ತುಮಕೂರು

ಕಾಂಗ್ರೆಸಿಗೆ ಅಲ್ಪಸಂಖ್ಯಾತ ಮತಗಳು

Published On :

ಹುಳಿಯಾರು: ಎಲ್ಲಾ ಪಕ್ಷಗಳೊಂದಿಗೆ ಹಂಚಿಹೋಗಿರುವ ಅಲ್ಪ ಸಂಖ್ಯಾತರ ಮತಗಳನ್ನು ಮರಳಿ ಕಾಂಗ್ರೆಸ್ ಪಕ್ಷದತ್ತ ಸೆಳೆಯಲು ಜಿಲ್ಲಾ ಕಾಂಗ್ರೆಸಿನ ಅಲ್ಪಸಂಖ್ಯಾತ ವಿಭಾಗದ ಕಾರ್ಯಕರ್ತರು ಹೆಚ್ಚು ಶ್ರಮಿಸಬೇಕೆಂದು ತುಮಕೂರು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷ ಎಚ್.ಎಸ್. ರಹಮತುಲ್ಲಾಸಾಬ್ ಮನವಿ ಮಾಡಿದರು. ಹುಳಿಯಾರಿನಲ್ಲಿ ನಡೆದ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಅಲ್ಪಸಂಖ್ಯಾತರ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗದಂತೆ ಎಚ್ಚರವಹಿಸಬೇಕೆಂದರು. ಸಿ.ಕೆ. ಜಾಫರ್ ಷರೀಫ್ ಅವರು ಕಾಂಗ್ರೆಸ್ಸಿನಲ್ಲೇ ಉಳಿಯುತ್ತಿರುವುದರಿಂದ ಅಲ್ಪಸಂಖ್ಯಾತರಿಗೆ ಹೆಚ್ಚು ಬಲ ಬಂದಂತಾಗಿದೆ ಎಂದರು. ಸಭೆಯಲ್ಲಿ ಕಮಿಟಿ ಅಧ್ಯಕ್ಷ ಮುನಾವರ್ ಭಾಷ, ಮಹಮದ್ ಯೂನೂಸ್, ಅಮೀರ್,  ಎಸ್.ಎಸ್.ಎಸ್ ಹಮೀದ್, ಡಿಶ್ ಷರೀಫ್, ರಹಮತ್ ಜುಬೇರ್, ಉಪಾಧ್ಯಕ್ಷೆ ಶಭಾನ ಬಾಣು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.