ವಸತಿ ನಿಲಯಕ್ಕೆ ಅರ್ಜಿ ಆಹ್ವಾನ
ಗುಬ್ಬಿ: ತಾಲೂಕಿನ ಅಮ್ಮನಘಟ್ಟ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ರುವ ಕಸ್ತೂರಬಾ ಗಾಂಧಿ ಬಾಲಕಿಯರ ವಸತಿ ನಿಲಯಕ್ಕೆ 2014-15 ನೇ ಶೈಕ್ಷಣಿಕ ವರ್ಷಕ್ಕೆ ಉಚಿತ ಪ್ರವೇಶ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ 6 ರಿಂದ 10 ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು
ಮೇ 31ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಪ್ರವೇಶ ಅರ್ಜಿಯನ್ನು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ ಶಾಲಾ ಅವಧಿಯಲ್ಲಿ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಬಸವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ, ದೂ. 94806-95353, 99452-85753 ಇಲ್ಲಿಗೆ ಸಂಪರ್ಕಿಸುವಂತೆ ಕೋರಲಾಗಿದೆ.
ಬೇಸಿಗೆ ಶಿಬಿರ
ಮಧುಗಿರಿ: ರಾಜ್ಯ ಬಾಲ ಭವನ ಬೆಂಗಳೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಧುಗಿರಿ ಸಂಯುಕ್ತಶ್ರಾಯದಲ್ಲಿ ಮೇ 19 ರಿಂದ 10 ದಿನಗಳ ಕಾಲ 6ರಿಂದ 14 ವರ್ಷದೊಳಗಿನ ಮಕ್ಕ ಶಿಬಿರವನ್ನು ಪಟ್ಟಣದ ಸರ್ಕಾರಿ ಬಾಲಕರ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಿಡಿಪಿಒ ಸೋಮಸುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಶಿಬಿರದಲ್ಲಿ ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ, ಸಮೂಹ ನತ್ಯ ಗೀತೆ, ಗೊಂಬೆ ತಯಾರಿಕೆ, ರಂಗೋಲಿ, ಎಂಬ್ರಾಯಿಡರಿ, ಯೋಗ, ಮೆಹಂದಿ, ಹೂ ತಯಾರಿಕೆ ಬಗ್ಗೆ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡಲಾಗುವುದು. ಆಸಕ್ತ ಮಕ್ಕಳು ಮೇ 19 ರ ಒಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಧುಗಿರಿ ಹೆಸರು ನೋಂದಾಯಿಸಬಹುದು.
ಟಿಕೆಟ್ ಆಕಾಂಕ್ಷಿ
ತುಮಕೂರು: ಮುಂದಿನ ಜೂನ್ನಲ್ಲಿ ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗೆ ತಾವೂ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿರುವುದಾಗಿ ರಾಜ್ಯ ಜೆಡಿಎಸ್ ವಕೀಲರ ಸಂಘದ ರಮೇಶ್ ಬಾಬು ತಿಳಿಸಿದರು. ಈ ಸಂಬಂಧ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ವಿಧಾನ ಪರಿಷತ್ಗೆ ಆಗ್ನೇಯ ಪದವೀಧರ ಕ್ಷೇತ್ರದ ಸದಸ್ಯತ್ವಕ್ಕೆ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಜಿಲ್ಲೆಯಿಂದ ಎಸ್.ಮಲ್ಲಿಕಾರ್ಜುನಯ್ಯ ನಂತರ ಬೇರೆ ಯಾರಿಗೂ ಪರಿಷತ್ ಪ್ರತಿನಿಧಿಸುವ ಅವಕಾಶ ಸಿಕ್ಕಿಲ್ಲ. ಜಿಲ್ಲೆಯಲ್ಲಿ 25 ಸಾವಿರಕ್ಕೂ ಹೆಚ್ಚು ಮತದಾರರಿದ್ದು, ತಮಗೆ ಆಶೀರ್ವದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಚುನಾವಣಾ ಆಯೋಗ ಮತದಾರ ಪಟ್ಟಿ ಪರಿಷ್ಕರಣೆಗೆ ನಿರಂತರ ಅವಕಾಶ ಕಲ್ಪಿಸಿದ್ದು ಪದವೀಧರರ ಪಟ್ಟಿಗೆ ಸೇರ್ಪಡೆಯಾಗಬಹುದು ಎಂದು ತಿಳಿಸಿದರು.
ಅನುದಾನ ರಹಿತ ಕಾಜೇಜುಗಳ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ, ಜೆಡಿಎಸ್ ಜಿಲ್ಲಾ ವಕ್ತಾರ ಮಲ್ಲಿಕಾರ್ಜುನ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

