಿ ಸಾಕಾರಗೊಂಡು ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ  ವಿಜೇತರಾಗಬೇಕು.
ಈಚೆಗೆ ಸಿಎಂ ಸಿದ್ದು ಮಧುಗಿರಿಗೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು ಇದರಿಂದ ತಾಲೂಕಿನ ಚಿತ್ರಣವೇ ಬದಲಾಗಲಿದೆ. ತಾ.45 ಕೆರೆಗಳಿಗೆ ನೀರು ತುಂಬಿಸುವ ಎತ್ತಿನ ಹೊಳೆ ಯೋಜನೆ ಕಾಮಗಾರಿ ಆರಂಭವಾಗಲಿದೆ. ಮುದ್ದಹನುಮೇಗೌಡರನ್ನು ಗೆಲ್ಲಿಸಿದರೆ ಸೋನಿಯಾ, ರಾಹುಲ್, ಸಿದ್ದು,ಪರಮೇಶ್ವರ್, ಜಯಚಂದ್ರ ಹಾಗೂ ನನಗೆ ಗೌರವ ತಂದು ಕೊಟ್ಟಂತಾಗುತ್ತದೆ ಎಂದರು.
ಪಾದಯಾತ್ರೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ಮಲ್ಲಿಕಾರ್ಜುನಯ್ಯ, ರಾಜ್‌ಗೋಪಾಲ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ರಾಜೇಂದ್ರ, ತುಮುಲ್ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ಪುರಸಭೆ ಅಧ್ಯಕ್ಷ ಎನ್. ಗಂಗಣ್ಣ, ತಾ.ಪಂ.ಅಧ್ಯಕ್ಷೆ ಸುನಂದ, ಮುಖಂಡ ಸಿದ್ದಪ್ಪ, ಪಿಸಿಕೆ ರೆಡ್ಡಿ, ಬಾಲೇನಹಳ್ಳಿ ಶಿವಣ್ಣ, ಮರಿಯಣ್ಣ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.