ಕುಡಿವ ನೀರಿನ ಅನುಷ್ಠಾನದಲ್ಲಿ ಎಚ್ಚರಿಕೆ ವಹಿಸಿ
ಪಾವಗಡ: ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ಅನುಷ್ಠಾನದಲ್ಲಿ ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡುವಂತೆ ಶಾಸಕ ಕೆ.ಎಂ. ತಿಮ್ಮರಾಯಪ್ಪ ಅವರು ಅಧಿಕಾರಿಗಳಿಗೆ ಎಚ್ಚರಿಸಿದರು.
ತಾಲೂಕಿನಲ್ಲಿ ಸೃಷ್ಟಿಯಾದ ಕುಡಿಯುವ ನೀರಿನ ಅಭಾವದ ಹಿನ್ನಲೆಯಲ್ಲಿ ಮಂಗಳವಾರ ಪಟ್ಟಣದ ತಾಪಂ ಸಭಾಂಗಣದಲ್ಲಿ ಏರ್ಪಡಿಸಿದ್ದ ಕುಡಿಯುವ ನೀರಿನ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಅವರು ಏಚ್ಟರಿಸಿದರು. ಬೇಸಿಗೆ ಕಾಲವಾದ್ದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗಿ ನೀರಿಗಾಗಿ ಹಾಹಾಕಾರ ನಿರ್ಮಾಣವಾಗಿದೆ. ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರಿನ ಪೂರೈಕೆಗೆ ಅಧಿಕಾರಿಗಳು ಆಸಕ್ತಿ ವಹಿಸಿ ಕೆಲಸ ಮಾಡಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳ ವರದಿಯನ್ನು ಈ ಕೂಡಲೇ ನೀಡುವಂತೆ ಗ್ರಾಪಂ ಪಿಡಿಒ ಮತ್ತು ಅಧಿಕಾರಿಗಳಿಗೆ ಆದೇಶಿಸಿದರು.
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಗ್ರಾಪಂಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ನಿರ್ಮಿಸಲಾಗಿದ್ದು ಈ ಘಟಕಗಳಿಗೆ ಸಮರ್ಪಕ ವಿದ್ಯುತ್ ಮತ್ತು ನೀರು ಪೂರೈಕೆ ಇಲ್ಲದೆ ಘಟಕಗಳು ಸ್ಥಗಿತವಾದ ಕಾರಣ ಪ್ರಯೋಜನವಾಗುತ್ತಿಲ್ಲ ಎಂದ ಅವರು ಶುದ್ಧ ನೀರಿನ ಘಟಕಗಳ ನಿರ್ಮಾಣದ ಬಗ್ಗೆ ವಿವರ ಪಡೆದು ಜನಸಂಖ್ಯೆ ಆಧಾರವಾಗಿ ಹೆಚ್ಚುವರಿ ಕೊಳವೆ ಬಾವಿ ಕೊರೆಸುವ ಮೂಲಕ ನೀರು ಪೂರೈಸಿ ಎಂದು ಜಿಪಂ ಎಇಇ ಅಶೋಕರೆಡ್ಡಿ ಅವರಿಗೆ ಸೂಚಿಸಿದರು. ವಿದ್ಯುತ್ ಸಂಪರ್ಕ ಇಲ್ಲದೆಡೆ ತಕ್ಷಣ ಸಂಪರ್ಕ ಕಲ್ಪಿಸಲು ಬೆಸ್ಕಾಂ ಎಇಇ ಭಾಸ್ಕರಾಚಾರಿ ಅವರಿಗೆ ಆದೇಶಿಸಿದರು.
ಗ್ರಾಪಂ ಪಿಡಿಒ ಮತ್ತು ಕಾರ್ಯದರ್ಶಿಗಳಿಂದ ನೀರಿನ ಸಮಸ್ಯೆಯನ್ನು ಆಲಿಸಿದರು. ವಿವಿಧ ಯೋಜನೆ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾದ ಫಲಾನುಭವಿಗಳ ವಿವಿರ ಪಡೆದ ಶಾಸಕರು ಬಿಪಿಎಲ್ ವ್ಯಾಪ್ತಿಗೆ ಬರುವ ಫಲಾನುಭವಿಗಳ ಮನೆಗಳಿಗೆ ರಾಜೀವ್ ಗಾಂಧಿ ಗ್ರಾಮಾಭಿವೃದ್ಧಿ ವಿದ್ಯುತ್‌ದ್ದೀಕರಣ ಯೋಜನೆ ಅಡಿಯಲ್ಲಿ ಶೀಘ್ರ ಭಾಗ್ಯ ಜ್ಯೋತಿ ವಿದ್ಯುತ್ ಸಂಪರ್ಕ ಕಲ್ಪಿಸಲು ಬೆಸ್ಕಾಂ ಅಧಿಕಾರಿಗಳಿಗೆ ಆದೇಶಿಸಿದರು. ವೈ.ಎನ್ ಹೊಸಕೋಟೆ ಗ್ರಾಮದಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ಚರ್ಚಿಸಿದ ಶಾಸಕರು ನಿವೇಶನ ಕಲ್ಪಿಸುವ ಮೂಲಕ ಗ್ರಾಮದಲ್ಲಿ ಮೂರು ಕಡೆ ಶುದ್ಧ ನೀರಿನ ಘಟಕಗಳು ನಿರ್ಮಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿದರು. ತಹಸೀಲ್ಧಾರ್ ಅಲ್ತಾಪ್ ಪಾಷ, ಜಿಪಂ ಅಶೋಕರೆಡ್ಡಿ,ಇಒ ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಗ್ರಾಪಂ ಪಿಡಿಒ ಕಾರ್ಯದರ್ಶಿಗಳು ಸಭೆಯಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

