ಈಶ್ವರನ ದೇಗುಲಕ್ಕೆ ಕನ್ನ: ಹುಂಡಿ, ವಿಗ್ರಹ ಕಳವು
ಹುಳಿಯಾರು: ಹೋಬಳಿ ಮರೆನಡುಪಾಳ್ಯದ ಬಳಿಯ ಪುರಾತನ ಇತಿಹಾಸವಿರುವ ಈಶ್ವರನ ದೇವಾಲಯದಲ್ಲಿ ಶಿವಲಿಂಗ ಹಾಗೂ ಹುಂಡಿಯಲ್ಲಿನ ಹಣ ದೋಚಿರುವ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ. ಮರೆನಡುಪಾಳ್ಯದ ಸಮೀಪವಿರುವ ಈಶ್ವರನ ದೇವಾಲಯದ ಎರಡು ಬಾಗಿಲುಗಳನ್ನು ಮುರಿದು ಒಳ ನುಗ್ಗಿರುವ ಕಳ್ಳರು ಹುಂಡಿಯಯನ್ನು ಒಡೆದು ಅದರಲ್ಲಿದ ಹಣ ಹಾಗೂ ಸುಮಾರು ಒಂದೂವರೆ ಅಡಿ ಎತ್ತರದ ಶಿವಲಿಂಗ ವಿಗ್ರಹವನ್ನು ಕಳವು ಮಾಡಿದ್ದಾರೆ. ಶಿವಲಿಂಗದ ಪೀಠವನ್ನು ಸಂಪೂರ್ಣ ಧ್ವಂಸಗೊಳಿಸಿದ್ದಾರೆ. ತಾಲೂಕಿನ ಗಡಿ ಭಾಗವಾಗಿದ್ದು ಪುರಾತನ ಇತಿಹಾಸವಿರುವ ದೇವಾಲಯಕ್ಕೆ ಚುನಾವಣೆ ಸಂದರ್ಭದಲ್ಲಿ ಯಾವುದೇ ಪಕ್ಷದ ಅಭ್ಯರ್ಥಿಗಳು ಇಲ್ಲಿಗೆ ಬಂದು ಪ್ರಥಮ ಪೂಜೆ ಮಾಡಿಸಿ ನಂತರ ಪ್ರಚಾರ ಆರಂಭಿಸುವುದು ವಾಡಿಕೆಯಾದೆ. ಪುರಾತನದೇವಾಲಯವಾದ್ದರಿಂದ ನಿಧಿ ಶೋಧನೆಗಾಗಿ ಈ ಕೃತ್ಯವೆಸಗಿರಬಹುದೆಂದು ಗ್ರಾಮಸ್ಥರು ಅಭಿಪ್ರಾಯಪಟ್ಟಿದ್ದಾರೆ.
ಮತದಾನ ಬಹಿಷ್ಕರಿಸಲು ಕೃಷ್ಣಾಪುರ ಗ್ರಾಮಸ್ಥರ ನಿರ್ಧಾರ
ಮಂಡ್ಯ: ಕೆ.ಆರ್.ಪೇಟೆ ತಾಲೂಕಿನ ಕೃಷ್ಣಾಪುರ ಗ್ರಾಮದ ಜನರಿಗೆ ಮೂಲ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಹಾಗೂ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ವಿರೋಧಿಸಿ ಏ.17ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದೆ. ಸುಮಾರು 60 ಕುಟುಂಬಗಳು ಗುಡಿಸಲಿನಲ್ಲಿ ವಾಸ ಮಾಡುತ್ತಿದ್ದೇವೆ. ನಮಗೆ ಸ್ವಂತ ಸೂರು ಕಲ್ಪಿಸುವಂತೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಗ್ರಾಮದಲ್ಲಿ ಸುಮಾರು 150 ಅಲೆಮಾರಿ ಜನಾಂಗ ಮತ್ತು 150 ಬುಡುಬಡುಕೆ ಜನಾಂಗದ ಕುಟುಂಬಗಳು ವಾಸ ಮಾಡುತ್ತಿವೆ. ಇವರಿರುವ ಬೀದಿಗಳಲ್ಲಿ ಚರಂಡಿ ವ್ಯವಸ್ಥೆ ಇಲ್ಲ. ಬೀದಿ ದೀಪಗಳಿಲ್ಲ. ನೀರಿನ ಟ್ಯಾಂಕ್ ನಿರ್ಮಿಸಿದ್ದರೂ ನೀರು ಬರುತ್ತಿಲ್ಲ. ಈ ಎರಡೂ ಜನಾಂಗಗಳ ಸುಮಾರು 30 ಯುವಕರು ವಿದ್ಯಾಭ್ಯಾಸ ಮಾಡಿದ್ದರೂ ಯಾವುದೇ ಉದ್ಯೋಗವಿಲ್ಲದೇ ಮನೆಯಲ್ಲಿಯೇ ಕುಳಿತು ಕೊಳ್ಳುವಂತಾಗಿದೆ ಎಂದು ದೂರಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

