ತುಮಕೂರು

ಎಸ್ಸೆಸ್ಸೆಲ್ಸಿ: ಜಿಲ್ಲೆಗೆ 9ನೇ ಸ್ಥಾನ

Published On :

ಕ.ಪ್ರ.ವಾರ್ತೆ    ತುಮಕೂರು    ಮೇ 12
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆ ಈ ಬಾರಿ 86.83 ಫಲಿತಾಂಶ ಪಡೆಯುವ ಮೂಲಕ ಉತ್ತಮ ಸಾಧನೆ ಮಾಡಿದೆ.
ಕಲೆದ ಬಾರಿ 83.98 ಫಲಿತಾಂಶದೊಂದಿಗೆ 10ನೇ ಸ್ಥಾನ ಪಡೆದಿದ್ದ ತುಮಕೂರು ಈ ಬಾರಿ 9ನೇ ಸ್ಥಾನಕ್ಕೆ ಏರಿದೆ. ಕಳೆದ ಸಲದ ಪರೀಕ್ಷೆಯಲ್ಲಿ ಕಡಿಮೆ ಫಲಿತಾಂಶ ಬಂದ ಶಾಲೆಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಲಾಗಿತ್ತು. ತಾಲೂಕು ಮಟ್ಟದಲ್ಲಿ ಅಂತಹ ಶಾಲೆಗಳಿಗೆ ಉಸ್ತುವಾರಿ ಅಧಿಕಾರಿಗಳನ್ನು ನೇಮಿಸಲಾಗಿತ್ತು.
ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಈ ಬಾರಿ 24059 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಇದರಲ್ಲಿ 20890 ಮಂದಿ ಉತ್ತೀರ್ಣರಾಗಿದ್ದಾರೆ. 1397 ಮಂದಿ ಅತ್ಯುನ್ನತ, 9355 ಪ್ರಥಮ ದರ್ಜೆ, 4809 ಮಂದಿ ದ್ವಿತೀಯ ಹಾಗೂ 6494 ಮಂದಿ ಸಾಮಾನ್ಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ ಎಂದು ಡಿಡಿಪಿಐ ಈಶ್ವರಯ್ಯ ಮಾಹಿತಿ ನೀಡಿದರು.
ತುಮಕೂರು ನಗರದಲ್ಲಿ ಒಟ್ಟು 8831 ಮಂದಿ ಬಾಲಕಿಯರು ಪರೀಕ್ಷೆಗೆ ಕುಳಿತಿದ್ದು ಅವರಲ್ಲಿ 7651 ಮಂದಿ ಉತ್ತೀರ್ಣರಾಗಿದ್ದಾರೆ. ಈ ಮೂಲಕ 86.64 ಫಲಿತಾಂಶ ಲಭಿಸಿದೆ. ಹಾಗೆಯೇ ಗ್ರಾಮೀಣ ಭಾಗದಲ್ಲಿ 4077 ಮಂದಿ ಪರೀಕ್ಷೆಗೆ ಕುಳಿತಿದ್ದು ಇವರಲ್ಲಿ 3298 ಮಂದಿ ಉತ್ತೀರ್ಣರಾಗಿದ್ದು ಶೇ. 80.89 ಫಲಿತಾಂಶ ಲಭಿಸಿದೆ.
ಇನ್ನು ಬಾಲಕರಲ್ಲಿ ನಗರ ಪ್ರದೇಶದಲ್ಲಿ 7237 ಮಂದಿ ಪರೀಕ್ಷೆಗೆ ಕುಳಿತಿದ್ದು ಇವರಲ್ಲಿ 6609 ಮಂದಿ ಉತ್ತೀರ್ಣರಾಗಿ ಶೇ. 91.32 ಫಲಿತಾಂಶ ಬಂದಿದೆ. ಹಾಗೆಯೇ ಗ್ರಾಮೀಣ ಭಾಗದಲ್ಲಿ 3914 ಮಂದಿ ಪರೀಕ್ಷೆಗೆ ಕುಳಿತಿದ್ದು ಇವರಲ್ಲಿ 3332 ಮಂದಿ ಉತ್ತೀರ್ಣರಾಗಿದ್ದು ಶೇ. 85.13 ಫಲಿತಾಂಶ ಲಭಿಸಿದೆ.
ನಗರದ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ಅರ್ಪಿತ್ ಕಷ್ಯಪ್.ಜೆ.ಎ 618 ಅಂಕ ಪಡೆದಿದ್ದಾರೆ. ಪಿ. ಶೃತಿ 611 ಹಾಗೂ ನಾಗಶ್ರೀ 608 ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.