ಜೆಡಿಎಸ್ ಕೋಟೆ ಛಿದ್ರ ಮಾಡುವೆ: ಸಿಎಂ ಸಿದ್ದು
ತುಮಕೂರು: ಹಾಸನ ಮತ್ತು ತುಮಕೂರನ್ನು ಗೆಲ್ಲುವ ಮೂಲಕ ಜೆಡಿಎಸ್ ಭದ್ರಕೋಟೆಯನ್ನು ಛಿದ್ರ ಮಾಡುವ ಸಂದೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ರವಾನಿಸಿದರು. ಬುಧವಾರ ಬೆಳಗ್ಗೆ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮುದ್ದಹನುಮೇಗೌಡ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಟೌನ್‌ಹಾಲ್ ವೃತ್ತದಲ್ಲಿ ನಡೆದ ಮೆರವಣಿಗೆ ಉದ್ದೇಶಿಸಿ ಮಾತನಾಡಿದರು.
ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಕೋಟೆಯಾಗಿದ್ದ ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರವನ್ನು ಗೆದ್ದಿದ್ದೆವು. ಈ ಬಾರಿ ತುಮಕೂರು ಮತ್ತು ಹಾಸಸವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು. ಮೋದಿ ಅಲೆ ರಾಜ್ಯದಲ್ಲಿ ಇಲ್ಲವೇ ಇಲ್ಲ. ಮೋದಿಗೆ ಸೋಲಿನ ಭೀತಿ ಕಾಡುತ್ತಿದೆ. ಹಾಗಾಗಿಯೇ ಅವರು ಗುಜರಾತ್ ಮತ್ತು ವಾರಣಾಸಿಯಲ್ಲಿ ಚುನಾವಣೆಗೆ ನಿಲ್ಲುತ್ತಿದ್ದಾರೆ ಎಂದರು. ಕೇಂದ್ರದಲ್ಲಿ ಮತ್ತೆ ಯುಪಿಎ ಸರ್ಕಾರ ಬರುವುದು ನಿಶ್ಚಿತ ಎಂದರು. ತಾವು ಹಾಗೂ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಿರುದ್ಧ ಕೆಲ ಪಟ್ಟಭದ್ರರು ಇಲ್ಲಸಲ್ಲದ ಗೊಂದಲ ಸೃಷ್ಟಿಸಿ ಅಪಪ್ರಚಾರ ಮಾಡುತ್ತಿದ್ದಾರೆ. ಇಂತಹ ಪಟ್ಟಭದ್ರರಿಗೆ ಮುದ್ದಹನುಮೇಗೌಡರನ್ನು ಗೆಲ್ಲಿಸಿ ಉತ್ತರ ನೀಡುತ್ತೇವೆ. ತಾವು ಯಾವ ಅಭ್ಯರ್ಥಿ ಜತೆಗೆ ನಾಮಪತ್ರ ಸಲ್ಲಿಸಲು ಹೋಗಿಲ್ಲ. ಇದೇ ಮೊದಲ ಬಾರಿಗೆ ತುಮಕೂರಿಗೆ ಬಂದಿದ್ದೇನೆ ಎಂದರು. ದೇವೇಗೌಡರು ತಮ್ಮ ಪುತ್ರ ಕುಮಾರಸ್ವಾಮಿಗೆ ಪಿತ್ರಾರ್ಜಿತ ಆಸ್ತಿ ಎಂಬಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಳುವುದನ್ನು ಬಳುವಳಿಯಾಗಿ ನೀಡಿದ್ದಾರೆ ಎಂದು ವ್ಯಂಗ್ಯವಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

