ಮರಳು ವಿಲೆಗೆ ಅಡ್ಡಿ; ಕೆಲವರ ವಿರುದ್ಧ ದೂರು
ಕುಣಿಗಲ್: ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ತಹಸೀಲ್ದಾರ್ ನೇತೃತ್ವದ ತಂಡ ವಶಪಡಿಸಿಕೊಂಡು, ಮುಂದಿನ ಕ್ರಮಕ್ಕೆ ಲೋಕೋಪಯೋಗಿ ಇಲಾಖಾಧಿಕಾರಿಗಳಕ್ಕೆ ವಶಕ್ಕೆ ನೀಡಿದ್ದು, ಅದರಂತೆ ಮರಳನ್ನು ವಿಲೆಮಾಡಲು ಹೋದ ಲೋಕೋಪಯೋಗಿ ಇಲಾಖಾಧಿಕಾರಿಗಳು ಮರಳು ವಿಲೆಗೆ ಅಡ್ಡಿಪಡಿಸಿದವರ ಮೇಲೆ, ಅಮೃತೂರು ಪೊಲೀಸರಿಗೆ ದೂರು ನೀಡಿದ್ದಾರೆ.
ತಾಲೂಕಿನ ಅಮೃತೂರು ಪೊಲೀಸ್ ಠಾಣಾ ವ್ಯಾಪ್ತಿಯ ತೊರೆಹಳ್ಳಿ ಗ್ರಾಮದ ಸರ್ವೇ ನಂಬರ್ 1ರಲ್ಲಿನ ಸರ್ಕಾರಿ ಗೋಮಾಳದಲ್ಲಿ ಅಕ್ರಮವಾಗಿ ಮರಳನ್ನು ಸಂಗ್ರಹಿಸಲಾಗಿತ್ತು. ದೊರೆತ ಖಚಿತ ಮಾಹಿತಿ ಮೇರೆಗೆ ತಹಸೀಲ್ದಾರ್ ಶಂಭುಲಿಂಗಯ್ಯ ಏ. 29ರಂದು ವಶಪಡಿಸಿಕೊಂಡು, ನೂತನ ಮರಳು ನೀತಿ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಲೋಕೋಪಯೋಗಿ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದರು. ಆ ಮೇರೆಗೆ, ಕಂದಾಯ ಇಲಾಖೆ ಸಿಬ್ಬಂದಿ ಮತ್ತು ಲೋಕೋಪಯೋಗಿ ಇಲಾಖೆಯ ಜೆಇ ವಿಜಯಕುಮಾರ, ಸಿಬ್ಬಂದಿ ವಶಪಡಿಸಿಕೊಳ್ಳಲಾದ ಮರಳನ್ನು ಅದೇ ಸ್ಥಳದಲ್ಲಿ ವಿಲೆವಾರಿ ಮಾಡಲು ಹೋದಾಗ, ಅನಂತಕುಮಾರ್, ಗುಡ್ಡೇಗೌಡ ಮತ್ತು ರಂಗನಾಥ್ ಎಂಬುವವರು ಅಧಿಕಾರಿಗಳು ಮರಳು ವಿಲೆಮಾಡದಂತೆ ತಡೆಯೊಡ್ಡಿ, ಮರಳು ವಿಲೆಮಾಡಲುವ ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದರಲ್ಲದೆ, ಸರ್ಕಾರಿ ಕೆಲಸ ನಿರ್ವಹಿಲು ಅಡಚಣೆ ಮಾಡಿದ್ದಾರೆಂದು ವಿಜಯಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ಅಮೃತೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

