ತುಮಕೂರು

ಕೈಗಾರಿಕೆಗಳಿಗೆ ಗೋಮಾಳ: ಸಮರ್ಥನೆ

Published On :

ಚಿಕ್ಕನಾಯಕನಹಳ್ಳಿ: ಕೈಗಾರಿಕೆಗಳಿಗೆ ಸರ್ಕಾರಿ ಗೋಮಾಳ ವಿತರಿಸುವುದು ತಪ್ಪಲ್ಲ ಎಂದು ಶಾಸಕ ಸಿ.ಬಿ. ಸುರೇಶ್‌ಬಾಬು ಸಚಿವರ ಹೇಳಿಕೆಯನ್ನು ಸಮರ್ಥಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಟ್ಟಣದ ಸಮೀಪದಲ್ಲಿರುವ 5 ಎಕರೆ ಗೋಮಾಳವನ್ನು ರಾಜ್ಯಸಾರಿಗೆ ಸಂಸ್ಥೆಯ ಡಿಪೋಗಾಗಿ ಬಿಟ್ಟುಕೊಡಲು ಸಮ್ಮತಿಸಿರುವ ಉದಾಹರಣೆ ನೀಡಿ ಹೆಚ್ಚುವರಿಯಿರುವ ಭೂಮಿಯನ್ನು ನೀಡುವುದರಿಂದ ಕೈಗಾರಿಕೆಗೆ ಪ್ರೋತ್ಸಾಹ ನೀಡಿದಂತಾಗುವುದು. ಇದರಿಂದ ಗ್ರಾಮೀಣ ಭಾಗದ ಜನ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಸಹಕಾರಿಯಾಗುತ್ತದೆ ಎಂದರು.
ಸಾರಿಗೆ ಸಂಸ್ಥೆ ಸರ್ಕಾರಿ ಸಂಸ್ಥೆ. ಆದರೆ ಖಾಸಗಿಯವರಿಗೆ ನೀಡುವುದರಿಂದ ಈಗಾಗಲೇ ಗೋಮಾಳಗಳಲ್ಲಿ ಅನುಭವದಲ್ಲಿರುವ ರೈತರನ್ನು ಹೇಗೆ ಬಿಡಿಸಲು ಸಾಧ್ಯ ಎಂದು ಪ್ರಶ್ನಿಸಿದಾಗ ಶಾಸಕರು ಉತ್ತರಿಸಲು ತಡವರಿಸಿದರು.
ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯಿಲ್ಲ. ಇತ್ತೀಚೆಗೆ ಬಂದ ಮಳೆಯಿಂದ ತಾಲೂಕಿನಲ್ಲಿ 80  ವಿದ್ಯುತ್ ಪರಿವರ್ತಕಗಳು ಹಾಳಾಗಿದ್ದು, ಬದಲಾಯಿಸಲು ಇಲಾಖೆಗೆ ಸೂಚಿಸಿದ್ದೇನೆ. ಏಪ್ರಿಲ್‌ನಿಂದ ಖಾತ್ರಿ ಕಾಮಗಾರಿ ಪ್ರಾರಂಭವಾಗಿದೆ. 12ರಂದು ತುಮಕೂರಿಗೆ ಆರೋಗ್ಯ ಸಚಿವ ಯು.ಟಿ. ಖಾದರ್‌ರವರು ಬರಲಿದ್ದು, ಆರೋಗ್ಯ ಇಲಾಖೆಯ ಖಾಲಿಹುದ್ದೆಗಳ ಭರ್ತಿಗೆ ಮನವಿ ಸಲ್ಲಿಸಲಾಗುವುದು ಎಂದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.