ತುಮಕೂರು

'ಪ್ರತಿಭೆ ಅನಾವರಣಕ್ಕೆ ಶಿಬಿರ ಅಗತ್ಯ'

Published On :


ತಿಪಟೂರು: ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣ ಮಾಡುವಲ್ಲಿ ಬೇಸಿಗೆ ಶಿಬಿರ ಮಹತ್ವಕಾರಿ ಕೆಲಸ ನಿರ್ವಹಿಸುತ್ತವೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷೆ ಶಿವಗಂಗಮ್ಮ ತಿಳಿಸಿದರು.
ತಾಲೂಕಿನ ಕೊನೇಹಳ್ಳಿ ಮೂಡಲಪಾಯ ಯಕ್ಷಗಾನ ಕೇಂದ್ರದಲ್ಲಿ ಬಾಲಭವನ ಸೊಸೈಟಿ ಬೆಂಗಳೂರು,ತಾಲ್ಲೂಕು ಬಾಲಭವನ ಸಮಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಭೂಮಿ ಸಾಂಸ್ಕೃತಿಕ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಕೊಂಡಿದ್ದ 6ರಿಂದ 16ವರ್ಷದೊಳಗಿನ ತಾಲ್ಲೂಕಿನ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಇಂತಹ ಶಿಬಿರಗಳಿಗೆ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆಗಳನ್ನು ಗುರುತಿಸಿಕೊಂಡು ಒಬ್ಬ ಉತ್ತಮ ವ್ಯಕ್ತಿಯಾಗಿ ಹೊರಹೊಮ್ಮಬೇಕು. ಆದ್ದರಿಂದ ಪೋಷಕರು ಶಿಬಿರಕ್ಕೆ ತಮ್ಮ ಮಕ್ಕಳನ್ನು ಕಳುಹಿಸುವ ಮೂಲಕ ಬೌದ್ಧಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಕರಿಸಬೇಕೆಂದು ತಿಳಿಸಿದರು.
ಗ್ರಾಪಂ ಅಧ್ಯಕ್ಷ ಮಲ್ಲೇಶಯ್ಯ ಅಧ್ಯಕ್ಷತೆ ವಹಿಸಿದ್ದರು. ಗ್ರಾಪಂ ಸದಸ್ಯರಾದ ಪರಮೇಶ್ವರಪ್ಪ, ಉಮೇಶ್ಭಟ್, ಭೂಮಿ ರಂಗ ಅಧ್ಯಯನ ಕೇಂದ್ರದ ವ್ಯವಸ್ಥಾಪಕ ಸತೀಶ್, ಡಾ.ಸ್ವಾಮಿ, ಎಸಿಡಿಪಿಒ ಸುಂದರಮ್ಮ ಮಾತನಾಡಿದರು.
ಶಾಲಾ ಮುಖ್ಯೋಪಾಧ್ಯಾಯ ಬಾನೇಗೌಡ, ಭಾಗವತರಾದ ಬಸವರಾಜು, ನಂಜಪ್ಪ,ಅಂಚೆಕೊಪ್ಪಲು ಶಂಕರಣ್ಣ, ತಮ್ಮಯ್ಯ, ಮೇಲ್ವಿಚಾರಕಿಯರಾದ ಮಂಜುಳಾದೇವಿ,ದೀಪಾಕಮತೆ, ಪದ್ಮಾ, ರಾಧ, ಸುವರ್ಣಮ್ಮ, ಭಾಗ್ಯಮ್ಮ ಮತ್ತಿತರರಿದ್ದರು.
ಶಿಬಿರದಲ್ಲಿ 60ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿ ಸೃಜನಾತ್ಮಕ ಚಟುವಟಿಕೆ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಯಿತು. ಪ್ರಥಮ ದರ್ಜೆ ಸಹಾಯಕ ಎಸ್.ಗೋಪಾಲಪ್ಪ ಸ್ವಾಗತಿಸಿ, ಬಿ.ಎನ್.ಪ್ರೇಮ ನಿರೂಪಿಸಿ, ಮೇಲ್ವಿಚಾರಕಿ ಬಸಮ್ಮ ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.