ತುಮಕೂರು

ಖಾತ್ರಿ ಯೋಜನೆಗೆ ವಿಶ್ವಸಂಸ್ಥೆ ಶ್ಲಾಘನೆ

Published On :

ಶಿರಾ: ಕೇಂದ್ರ ಸರ್ಕಾರದ ವಿಶೇಷ ಯೋಜನೆಯಾದ ಉದ್ಯೋಗ ಖಾತ್ರಿ ಯೋಜನೆಗೆ ವಿಶ್ವಸಂಸ್ಥೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಇದು ಡಾ.ಮನಮೋಹನ ಸಿಂಗ್ ಅವರ ಉತ್ತಮ ಆಡಳಿತಕ್ಕೆ ಮತ್ತು ಜನಪರ ಕಾರ್ಯಕ್ರಮಗಳಿಗೆ ಸಾಕ್ಷಿಯಾಗಿದೆ. ಈ ಬಾರಿಯೂ ದೇಶದ ಜನತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ರಾಜ್ಯ ಕಾನೂನು ಸಚಿವ ಟಿ.ಬಿ. ಜಯಚಂದ್ರ ತಿಳಿಸಿದರು.
ಅವರು ನಗರದಲ್ಲಿ ಏರ್ಪಡಿಸಲಾಗಿದ್ದ ಭಾರತ್ ನಿರ್ಮಾಣ್ ಯಾತ್ರೆಯ ಸಮಾರೋಪ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.
ದೇಶದ ಜನರಿಗೆ ಉದ್ಯೋಗ ಭದ್ರತೆ ಮತ್ತು ಆಹಾರ ಭದ್ರತೆ ಒದಗಿಸಲು ವಿವಿಧ ಕಾಯಿದೆಗಳನ್ನು ಜಾರಿಗೆ
ತಂದಿರುವ ಯುಪಿಎ ಸರಕಾರದ ಸಾಧನೆಗಳನ್ನು ಜನರಿಗೆ ತಲುಪಿಸುವ ಕಾರ್ಯಕ್ರಮವೇ ಭಾರತ ನಿರ್ಮಾಣ್ ಯಾತ್ರೆಯಾಗಿದ್ದು, ಜೊತೆಗೆ ಈ ಭಾಗಕ್ಕೆ ಶಾಶ್ವತ ನೀರಾವರಿ ಕುರಿತು ಚಿಂತಿಸಲಾಗುತ್ತಿದೆ. ಈ ಕೆಲಸಕ್ಕೆ ಚಿತ್ರದುರ್ಗ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಸಂಸದರ ನೆರವುಬೇಕಿದ್ದು ಅಲ್ಲಿಯೂ ಕಾಂಗ್ರೆಸ್ ಸಂಸದರೇ ಗೆಲ್ಲಬೇಕು ಎಂದರು.
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಮಾತನಾಡಿ ನಾನು ಕಾಂಗ್ರೆಸ್ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದರು. ಚಿತ್ರದುರ್ಗ ಕ್ಷೇತ್ರದಲ್ಲಿ ಸಾಕಷ್ಟು ಸ್ಪರ್ಧಿಗಳಿದ್ದರೂ ಹೈಕಮಾಂಡ್ ನನಗೆ ಟಿಕೆಟ್ ನೀಡಿದ್ದು, ಕ್ಷೇತ್ರದ ಹಾಗೂ ಜಿಲ್ಲೆಯ ಎಲ್ಲರ ಸಹಕಾರ ನನಗಿದೆ ಎಂದರು.
ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಅವರು ಮಾತನಾಡಿ  ಪಕ್ಷ ಸಮಾಜದ ಎಲ್ಲ ವರ್ಗಗಳಿಗೆ ಸಮಾನತೆ, ಭದ್ರತೆ ನೀಡಬಲ್ಲದೇ ಹೊರತು ಬೇರೆಯವರಿಂದ ಇದು ಸಾಧ್ಯವಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.