20 ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಜಯ
ತುಮಕೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ 20 ಕ್ಕೂ ಹೆಚ್ಚು ಸ್ಥಾನ ಲಭಿಸುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ. ಜಯಚಂದ್ರ ಭವಿಷ್ಯ ನುಡಿದರು.
ಅವರು ತುಮಕೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ವಾತಾವರಣ ಬದಲಾಗಿದೆ. ಅಲ್ಲದೇ ಜನರಿಗೂ ಜಾತ್ಯತೀತ ಪಕ್ಷ ಬರಬೇಕು ಅನ್ನೋ ಮನಸ್ಸಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನ ಗಳಿಸುತ್ತದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶೋಷಿತ ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದಾರೆ. ಇವೆಲ್ಲಾ ಕೂಡ ಕಾಂಗ್ರೆಸ್ಗೆ ವರದಾನವಾಗಲಿದೆ ಎಂದರು.
ಲೋಕಸಭಾ ಚುನಾವಣೆ ರಾಜ್ಯ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರದು. ಮುಖ್ಯಮಂತ್ರಿಗಳು ಕಳೆದ 10 ತಿಂಗಳಿನಿಂದ ಜನಪರ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ಗೆ ಜನತೆ ದೊಡ್ಡ ಮಟ್ಟದಲ್ಲಿ ಆರ್ಶೀವಾದ ಮಾಡಲಿದ್ದಾರೆ ಎಂದರು.
ನಮ್ಮೆಲ್ಲರ ಮೇಲಿದೆ: ಇದು ದೇಶದ ಚುನಾವಣೆ. ಹಾಗಾಗಿ ಸರ್ಕಾರದ ಕಾರ್ಯಕ್ರಮಕ್ಕೆ ಇದು ಅಳತೆಗೋಲು ಅಲ್ಲ. ಪರಮೇಶ್ವರ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದರು. ತುಮಕೂರು ಜಿಲ್ಲೆಗೆ 3 ಲೋಕಸಭಾ ಕ್ಷೇತ್ರಗಳು ಬರುತ್ತವೆ. ತುಮಕೂರು, ಚಿತ್ರದುರ್ಗ ಹಾಗೂ ಬೆಂಗಳೂರು ಗ್ರಾಮಾಂತರ. ಈ ಮೂರು ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಮಗ ಪ್ರಯತ್ನಿಸಿದ್ದು ನಿಜ: ಲೋಕಸಭಾ ಚುನಾವಣೆಯಲ್ಲ್ಲಿ ಮಗ ಪ್ರಯತ್ನಿಸಿದ್ದು ನಿಜ. ಯಾರು ಬೇಕಾದರೂ ಟಿಕೆಟ್ಗೆ ಪ್ರಯತ್ನಿಸಬಹುದು. ಆದರೆ ಹೈಕಮಾಂಡ್ ಒಪ್ಪಿಗೆ ಸೂಚಿಸುವವರ ಪರವಾಗಿ ಕೆಲಸ ಮಾಡಬೇಕು. ಈಗ ಮುದ್ದಹನುಮೇಗೌಡರಿಗೆ ಟಿಕೆಟ್ ನೀಡಲಾಗಿದೆ. ನಾವೆಲ್ಲರೂ ಈಗ ಅವರ ಗೆಲವಿಗೆ ಶ್ರಮಿಸುತ್ತೇವೆ ಎಂದರು.
ಮೋದಿ ಅಲೆ ಭ್ರಮೆ: ರಾಜ್ಯದಲ್ಲಿ ಎಲ್ಲೂ ಮೋದಿ ಅಲೆ ಕಾಣುತ್ತಿಲ್ಲ. ಮೋದಿ ಅಲೆ ಎನ್ನುವುದು ಕೇವಲ ಭ್ರಮೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಜಿಲ್ಲಾ ಕಾಂಗ್ರೆಸ್ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ಮಾತನಾಡಿ ಕಾಂಗ್ರೆಸ್ ಈ ಬಾರಿ ಗೆಲವು ಸಾಧಿಸಲಿದೆ. ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಮತದಾರರು ಕಾಂಗ್ರೆಸ್ ಅನ್ನು ಬೆಂಬಲಿಸುತ್ತಾರೆ. ಏಪ್ರಿಲ್ 17 ರಂದು ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಬಂದಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಶಾಸಕ ರಫೀಕ್ ಅಹಮದ್, ಮಸಾಲೆ ಜಯರಾಂ, ಮುದ್ದಹನುಮೇಗೌಡ, ಮಸಾಲೆ ಜಯರಾಂ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

