ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ
ಕ.ಪ್ರ.ವಾರ್ತೆ , ತುಮಕೂರು , ಮೇ 4
ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗುತ್ತದೆ. ಈ ಹಿನ್ನೆಲೆಯಲ್ಲಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಅತ್ಯಂತ ಮಹತ್ವಪೂರ್ಣ ಅಗತ್ಯತೆಯಾಗಿದೆ ಎಂದು ಮನಶಾಸ್ತ್ರಜ್ಞ ಕುಮಾರ್ ಹೇಳಿದರು.
ಅವರು ಚಿ.ನಾ.ಹಳ್ಳಿ ತಾಲೂಕು ತಿಮ್ಮನಹಳ್ಳಿಯ ಕಲ್ಪತರು ಯುವಜನ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಎಸ್.ಎಸ್.ಎಲ್.ಸಿ.ಮುಂದೇನು ಎಂಬ ಶೈಕ್ಷಣಿಕ ಆಪ್ತ ಸಮಾಲೋಚನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಾಸ್ತಾವಿಕ ನುಡಿಗಳನ್ನಾಡಿದ ತಿಮ್ಮನಹಳ್ಳಿಯ ಪಶುವೈದ್ಯಾಧಿಕಾರಿ ಡಾ. ತಿಮ್ಮರಾಜು ಜಿ. ರವರು ಮಾತನಾಡಿ ಪ್ರತಿಹಳ್ಳಿಯ ಯುವಜನರು ತಮ್ಮ ತಮ್ಮ ಹಳ್ಳಿಗಳಲ್ಲಿ ಸಂಘಟಿತರಾಗಿ, ಸಮುದಾಯಾಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬೇಕಾದ ಅಗತ್ಯವಿದೆ ಎಂದರು. ಈ ಹಿನ್ನೆಲೆಯಲ್ಲಿ ಕಲ್ಪತರು ಯುವಜನ ಸಂಘದ ಎಲ್ಲ ಪದಾಧಿಕಾರಿಗಳನ್ನು ಅಭಿನಂದಿಸಿದರು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ರಾಮನಹಳ್ಳಿ ಗ್ರಾ.ಪಂ.ಯ ಪಿ.ಡಿ.ಓ. ರಮೇಶ್ರವರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಅದ್ಭುತವಾದ ಪ್ರತಿಭೆಗಳಿದ್ದು, ಕೀಳರಿಮೆಯನ್ನು ಬಿಟ್ಟು, ಸತತ ಪ್ರಯತ್ನ ಹಾಗೂ ಇಚ್ಛಾಶಕ್ತಿಯನ್ನು ಬೆಳಸಿಕೊಂಡಲ್ಲಿ ಪ್ರತಿಯೊಬ್ಬರೂ ಉನ್ನತ ಸಾಧನೆ ಮಾಡಬಹುದು ಎಂದರು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಕುಮಾರ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಾರದಾ ವಿದ್ಯಾಪೀಠ ಆಂಗ್ಲ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ನೇತ್ರಾವತಿ ಬಿ.ಟಿ. ಹಾಗೂ ಸ್ವಾಮಿ ವಿವೇಕಾನಂದ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ತಿಪ್ಪೇಸ್ವಾಮಿ ಕೆ. ಟಿ.ರವರು, ಸಂಘದ ಕಾರ್ಯದರ್ಶಿ ಗಜೇಂದ್ರ, ಸದಸ್ಯರಾದ ನಂದನ್ ನಾಗರಾಜು, ರಂಗನಾಥ್, ಕ್ಯಾತಯ್ಯ, ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

