ತುಮಕೂರು

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿ ಅಸ್ವಸ್ಥ

Published On :

ಶಿರಾ: ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು, ಹನುಮಂತರಾಯಪ್ಪ ಎಂಬವರ ಮೇಲೆ ದೊಡ್ಡಬಾಣಗೆರೆ ಗ್ರಾಪಂ ಉಪಾಧ್ಯಕ್ಷ ದೊಣ್ಣೆಯಿಂದ ಹೊಡೆದು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ತಾಲೂಕಿನ ಕರೇತಿಮ್ಮನಹಳ್ಳಿಯಲ್ಲಿ ನಡೆದಿದೆ.
ದೊಡ್ಡಬಾಣಗೆರೆ ಗ್ರಾಪಂ ಉಪಾಧ್ಯಕ್ಷ ಗುಜ್ಜಾರಪ್ಪ, ಅಶ್ವಥನಾರಯಣನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದ  ಸಂಧರ್ಭದಲ್ಲಿ ಮಗನ ನೆರವಿಗೆ ಬಂದ ತಂದೆ ಹನುಮಂತರಾಯಪ್ಪ ತಲೆಗೆ ದೊಣ್ಣೆಯಿಂದ ಹೊಡೆದಿದ್ದಾನೆ ಎನ್ನಲಾಗಿದ್ದು, ಹನುಮಂತರಾಯಪ್ಪ ಗಂಭೀರವಾಗಿ ಗಾಯಗೊಂಡಿದ್ದು, ಶಿರಾ ಅಸ್ಪತ್ರೆಗೆ ಸಾಗಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ನಿಮಾನ್ಸ್ ಅಸ್ಪತ್ರೆ ದಾಖಲಿಸಲಾಗಿದೆ. ಪಟ್ಟನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡಿರುವ ಆರೋಪಿ ಗುಜ್ಜಾರಪ್ಪ ಬಂಧನಕ್ಕೆ ಪೊಲೀಸರು ಬಲೆ ಬಿಸಿದ್ದಾರೆ.




ಜೂಜು ಅಡ್ಡೆ ಮೇಲೆ ದಾಳಿ
ಶಿರಾ: ತಾಲೂಕಿನ ರಂಗಾಪುರ ಗ್ರಾಮದ ಕರಿಯಮ್ಮ ದೇವಸ್ಥಾನದ ಹಿಂಭಾಗ ಜೂಜು ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಪಟ್ಟನಾಯಕನಹಳ್ಳಿ ಪೊಲೀಸರು ರಂಗದಾಸಪ್ಪ, ಬೋಜ, ರಮೇಶ, ಹನುಮಂತಪ್ಪ, ರಾಮಣ್ಣ, ನಾರಾಯಣಪ್ಪ ಎಂಬವರನ್ನು ಬಂಧಿಸಿ, ಪಣಕ್ಕಿಟ್ಟಿದ್ದ ಹಣ ವಶಪಡಿಸಿ ಪ್ರಕರಣ ದಾಖಲಿಸಿದ್ದಾರೆ. ಪಿಎಸೈ ವಿ. ನಿರ್ಮಲ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.