ಕಾರ್ಮಿಕ ದಿನಾಚರಣೆಯಲ್ಲಿ 'ಕನ್ನಡಪ್ರಭ'ಕ್ಕೆ ಶ್ಲಾಘನೆ
ಕುಣಿಗಲ್: ಗುರುವಾರ ತಾಲೂಕು ಕಾರ್ಮಿಕ ನಿರೀಕ್ಷಕರ ಕಾರ್ಯವೈಖರಿ ಬಗ್ಗೆ ಪ್ರಕಟವಾದ ಕನ್ನಡಪ್ರಭ ಪತ್ರಿಕೆಯ ಕಾಳಜಿಯನ್ನು ವಿವಿಧ ಗಣ್ಯರು ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಸ್ತಾಪಿಸಿ ಶ್ಲಾಘಿಸಿದರು.
ಪುರಸಭಾಧ್ಯಕ್ಷೆ ಕೆ.ಎಲ್.ಹರೀಶ್, ವಿಷಯವನ್ನು ಪ್ರಸ್ತಾಪಿಸಿ ಪತ್ರಿಕೆಯು ಇಲಾಖೆಯ ಕಾರ್ಯವೈಖರಿ ಬಗ್ಗೆ ವಿವರಿಸಿದೆ. ಶಾಸಕರು ಸೇರಿದಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳೊಂದಿಗೆ ಚರ್ಚಿಸಿ ಕಾರ್ಮಿಕ ನಿರೀಕ್ಷರು ಕಾಯಂ ಆಗಿ ತಾಲೂಕಿನಲ್ಲೆ ನೆಲಸಲು ಕ್ರಮ ಕೈಗೊಳ್ಳುವ ಜೊತೆಯಲ್ಲಿ ಯೋಜನೆಗಳು ಪರಿಣಾಮಕಾರಿಯಾಗಿ ಎಲ್ಲಾ ವರ್ಗದ ಕಾರ್ಮಿಕರಿಗೆ ತಲುಪಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮೇಲಾಧಿಕಾರಿಗಳಿಗೆ ಒತ್ತಾಯಿಸುವುದಾಗಿ ಸಭೆಗೆ ತಿಳಿಸಿದರು.
ವಕೀಲರ ಸಂಘದ ಅಧ್ಯಕ್ಷ ದಯಾನಂದ, ಪತ್ರಿಕೆಯಲ್ಲಿ 15 ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದಾರೆಂದು ವರದಿಯಲ್ಲಿ ತಿಳಿಸಿದೆ. ಆದರೆ ಕಾರ್ಯಕ್ರಮದಲ್ಲಿ ಬೆರೆಳೆಣಿಕೆಯಷ್ಟು ಮಂದಿ ಬಂದಿದ್ದು, ಮುಂದಿನ ಕಾರ್ಮಿಕ ದಿನಾಚರಣೆಯನ್ನು ಇಲಾಖೆ ಸಂಘಟಿಸಿ, ಎಲ್ಲಾ ವರ್ಗದ ಕಾರ್ಮಿಕರನ್ನು ಒಂದೆಡೆ ಕಲೆಹಾಕಿ ಕಾರ್ಮಿಕರ ಮೇಳ ನಡೆಸುವ ಮೂಲಕ ಇಲಾಖೆಯ ಸವಲತ್ತುಗಳ ಬಗ್ಗೆ ಅರಿವು ಮೂಡಿಸಲು ಕ್ರಮ ಕೈಗೊಳ್ಳಲು ಜನಪ್ರತಿನಿಧಿಗಳು ಇಲಾಖಾಧಿಕಾರಿಗಳ ಮೇಲೆ ಒತ್ತಡ ತರಬೇಕೆಂದರು.
ಜಿಪಂ ಸದಸ್ಯ ವೈ.ಎಚ್. ಹುಚ್ಚಯ್ಯ, ಪತ್ರಿಕೆಯಲ್ಲಿ ಕಾರ್ಮಿಕ ಇಲಾಖೆಯ ಕಾರ್ಯವೈಖರಿಯನ್ನು ಪರಿಣಾಮಕಾರಿಯಾಗಿ ಮುಂದಿಟ್ಟಿದೆ. ಕಾರ್ಮಿಕ ಇಲಾಖೆಯ ಕಾರ್ಯವೈಖರಿ ಬಗ್ಗೆ ತಮಗೆ ಚೆನ್ನಾಗಿ ಅರಿವಿದೆ,
ಆದರೆ ಇಲಾಖೆಯು ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಿ, ಜನತೆಯ ನಿರೀಕ್ಷೆಗೆ ತಕ್ಕಂತೆ ಕೆಲಸಮಾಡದಿರುವುದು ನಿಜಕ್ಕೂ ತಾಲೂಕಿನಲ್ಲಿ ಇಲಾಖೆ ಅಸ್ತಿತ್ವದಲ್ಲಿದೆಯೆ ಎಂಬ ಅನುಮಾನ ಮೂಡುತ್ತಿದ್ದು, ಶಾಸಕರು ಸೇರಿದಂತೆ ಮುಂದಿನ ದಿನಗಳಲ್ಲಿ ಇಲಾಖೆಯ ಕಾರ್ಯವೈಖರಿ ಸುಧಾರಣೆಗೆ ಒತ್ತು ನೀಡುವುದಾಗಿ ಸಭೆಗೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

