ಜಿಲ್ಲೆಗೆ ರಕ್ಷಿತಾ, ಶ್ರುತಿ, ಮಾಳವಿಕಾ, ತಾರಾ
ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಹಿಳಾ ಕಾರ್ಯಕರ್ತರ ಸಮಾವೇಶವನ್ನು ಬಿಜೆಪಿ ಮಹಿಳಾ ಜಿಲ್ಲಾ ಘಟಕದ ವತಿಯಿಂದ ಏಪ್ರಿಲ್ 2 ರಿಂದ ಜಿಲ್ಲಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಪ್ರೇಮಾ ಹೆಗ್ಗಡೆ ತಿಳಿಸಿದರು.
ಅವರು ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಏ.2 ರಂದು ತಿಪಟೂರಿಲ್ಲಿ ಬೆಳಗ್ಗೆ 10 ಗಂಟೆಗೆ, ಚಿಕ್ಕನಾಯಕನಹಳ್ಳಿಯಲ್ಲಿ ಅದೇ ದಿನ 4 ಗಂಟೆಗೆ, ಏ. 3 ರಂದು ಮಧುಗಿರಿಯಲ್ಲಿ ಬೆಳಗ್ಗೆ 10 ಗಂಟೆಗೆ, ಕೊರಟಗೆರೆಯಲ್ಲಿ ಅದೇ ದಿನ ಮಧ್ಯಾಹ್ನ 2 ಗಂಟೆಗೆ, ತುಮಕೂರಿನಲ್ಲಿ ಸಂಜೆ 5 ಗಂಟೆಗೆ, ಏ. 4 ರಂದು ತುರುವೇಕೆರೆಯಲ್ಲಿ ಬೆಳಗ್ಗೆ 11 ಗಂಟೆಗೆ, ಗುಬ್ಬಿಯಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ಏರ್ಪಾಟಾಗಿದೆ ಎಂದು ಮಾಹಿತಿ ನೀಡಿದರು.
ಈ ಮಹಿಳಾ ಮೋರ್ಚಾ ಕಾರ್ಯಕರ್ತರ ಸಮಾವೇಶಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಭಾರತಿ ವೀರೇಶ್, ಸುಲೋಚನಾ ಭಟ್, ತುಮಕೂರು ಜಿಲ್ಲಾ ಮಹಿಳಾ ಮೋರ್ಚಾ ಪ್ರಭಾರಿ ಪದ್ಮ, ರಾಜ್ಯ ಕಾರ್ಯಕಾರಿಣಿ ಸದಸ್ಯೆ ಸುಮಿತ್ರಾದೇವಿ, ಗಿರಿಜಮ್ಮ, ರುಕ್ಮಿಣಮ್ಮ, ಚಲನಚಿತ್ರ ತಾರೆಯರಾದ ಮಾಳವಿಕಾ, ರಕ್ಷಿತಾ, ತಾರಾ, ಶ್ರುತಿ ಮುಂತಾದ ಬಿಜೆಪಿ ಮಹಿಳಾ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಮಹಿಳೆಯರ ಅಭ್ಯುದಯ ಬಿಜೆಪಿ ಗುರಿಯಾಗಿದ್ದು, ದೇಶದಲ್ಲಿ ಮಹಿಳೆಯರ ಸುರಕ್ಷತೆ, ಸಮಾನ ಗೌರವ,
ಆರ್ಥಿಕ ಸಮಾನತೆ ವಿಷಯಗಳಲ್ಲಿ ಕಳೆದ 68 ವರ್ಷ ಕಳೆದರೂ ಮರೀಚಿಕೆಯಾಗಿದೆ. ಕೇಂದ್ರದ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಕಳೆದ 10 ವರ್ಷಗಳಿಂದ ಮಹಿಳೆಯರ ಮೇಲಿನ ದೌರ್ಜನ್ಯ, ಅತ್ಯಾಚಾರ, ಲೈಂಗಿಕ ಕಿರುಕುಳ, ಕೀಳಾಗಿ ಕಾಣುವ ಪ್ರವೃತ್ತಿ ಹೆಚ್ಚಾಗುತ್ತಿದೆ. ಇದೇ ರೀತಿ ರಾಜ್ಯದಲ್ಲೂ ಕಳೆದ 10 ತಿಂಗಳಿನಿಂದ ಕಾಂಗ್ರೆಸ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ. ಇದನ್ನು ತುಮಕೂರು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಖಂಡಿಸುತ್ತದೆ ಎಂದು ತಿಳಿಸಿದರು. ಮಹಿಳೆಯರ ಹಿತದೃಷ್ಟಿಯಿಂದ ಮೋದಿ ಪ್ರಧಾನಿಯಾಗಲು, ತುಮಕೂರು ಲೋಕಸಭಾ ಅಭ್ಯರ್ಥಿ ಜಿ.ಎಸ್. ಬಸವರಾಜು ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

