ತುಮಕೂರು

ಮುನಿರಾಜುರಿಂದ ಶ್ರೀಗಳ ಭೇಟಿ

Published On :

ತುಮಕೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರಾಜು ಗೌಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಡಾ.ಶಿವಕುಮಾರಸ್ವಾಮಿಗಳ ಆಶೀರ್ವಾದ ಪಡೆದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸೇರಿದ ಕುಣಿಗಲ್ ಪಟ್ಟಣದಲ್ಲಿ ಕಾರ್ಯಕರ್ತರ ಸಭೆ ಆಯೋಜಿಸಿದ್ದು, ಸಭೆಗೂ ಮುನ್ನ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆಯಲು ಆಗಮಿಸಿದ್ದೇನೆ. ನಾನು ಮೊದಲಿನಿಂದಲೂ ಶ್ರೀಮಠದ ಭಕ್ತನಾಗಿದ್ದು, ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವ ಮುನ್ನ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ. ಮಾ. 26 ರಂದು ಪಾದಯಾತ್ರೆ ಮೂಲಕ ರಾಮನಗರಕ್ಕೆ ತೆರಳಿ ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು. ಕುಣಿಗಲ್ ಕಾರ್ಯಕರ್ತರ ಸಭೆಗೆ ಹಿರಿಯ ಮುಖಂಡರಾದ ಆರ್.ಅಶೋಕ್ ಮತ್ತಿತರರ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ರಸ್ತೆ ಸೇರಿದಂತೆ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ ಹಲವಾರು ಹೋರಾಟಗಳಲ್ಲಿ ಭಾಗವಹಿಸಿದ್ದೇನೆ. ಕೇಂದ್ರ ಮತ್ತು ರಾಜ್ಯ ಸರಕಾರದ ವೈಪಲ್ಯಗಳ ವಿರುದ್ಧವೂ ನಿರಂತರ ಕಾರ್ಯರ್ತರೊಂದಿಗೆ ಸೇರಿ ಹೋರಾಟ ಮಾಡಿದ್ದು, ಈ ಬಾರಿ ಜನತೆ ನನ್ನನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಮುನಿರಾಜುಗೌಡ ತಿಳಿಸಿದರು.
ಸೊಗಡು ಮನೆಗೆ ಭೇಟಿ: ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದ ನಂತರ ಮುನಿರಾಜುಗೌಡ ಅವರನ್ನು ರಾಯಸಂದ್ರ ರವಿಕುಮಾರ್ ಮಾಜಿ ಸಚಿವ ತುಮಕೂರಿನ ಸೊಗಡು ಶಿವಣ್ಣ ಅವರ ಮನೆಗೆ ಕರೆದೊಯ್ದು ಅವರ ಬೆಂಬಲ ಯಾಚಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.