ತುಮಕೂರು

ವಿದ್ಯಾರ್ಥಿಗಳಿಂದ ಟ್ಯಾಂಕ್ ಸ್ವಚ್ಛತೆ: ಮುಖ್ಯ ಶಿಕ್ಷಕರಿಗೆ ತರಾಟೆ

Published On :

ಪಾವಗಡ: ಬೇಸಿಗೆ ಬಿಸಿಯೂಟಕ್ಕೆ ಬಂದಿದ್ದ ವಿದ್ಯಾರ್ಥಿಗಳಿಂದ ಕುಡಿಯುವ ನೀರಿನ ಟ್ಯಾಂಕ್ ಸ್ವಚ್ಛಗೊಳಿಸಲಾಗುತ್ತಿದೆ ಎಂದು ಕಡಪಲಕೆರೆ ಗ್ರಾಮಸ್ಥರು ಮುಖ್ಯೋಪಾಧ್ಯಾಯರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ತಾಲೂಕಿನ ಕಡಪಲಕೆರೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೀರಿಗಾಗಿ ಎರಡು ಟ್ಯಾಂಕ್ ಹಾಗೂ ಮೇಲ್ಭಾಗದಲ್ಲಿ ಮತ್ತೊಂದು ಟ್ಯಾಂಕ್ ಇದೆ. ಇವುಗಳನ್ನು ಕಳೆದ 3 ತಿಂಗಳಿಂದ ಸ್ವಚ್ಛಗೊಳಿಸಿಲ್ಲ ಮಕ್ಕಳು ಕೊಳಕು ಹಾಗೂ ಹುಳುವಾದ ನೀರನ್ನೇ ಸೇವಿಸಬೇಕೇ ಎಂದು ಈ ಮೊದಲು ಗ್ರಾಮಸ್ಥರು ಮುಖ್ಯೋಪಾಧ್ಯಾಯರನ್ನು ಪ್ರಶ್ನಿಸಿದ್ದಾರೆ.
ಇದರಿಂದ ಮುಖ್ಯೋಪಾಧ್ಯಾಯ ರಾಜಶೇಖರ್ ಅವರು ವಿದ್ಯಾರ್ಥಿಗಳಿಗೆ ಟ್ಯಾಂಕ್ ಸ್ವಚ್ಛಗೊಳಿಸಲು ಸೂಚಿಸಿದ್ದಾರೆ. ಸ್ವಚ್ಛತೆ ಕಾರ್ಯದಲ್ಲಿ ಮಕ್ಕಳು ತೊಡಗಿರುವುದನ್ನು ನೋಡಿದ ಗ್ರಾಮಸ್ಥರು ರೊಚ್ಚಿಗೆದ್ದು ರಾಜಶೇಖರ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಡಿಡಿಪಿಐಗೆ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.