ತುಮಕೂರು

ಜವಾಬ್ದಾರಿ ಅರಿತು ಸಿಬ್ಬಂದಿ ಕಾರ್ಯನಿರ್ವಹಿಸಲಿ

Published On :

ಕೊರಟಗೆರೆ: ಲೋಕಸಭಾ ಚುನಾವಣೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆಯಿಂದ ಮತದಾನ ನಡೆಯಲು ಜವಾಬ್ದಾರಿ ಅರಿತು ಚುನಾವಣಾ ಸಿಬ್ಬಂದಿ ಕಾರ್ಯನಿರ್ವಹಿಸಬೇಕೆಂದು ತುಮಕೂರು ಲೋಕಸಭಾ ವ್ಯಾಪ್ತಿಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಪ್ರಕಾಶ್ ತಿಳಿಸಿದರು.
ಅವರು ತುಮಕೂರು ಲೋಕಸಭಾ ಚುನಾವಣಾ ವ್ಯಾಪ್ತಿಯ ಕೊರಟಗೆರೆ ಮೀಸಲು ವಿಧಾನಸಭಾ ಕ್ಷೇತ್ರದ  ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸುವ ಮತಗಟ್ಟೆ ಅಧಿಕಾರಿಗಳಿಗೆ ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ನೀಡಿದ ತರಬೇತಿ ಶಿಬಿರದಲ್ಲಿ ಮಾತನಾಡಿ ಈ ತರಬೇತಿಯಲ್ಲಿ ಮತದಾನದ ಮಾಹಿತಿ ಅರಿತು ಕಾರ್ಯನಿರ್ವಹಿಸಬೇಕಾಗಿದೆ  ಎಂದು ತಿಳಿಸಿದರು.
ನೇಮಕ: ತಹಸೀಲ್ದಾರ್ ರಾಮಚಂದ್ರಪ್ಪ ಮಾತನಾಡಿ ಮತಗಟ್ಟೆಯಲ್ಲಿ ಎಲೆಕ್ಟ್ರಾನಿಕ್ ಮತ ಯಂತ್ರದ ಬಳಕೆ, ಮತಗಟ್ಟೆ ಸುತ್ತಮುತ್ತ ಚುನಾವಣಾ ನಿಯಮಗಳಂತೆ ಕೈಗೊಳ್ಳಬೇಕಾದ ಕ್ರಮಗಳು, ಮುಕ್ತ ಮನದಾನಕ್ಕೆ ವಹಿಸಬೇಕಾದ ಮುನ್ನಚ್ಚರಿಕಾ ಕ್ರಮಗಳ ಕುರಿತು ಅರಿವು ಮೂಡಿಸಿದ ಅವರು ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ 236 ಮತಗಟ್ಟೆಗಳಿದ್ದು ಈ ಮತಗಟ್ಟೆಗಳಲ್ಲಿ ಕಾರ್ಯನಿರ್ವಹಿಸಲು 186 ಮಂದಿ ಪಿಆರ್‌ಒ, 261 ಎಪಿಆರ್‌ಒ ಮತ್ತು 532 ಎರಡು ಮತ್ತು ಮೂರನೇ ಮತಗಟ್ಟೆ ಅಧಿಕಾರಿಗಳು ಸೇರಿದಂತೆ ಒಟ್ಟು 979 ಮಂದಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ ಎಂದರು.
ಅಂಚೆ ಮತಪತ್ರ ಪಡೆಯಿರಿ: ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ಮಾತನಾಡಿ ಚುನಾವಣೆಗೆ ನೇಮಕವಾಗಿರುವ ಸಿಬ್ಬಂದಿಗೆ ಮತ ಚಲಾಯಿಸಲು ಅಂಚೆ ಮತಪತ್ರ ಪಡೆಯಿರಿ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.