ಗ್ರಾಮೀಣ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಅಗತ್ಯ
ಹುಳಿಯಾರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ
ಅಗತ್ಯವಾಗಿ ಬೇಕಾಗಿದೆ ಎಂದು ಎಸ್ಬಿಐ ವ್ಯವಸ್ಥಾಪಕ ಲಕ್ಷ್ಮಯ್ಯ ಹೇಳಿದರು.
ಪಟ್ಟಣದ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆ ವತಿಯಿಂದ ಕುರಿಹಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಉಚಿತವಾಗಿ ಕಂಪ್ಯೂಟರ್ ವಿತರಿಸಿ ಮಾತನಾಡಿ ಎಸ್ಬಿಐ ಮೊದಲಿನಿಂದಲೂ ಬ್ಯಾಂಕಿಂಗ್ ವಹಿವಾಟಿನ ಜತೆ ಜತೆಗೆ ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಳ್ಳುತ್ತಿದ್ದು ಶಾಲೆಗಳಿಗೆ ಕುಡಿಯುವ ನೀರಿನ ಫಿಲ್ಟರ್, ಫ್ಯಾನನ್ನು ನೀಡಲಾಗುತ್ತಿತ್ತು. ಈಗ ಕಂಪ್ಯೂಟರ್ ಅನ್ನು ನೀಡಲಾಗುತ್ತಿದ್ದು ಇದರಿಂದ ಗ್ರಾಮೀಣ ಪ್ರದೇಶದ ಮಕ್ಕಳು ನಗರ ಪ್ರದೇಶದ ಮಕ್ಕಳ ಜತೆ ಪೈಪೋಟಿ ನಡೆಸಲು ಸಹಾಯಕವಾಗುತ್ತದೆ ಎಂದರು. ಸಿಆರ್ಪಿ ಜಿ.ಕೆ.ಲೋಕೇಶ್ ಮಾತನಾಡಿ ಬ್ಯಾಂಕ್ ಸಾಮಾನ್ಯ ಜನರಿಗೆ ಉತ್ತಮ ಸೇವೆ ನೀಡುವ ಮಧ್ಯೆಯೂ ಇಂತಹ ಸಾಮಾಜಿಕ ಕಳಕಳಿಯ ಸೇವೆ ಮಾಡುತ್ತಿರುವುದು ಶ್ಲಾಘನೀಯ ಎಂದರು. ಮುಖ್ಯ ಶಿಕ್ಷಕಿ ಯಶೋಧಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಗೋವಿಂದಪ್ಪ, ತಾಂಡವಮೂರ್ತಿ, ರಾಜಣ್ಣ, ಮೇಲನಹಳ್ಳಿ ನಾಗರಾಜು ಇತರರು ಇದ್ದರು. ಶಿಕ್ಷಕ ಶ್ರೀಧರ್ ಸ್ವಾಗತಿಸಿ, ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

