ಗುಬ್ಬಿ ತಾಲೂಕಿಗೆ ಶೇ. 86 ಫಲಿತಾಂಶ
ಗುಬ್ಬಿ: ಈ ಬಾರಿಯ ಪರೀಕ್ಷೆಯಲ್ಲಿ ತಾಲೂಕಿನ ವಿವಿಧ ಪ್ರೌಢಶಾಲೆಗಳಿಂದ 3547 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ತೆಗೆದುಕೊಂಡಿದ್ದು, ಅದರಲ್ಲಿ 3068 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ತಾಲೂಕಿಗೆ ಶೇ.86.49 ರಷ್ಟು ಫಲಿತಾಂಶ ದೊರೆತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಬಸವರಾಜು ತಿಳಿಸಿದ್ದಾರೆ.
1773 ಬಾಲಕರು, 1774 ಬಾಲಕೀಯರು ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆದಿದ್ದು, ಈ ಪೈಕಿ 1573 ಬಾಲಕರು, 1495 ಬಾಲಕಿಯರು ತೇರ್ಗಡೆಯಾಗಿದ್ದಾರೆ, 149 ಅತ್ಯುನ್ನತ ಶ್ರೇಣಿ, 1243 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 725 ದ್ವಿತೀಯ ಶ್ರೇಣಿ ಹಾಗೂ 969 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
ತಾಲೂಕಿನ 10 ಪ್ರೌಢಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಈ ಪೈಕಿ ಸರ್ಕಾರಿ ಪ್ರೌಢಶಾಲೆ ಅಂಕಸಂದ್ರ, ಕಲ್ಲರ್ದಗೆರೆ, ಮೊರಾರ್ಜಿ ವಸತಿ ಶಾಲೆ ಹೂವಿನ ಕಟ್ಟೆ, ಮೊರಾರ್ಜಿ ವಸತಿ ಶಾಲೆ ಬಿಕ್ಕೆಗುಡ್ಡ, ಹೇರೂರಿನ ಕಿತ್ತೂರುರಾಣಿ ಚೆನ್ನಮ್ಮ ವಸತಿ ಶಾಲೆಗಳು ಶೇ.100 ಫಲಿತಾಂಶ ಪಡೆದುಕೊಂಡಿವೆ. ಖಾಸಗಿ ಪ್ರೌಢಶಾಲೆಗಳ ಪೈಕಿ ಎಂ.ಎಂ.ಕಾವಲ್ನ ಮಣ್ಣಮ್ಮ ಪ್ರೌಢಶಾಲೆ, ದೊಡ್ಡಗುಣಿಯ ಮಲ್ಲಿಕಾರ್ಜುನ ಪ್ರೌಢಶಾಲೆ, ನಿಟ್ಟೂರಿನ ಸಿದ್ದಶ್ರೀ ಪ್ರೌಢಶಾಲೆ, ಅತ್ತಿಕಟ್ಟೆಯ ಶಂಕರೇಶ್ವರ ಪ್ರೌಢಶಾಲೆಗಳು ಶೇ 100 ಫಲಿತಾಂಶ ಪಡೆದಿವೆ.
ಇಂದು ವ್ಯಾಸ ಬುದ್ಧ ಪೂರ್ಣಿಮೆ
ಮಳವಳ್ಳಿ: ಬಾಬಾ ಸಾಹೇಬ್ ಅಂಬೇಡ್ಕರ್ ವಿಚಾರ ವೇದಿಕೆವತಿಯಿಂದ ಮೇ 14ರಂದು ವ್ಯಾಸ ಬುದ್ಧ ಪೂರ್ಣಿಮೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ವಿಚಾರವೇದಿಕೆಯ ಡಾ.ಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬುಧುವಾರ ಬೆಳಗ್ಗೆ 9.30ಕ್ಕೆ ವ್ಯಾಸ ಬುದ್ಧ ಪೂರ್ಣಿಮೆ ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

