ತುಮಕೂರು

9 ಮಂದಿ ಉಮೇದುವಾರಿಕೆ

Published On :

ತುಮಕೂರು: ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿಗಳಾಗಿ ಮಾ. 25 ರಂದು 9 ಮಂದಿ ನಾಮಪತ್ರ ಸಲ್ಲಿಸಿದ್ದು, ಸ್ವೀಕೃತವಾಗಿವೆ ಎಂದು ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂಜೆ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿ, ಪಕ್ಷೇತರರಾಗಿ ಜಿ. ನಾಗೇಂದ್ರ, ಬ್ರಹ್ಮಾನಂದರೆಡ್ಡಿ, ಶ್ರೀನಿವಾಸ ಕಲ್ಕೆರೆ, ಪ್ರಕಾಶ್ ಆರ್.ಎ. ಜೈನ್, ಸಿಪಿಐ ಪಕ್ಷದ ವತಿಯಿಂದ ವಿ. ಚಿನ್ನಪ್ಪ, ಆಮ್‌ಆದ್ಮಿಯಿಂದ ಎ.ಎಸ್.ಡಿ. ಸಿಲ್ವ, ಎಚ್.ಎನ್. ಶಿವಲಿಂಗಯ್ಯ, ಬಹುಜನ ಸಮಾಜವಾದಿ ಪಕ್ಷದ ವತಿಯಿಂದ ನಿಲೋಫರ್ ಜಮಾನಿ, ಹಿಂದೂಸ್ತಾನ್ ಜನತಾ ಪಾರ್ಟಿಯಿಂದ ಎಚ್.ಎನ್. ಮೋಹನ್ ಕುಮಾರ್ ನಾಮಪತ್ರ ಸಲ್ಲಿಸಿದ್ದಾರೆ ಎಂದರು.
ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣಾ ವೆಚ್ಚ ವೀಕ್ಷಕರಾಗಿ ಸತ್ಯನಾರಾಯಣ-9443325892, ಐಆರ್‌ಎಸ್ ಇವರು ಆಗಮಿಸಲಿದ್ದು, ಚುನಾವಣಾ ವೆಚ್ಚದ ನೋಡಲ್ ಅಧಿಕಾರಿಯಾಗಿ ಜಿಪಂ ಮುಖ್ಯ ಲೆಕ್ಕಾಧಿಕಾರಿ-9480877003 ಇವರನ್ನು ನೇಮಿಸಲಾಗಿದೆ. ಚುನಾವಣಾ ವೀಕ್ಷಕರಾಗಿ ಅರುಣಾಚಲ ಪ್ರದೇಶದ ನಾನಿ ಮಾಲಿ ಆಗಮಿಸಲಿದ್ದಾರೆ ಎಂದರು.
ಚುನಾವಣಾ ಪ್ರಚಾರ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳನ್ನು ಬಳಸಿಕೊಳ್ಳುವಂತಿಲ್ಲ ಎಂದು ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಬೆಂಗಳೂರು ಸೂಚನೆ ನೀಡಿದೆ ಎಂದು ತಿಳಿಸಿದರು. ನಾಮಪತ್ರಗಳನ್ನು ಸಲ್ಲಿಸಲು ಮಾ. 26  ಕಡೆಯ ದಿನವಾಗಿರುತ್ತದೆ ಎಂದು ಇದೇ ಸಂದರ್ಭದಲ್ಲಿ ಕೆ.ಎಸ್. ಸತ್ಯಮೂರ್ತಿ ಮಾಹಿತಿ ನೀಡಿದರು.
330 ರೈಡ್: ಚುನಾವಣಾ ನೀತಿ ಸಂಹಿತೆ ಜಾರಿಯಾದಾಗಿನಿಂದ ಒಟ್ಟು 330 ದಾಳಿ ನಡೆಸಲಾಗಿದ್ದು 23 ಪ್ರಕರಣ ದಾಖಲಿಸಿಕೊಳ್ಳಲಾಗಿದೆ. 22 ಆರೋಪಿಗಳನ್ನು ಬಂಧಿಸಲಾಗಿದೆ. 112.05 ಲೀಟರ್ ಲಿಕ್ಕರ್ ಸೀಜ್ ಮಾಡಲಾಗಿದೆ. ಅದರಲ್ಲಿ 2.6 ಲೀಟರ್ ಬಿಯರ್, 1 ಬೈಕ್, 1850 ಗ್ರಾಂ ಗಾಂಜಾ ಸೇರಿ ಒಟ್ಟು 80 ಸಾವಿರ ರು. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕೊರಟಗೆರೆಯ ಸಿ.ಜೆ. ಪಾಳ್ಯದ ರಾಮಕೃಷ್ಣ ಅವರ ತೋಟದಲ್ಲಿ 84.6 ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ ಎಂದು ಅಬಕಾರಿ ಡಿಸಿ ಮೋಹನ್ ಕುಮಾರ್ ತಿಳಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.