ದಂಡಿನಮಾರಮ್ಮ ಜಾತ್ರೆ ಇಂದು
ಮಧುಗಿರಿ: ಮಧುಗಿರಿ ಶ್ರೀ ದಂಡಿನಮಾರಮ್ಮ ಜಾತ್ರೆಯ ಆಕರ್ಷಕ ಬೆಳ್ಳಿ ಪಲ್ಲಕ್ಕಿ ಉತ್ಸವ, ಸಿಡಿಮದ್ದು ಪ್ರದರ್ಶನ ಹಾಗೂ ಉತ್ತಮ ರಾಸುಗಳಿಗೆ ಬಹುಮಾನ ವಿತರಣಾ ಸಮಾರಂಭವನ್ನು ಮಾ.26ರ ರಾತ್ರಿ 10 ಗಂಟೆಗೆ ದಂಡಿನಮಾರಮ್ಮ ದೇವಸ್ಥಾನದ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಆಡಳಿತಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಅನಿತಾಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕೆ.ಎಸ್. ಸತ್ಯಮೂರ್ತಿ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ್ಗುಪ್ತ ಕಾರ್ಯಕ್ರಮ ಉದ್ಘಾಟಿಸುವರು. ಜಿಪಂ ಕಾರ್ಯನಿರ್ವಹಣಾಧಿಕಾರಿ ಗೋವಿಂದರಾಜು ಆಗಮಿಸುವರು. ಹೆಚ್ಚಿನ ಸಂಖ್ಯೆಲ್ಲಿ ಭಕ್ತಾದಿಗಳು ಆಗಮಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕು ಎಂದು ಅನಿತಾಲಕ್ಷ್ಮೀ ತಿಳಿಸಿದ್ದಾರೆ.
ಬಡವರೊಂದಿಗೆ ಅಬಕಾರಿ ಚೆಲ್ಲಾಟ
ತಿಪಟೂರು: ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದು,ದಲಿತರು, ಕೂಲಿಕಾರ್ಮಿಕರ ಸಂಸಾರಗಳು ಬೀದಿ ಪಾಲಾಗುತ್ತಿದ್ದರೂ ತಾಲೂಕು ಅಬಕಾರಿ ಅಧಿಕಾರಿಗಳು ಅಕ್ರಮ ಮದ್ಯ ಮಾರಾಟಗಾರರೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಬಡವರ ಬದುಕಿನೊಂದಿಗೆ ಚಲ್ಲಾಟವಾಡುತ್ತಿದ್ದಾರೆ.ತಾಲೂಕು ಮಟ್ಟದ ಕೆಲ ಮದ್ಯದಂಗಡಿ ಮಾಲೀಕರು ಪ್ರತಿ ಹಳ್ಳಿಗೂ ಮದ್ಯವನ್ನು ಅಕ್ರಮವಾಗಿ ಸರಬರಾಜು ಮಾಡುತ್ತಿರುವುದು ಅಬಕಾರಿ ಇಲಾಖೆಗೆ ತಿಳಿದಿದ್ದರೂ ಕ್ರಮ ತೆಗೆದುಕೊಂಡಿಲ್ಲ. ಕೂಡಲೆ ಜಿಲ್ಲಾ ಅಬಕಾರಿ ಅಧಿಕಾರಿಗಳು ತಾಲೂಕು ಅಬಕಾರಿ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮತೆಗೆದುಕೊಂಡು ಹಳ್ಳಿಗಳಲ್ಲಿ ನಡೆಯುತ್ತಿರುವ ಅಕ್ರಮ ಮದ್ಯ ಮಾರಾಟಕ್ಕೆ ತಡೆ ಹಾಕಬೇಕು. ಇಲ್ಲವಾದಲ್ಲಿ ಹೋರಾಟಗಳು ಅನಿವಾರ್ಯ.
ಲಾರಿ ಡಿಕ್ಕಿ: ಇಬ್ಬರು ಸಾವು
ಚಳ್ಳಕೆರೆ: ಪಟ್ಟಣದ ಬೆಂಗಳೂರು ರಸ್ತೆಯ ರಾಜ್ಯ ಹೆದ್ದಾರಿ-19 ರ ಕಮತ್ಮರಿಕುಂಟೆ ಕ್ರಾಸ್ನಲ್ಲಿ ಮಂಗಳವಾರ ರಾತ್ರಿ 7.30 ರ ಸಮಯದಲ್ಲಿ ಬಳ್ಳಾರಿಯಿಂದ ಬೆಂಗಳೂರಿಗೆ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದ ಲಾರಿಗೆ ಹಿಂಬದಿಯಿಂದ ಅದೇ ಮಾರ್ಗವಾಗಿ ಚಲಿಸುತ್ತಿದ್ದ ಲಾರಿಯೊಂದು ಡಿಕ್ಕಿ ಹೊಡೆದು ಉರುಳಿದ ಪರಿಣಾಮವಾಗಿ ಲಾರಿ ಚಾಲಕ ಜಿ.ವಿ. ಅವಿನಾಶ ಹಾಗೂ ಮತ್ತೊಬ್ಬ ಮೃತಪಟ್ಟಿದ್ದಾನೆ. ಲಾರಿ ಚಾಲಕ ಅವಿನಾಶ ತಿಪಟೂರು ತಾಲ್ಲೂಕಿನ ನೊಣವಿನಕೆರೆ ಗ್ರಾಮದವನು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಘಟನೆ ನಡೆಸ ಸ್ಥಳಕ್ಕೆ ವೃತ್ತ ನಿರೀಕ್ಷಕ ಕೆ.ಸಮೀವುಲ್ಲಾ, ಪಿಎಸ್ಐ ಡಿ.ಜಿ ಶ್ರೀನಿವಾಸ್ ಭೇಟಿ ನೀಡಿದ್ದರು. ಲಾರಿಯಿಂದ ಬಿದ್ದು ಗಾಯ: ಮತ್ತೊಂದು ಪ್ರಕರಣದಲ್ಲಿ ಕುರುಡಿಹಳ್ಳಿ ಬಳಿ ಶೇಂಗಾ ಚೀಲ ತುಂಬಿದ್ದ ಲಾರಿಯಲ್ಲಿದ್ದ ಬೊಮ್ಮ ಸಮುದ್ರ ಗ್ರಾಮದ ವಿರೂಪಾಕ್ಷಪ್ಪ(24) ಕೆಳಗೆ ಬಿದ್ದು ಗಾಯಗೊಂಡಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

