ತುಮಕೂರು

ಸಿಪಿಐ ಅಭ್ಯರ್ಥಿ ವಿ.ಚಿನ್ನಪ್ಪ ನಾಮಪತ್ರ

Published On :

ತುಮಕೂರು: ತುಮಕೂರಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಪಿಐ ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದೆ. ಈಗಾಗಲೇ ಘೋಷಿಸಿದಂತೆ ಸಿಪಿಐ ಅಭ್ಯರ್ಥಿ ವಿ. ಚಿನ್ನಪ್ಪ ತಮ್ಮ ಬೆಂಬಲಿಗರು, ಮುಖಂಡರ ಸಮ್ಮುಖದಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಬೆಳಗ್ಗೆ 12 ಗಂಟೆ ಸುಮಾರಿಗೆ ತುಮಕೂರಿನ ಟೌನ್‌ಹಾಲ್‌ನಲ್ಲಿ ಸೇರಿದ್ದ ಕಾರ್ಯಕರ್ತರೊಂದಿಗೆ ಸಿಪಿಐ ಅಭ್ಯರ್ಥಿ ವಿ. ಚಿನ್ನಪ್ಪ ನಗರದ  ವಿವಿಧ ರಸ್ತೆಗಳಲ್ಲಿ ಮೆರವಣಿಗೆಯಲ್ಲಿ ತೆರಳಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಕಟ್ಟಡ ಕಾರ್ಮಿಕರ ನೀಡಿದ 25 ಸಾವಿರ ಅನ್ನು ಠೇವಣಿಯಾಗಿಡಲಾಗಿದೆ. ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ನಡೆದ ಪಕ್ಷದ ಮೆರವಣಿಗೆಯಲ್ಲಿ ರಾಜ್ಯ ಸಿಪಿಐ ಕಾರ್ಯದರ್ಶಿ ಲೋಕೇಶ್, ರಾಜ್ಯ ಎಐಟಿಯುಸಿ ಉಪಾಧ್ಯಕ್ಷ ಶಿವಣ್ಣ, ಜಿಲ್ಲಾ ಸಿಪಿಐ ಕಾರ್ಯದರ್ಶಿ ಕಂಬೇಗೌಡ, ಜಿಲ್ಲಾ ಎಐಟಿಯುಸಿ ಹಿರಿಯ ಮುಖಂಡ ಗಿರೀಶ್, ವಾಸು, ಸ್ವಾತಂತ್ರ್ಯ ಹೋರಾಟಗಾರ ಹಾಗೂ ಸಿಪಿಐ ಹಿರಿಯ ಮುಖಂಡ ಟಿ.ಆರ್. ರೇವಣ್ಣ, ವಿವಿಧ ಕಾರ್ಖಾನೆಗಳಿಂದ ಆಗಮಿಸಿದ್ದ ಕಾರ್ಮಿಕರು, ಸಿಪಿಐ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು. ನಾಮಪತ್ರ ಸಲ್ಲಿಸಿದ ನಂತರ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ಅಭ್ಯರ್ಥಿ ವಿ. ಚಿನ್ನಪ್ಪ, ರೈತರ, ಕಾರ್ಮಿಕರ, ಸಾಮಾನ್ಯ ಜನತೆಯ ಹಿತ ಕಾಯಲು ಬದ್ಧವಾಗಿರುವುದಾಗಿ ಭರವಸೆ ನೀಡಿದರು.
ಶಿಕ್ಷಣ ಜೀವನ ರೂಪಿಸುತ್ತೆ: ಡಾ. ತಿಮ್ಮರಾಜು
ಶಿರಾ: ಶಿಕ್ಷಣವನ್ನು ಸರಿಯಾಗಿ ಬಳಸಿಕೊಂಡು ಜೀವನವನ್ನು ರೂಪಿಸಿಕೊಳ್ಳಬಹುದು. ಅದಕ್ಕೆ ಪೂರಕವಾಗಿ ಆರೋಗ್ಯವು ಅಷ್ಟೆ ಪ್ರಮುಖವಾಗಿದೆ. ಶಿಕ್ಷಣ ಮತ್ತು ಆರೋಗ್ಯವನ್ನು ತಮ್ಮ ಜೀವನದಲ್ಲಿ ಶಿಸ್ತಿಬದ್ಧವಾಗಿ ಅಳವಡಿಸಿಕೊಂಡರೆ ಅದರಿಂದ ಏಳಿಗೆ ತನ್ನಿಂದ ತಾನೇ ಬರುತ್ತದೆ ಎಂದು ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ತಿಮ್ಮರಾಜು ಹೇಳಿದರು
ಅವರು ಬುಕ್ಕಾಪಟ್ಟಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2013-14ನೇ ಸಾಲಿನ ಯುವ ರೆಡ್ ಕ್ರಾಸ್ ಘಟವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಒಂದು ಶಿಸ್ತುಬದ್ಧ ಜೀವನ ಶೈಲಿಯನ್ನು ರೂಪಿಸಿಕೊಂಡರೆ ತಮ್ಮ ಮನಸ್ಸಿನಲ್ಲಿ ಮೂಡಿದಂತಹ ಕಲ್ಪನೆಯನ್ನು ನನಸು ಮಾಡಬಹುದು ಎಂದರು.
 ದೊಡ್ಡ ಅಗ್ರಹಾರ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸ್ಮೀತಾ ವಿದ್ಯಾರ್ಥಿನಿಯರೊಂದಿಗೆ ಆಪ್ತ ಸಮಾಲೋಚನೆ ಮತ್ತು ಉಚಿತ ಸಲಹೆ  ಎಂಬುದರ ಬಗ್ಗೆ ಉಪನ್ಯಾಸ ನೀಡುತ್ತಾ ವಿದ್ಯಾರ್ಥಿನಿಯರು ಒಂದು ಹಂತಕ್ಕೆ ಬಂದಮೇಲೆ ತಮ್ಮಲ್ಲಿ ಆಗುವ ಬದಲಾವಣೆಯನ್ನು ತಮ್ಮ ತಾಯಿ ಹತ್ತಿರ ಮುಕ್ತವಾಗಿ ವಿಚಾರ ವಿನಿಮಯ ಮಾಡಿಕೊಂಡು ಪ್ರಕೃತಿ ದತ್ತ ಬದಲಾವಣೆಯನ್ನು ರೂಢಿಸಿಕೊಳ್ಳಬೇಕು. ಇದರಿಂದ ಆತಂಕ ಪಡುವ ಅಗತ್ಯವಿರುವುದಿಲ್ಲ, ಮತ್ತು ನಾವು ಸಮಾಜ ಮತ್ತು ಪ್ರಕೃತಿಗೆ ಹೊಂದಿಕೊಂಡು ಬೆಳೆಯಬೇಕು ಎಂದು ತಿಳಿಸಿದರು.
ತಾಲೂಕು ಆರೋಗ್ಯ ಕ್ಷೇತ್ರ ಶಿಕ್ಷಣಾದಿಕಾರಿ ಡಾ.ಚಂದ್ರಪ್ಪ  ಸ್ವಚ್ಛತೆ ಮತ್ತು ಆರೋಗ್ಯದ ಬಗ್ಗೆ ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಎಲ್. ನಾಗರಾಜು ಅಧ್ಯಕ್ಷತೆ ವಹಿಸಿದ್ದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.