ತುಮಕೂರು

ಜಿ. ಸವಿತ ತಂಡಕ್ಕೆ ರಾಜ್ಯ ಗೌರವ ಪ್ರಶಸ್ತಿ

Published On :

ತುಮಕೂರು: ರಾಷ್ಟ್ರೀಯ ತೋಟಗಾರಿಕೆ ಮಿಷನ್ ಸೇರಿದಂತೆ ವಿವಿಧ ಯೋಜನೆಗಳಡಿ ಶೇ. 100 ರಷ್ಟು ಸಾಧನೆ ಮಾಡಿರುವ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಜಿ. ಸವಿತ ಮತ್ತವರ ತಂಡಕ್ಕೆ ಇಲಾಖೆಯ ರಾಜ್ಯಮಟ್ಟದ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ.
2012-13 ನೇ ಸಾಲಿನಲ್ಲಿ ರಾಷ್ಟ್ರೀಯ ತೋಟಗಾರಿಕೆ ಮಿಷನ್ ವತಿಯಿಂದ ಬಿಡುಗಡೆಯಾಗಿದ್ದ 573 ಲಕ್ಷ ರು. ಅನ್ನು ತೋಟಗಾರಿಕೆಯ ವಿವಿಧ ಬೆಳೆಗಳ ಅಭಿವೃದ್ಧಿ ಯೋಜನೆಯಡಿ ಫಲಾನುಭವಿಗಳಿಗೆ ಬಿಡುಗಡೆ ಮಾಡುವುದರ ಜೊತೆಗೆ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿದ್ದರು.
ಪ್ರಸಕ್ತ ಸಾಲಿನಲ್ಲೂ ಶೇ. 100 ರಷ್ಟು ಸಾಧಿಸುವ ಮೂಲಕ ಇತರೆ ಜಿಲ್ಲೆಗಳ ಉಪನಿರ್ದೇಶಕರಿಗೆ ಮಾದರಿಯಾಗಿದ್ದಾರೆ.
ಹನಿ ನೀರಾವರಿ ಯೋಜನೆಯನ್ನು 834 ತೋಟಗಳಲ್ಲಿ ರೈತರು ಯಶಸ್ವಿಯಾಗಿ ಅಳವಡಿಸಿಕೊಳ್ಳಲು 10.62 ಕೋಟಿ ರು. ಅನುದಾನವನ್ನು ಸರ್ಕಾರದ ಮೂಲಕ ಬಿಡುಗಡೆ ಮಾಡಿಸಿದ್ದರು. ಪ್ರಸಕ್ತ ಸಾಲಿನಲ್ಲಿ 8366 ರೈತರಿಗೆ 18.19 ಕೋಟಿ ರು. ಅನುದಾನವನ್ನು ಬಿಡುಗಡೆ ಮಾಡಿಸಿದ್ದಾರೆ. ಈ ಎಲ್ಲಾ ರೈತರು ಸಹಾಯಧನ ಪಡೆದುಕೊಂಡು ಹನಿನೀರಾವರಿ ಯೋಜನೆಯನ್ನು ಯಶಸ್ವಿಯಾಗಿ ಅಳವಡಿಸಿಕೊಂಡಿದ್ದಾರೆ. ಅದೇ ರೀತಿ ಉದ್ಯೋಗಖಾತ್ರಿ ಯೋಜನೆ, ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳನ್ನೂ ಸಹ ಯಶಸ್ವಿಗೊಳಿಸುವ ಮೂಲಕ ಇಡೀ ರಾಜ್ಯದಲ್ಲೇ ಜಿಲ್ಲೆಗೆ ಪ್ರಥಮ ಸ್ಥಾನ ತಂದುಕೊಟ್ಟಿರುವ ಉಪನಿರ್ದೇಶಕಿ ಜಿ. ಸವಿತ ಮತ್ತವರ ತಂಡ ರಾಜ್ಯಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.