ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100
ಪಾವಗಡ: ಪಟ್ಟಣದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100ರಷ್ಟು ಮತ್ತು ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಶೇ.93.18ರಷ್ಟು ಪರೀಕ್ಷಾ ಫಲಿತಾಂಶ ಬಂದಿರುವುದಾಗಿ ವಸತಿ ಶಾಲೆಗಳ ಪ್ರಾಂಶುಪಾಲ ಸುರೇಶ್ ಅವರು ತಿಳಿಸಿದ್ದಾರೆ. ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಟ್ಟಣದ ಹೊರವಲಯದಲ್ಲಿರುವ ಕಣಿವೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಶೇ.100ರಷ್ಟು ಫಲಿತಾಂಶ ಬಂದಿದ್ದು ಅತ್ಯುನ್ನತ ಶ್ರೇಣಿಯಲ್ಲಿ 5ಮಂದಿ ಮತ್ತು ಪ್ರಥಮ ಶ್ರೇಣಿಯಲ್ಲಿ 31ಮಂದಿ ಮತ್ತು ದ್ವಿತೀಯ ಶ್ರೇಣಿಯಲ್ಲಿ 6ಮಂದಿ ವಿದ್ಯಾರ್ಥಿಗಳು ಸೇರಿದಂತೆ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ಪಾಸಾಗಿರುವುದಾಗಿ ಅವರು ತಿಳಿಸಿದ್ದಾರೆ. ಹಾಗೆಯೇ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಪ್ರಸಕ್ತ ಸಾಲಿನಲ್ಲಿ ಶೇ.93.18ರಷ್ಟು ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಬಂದಿದ್ದು ಅತ್ಯುನ್ನತ ಶ್ರೇಣಿಯಲ್ಲಿ 3ಮಂದಿ ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ 28, ದ್ವಿತೀಯ ಶ್ರೇಣಿಯಲ್ಲಿ 5ಮಂದಿ ವಿದ್ಯಾರ್ಥಿಗಳು ಪಾಸಾಗಿರುವುದಾಗಿ ಅವರು ತಿಳಿಸಿದ್ದಾರೆ. ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸಾದ ಎಲ್ಲಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳನ್ನು ವಸತಿ ಶಾಲೆಗಳ ಪ್ರಾಂಶುಪಾಲ ಸುರೇಶ್ ಮತ್ತು ಶಾಲೆಯ ಸಿಬ್ಬಂದಿ ವರ್ಗ ಅಭಿನಂದಿಸಿದೆ.
ಜ್ಞಾನಪೀಠ ಪ್ರೌಢಶಾಲೆಗೆ 82ರ್
ಚಿಕ್ಕನಾಯಕನಹಳ್ಳಿ: ಪಟ್ಟಣದ ಜ್ಞಾನಪೀಠ ಪ್ರೌಢಶಾಲೆಗೆ ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.82ರಷ್ಟು ಫಲಿತಾಂಶ ದೊರೆತಿದೆ ಎಂದು ಮುಖ್ಯೋಪಾಧ್ಯಾಯ ಗೋವಿಂದರಾಜು ತಿಳಿಸಿದ್ದಾರೆ. ಅವರು ಪತ್ರಿಕಾ ಹೇಳಿಕೆ ನೀಡಿ ಪರೀಕ್ಷೆಗೆ ಕುಳಿತಿದ್ದ 37 ವಿದ್ಯಾರ್ಥಿಗಳ ಪೈಕಿ 30 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ಇದರಲ್ಲಿ 1ಅತ್ಯುನ್ನತ, 1 ಪ್ರಥಮಸ್ಥಾನ ಪಡೆದಿದ್ದು, ಉಳಿದ ವಿದ್ಯಾರ್ಥಿಗಳು ಉತ್ತಮ ಅಂಕ ಪಡೆದು ತೇರ್ಗಡೆ ಹೊಂದಿದ್ದಾರೆಂದು ತಿಳಿಸಿದ್ದಾರೆ. ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳನ್ನು ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.
ಜನತಾ ಪ್ರೌಢಶಾಲೆಗೆ 96ರ್
ಚಿಕ್ಕನಾಯಕನಹಳ್ಳಿ: ತಾಲೂಕಿನ ಶೆಟ್ಟೀಕೆರೆಯಲ್ಲಿರುವ ಜನತಾ ಪ್ರೌಢಶಾಲೆಗೆ ಶೇ.96 ಫಲಿತಾಂಶ ಬಂದಿದೆ ಎಂದು ಮುಖ್ಯೋಪಾಧ್ಯಾಯರಾದ ಸಿ.ಎಸ್. ಬಸವರಾಜು ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯ 51 ಮಕ್ಕಳು ಕುಳಿತಿದ್ದು, ಅವರಲ್ಲಿ ಒಟ್ಟು 49 ಮಕ್ಕಳು ಉತ್ತೀರ್ಣರಾಗಿದ್ದಾರೆ. ಅತ್ಯುತ್ತಮ 1, ಪ್ರಥಮ ದರ್ಜೆ 18, ದ್ವಿತೀಯ 20, ಸಾಮಾನ್ಯ ದರ್ಜೆಯಲ್ಲಿ 10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸಾಕ್ಷಿಹಳ್ಳಿ ಪ್ರೌಢಶಾಲೆಗೆ 100ರ್
ಶಿರಾ: ತಾಲೂಕಿನ ಬುಕ್ಕಾಪಟ್ಟಣ ಹೋಬಳಿಯ ಸಾಕ್ಷಿಹಳ್ಳಿ ಗ್ರಾಮದ ಪ್ರೌಢಶಾಲೆಗೆ ಈ ಬಾರಿ ಶೇ 100. ರಷ್ಟು ಫಲಿತಾಂಶ ದೊರಕಿದ್ದು, ಶಾಲಾ ಮುಖ್ಯೋಪಾಧ್ಯಾಯ ವಿಜಯಕುಮಾರ್ ಹರ್ಷ ವ್ಯಕ್ತಪಡಿಸಿದರು. ಈ ಶಾಲೆಯಲ್ಲಿ ಒಟ್ಟು 32 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಇದರಲಿ 18 ಮಂದಿ ಪ್ರಥಮ, 7 ಮಂದಿ ದ್ವಿತೀಯ ಹಾಗೂ 7 ಮಂದಿ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ದಾಖಲೆ ಫಲಿತಾಂಶ
ಶಿರಾ: ತಾಲೂಕಿನ ಬುಕ್ಕಾಪಟ್ಟಣದಲ್ಲಿನ ಆಕ್ಸ್ಫರ್ಡ್ ಪ್ರೌಢಶಾಲೆಗೆ ಈ ಬಾರಿ ದಾಖಲೆ ಫಲಿತಾಂಶ ದೊರಕಿದ್ದು, ಸತತವಾಗಿ ನಾಲ್ಕನೇ ವರ್ಷವೂ 100 ಕ್ಕೆ 100 ರಷ್ಟು ಫಲಿತಾಂಶ ಪಡೆದುಕೊಂಡಿದೆ. ಪ್ರಸಕ್ತ ಸಾಲಿನಲ್ಲಿ 23 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು 11 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 11 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉಳಿದ ಒಬ್ಬ ವಿದ್ಯಾರ್ಥಿಯು ದ್ವಿತೀಯ ದರ್ಜೆಯಲ್ಲಿ ಪಾಸಾಗಿದ್ದಾನೆ. ಗೌತಮಿ (591), ಯಮುನಾ (595), ಕೃತಿಕಾ (597), ಅಂಕಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಶ್ರೀನಿವಾಸ ಪ್ರೌಢಶಾಲೆ 100ರ್
ಶಿರಾ: ಶಿರಾ ಸಮೀಪದ ಹುಯಿಲ್ದೊರೆ ಗ್ರಾಮದಲ್ಲಿನ ಶ್ರೀನಿವಾಸ ವಿದ್ಯಾವರ್ಧಕ ಪ್ರೌಢಶಾಲೆಯು ಈ ವರ್ಷ ಶೇ. 100 ಫಲಿತಾಂಶ ಪಡೆದಿದ್ದು, ಒಟ್ಟು 56 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ ಇದರಲ್ಲಿ ಒಬ್ಬ ಅತ್ಯುನ್ನತ ಶ್ರೇಣಿ, 15 ಪ್ರಥಮ ದರ್ಜೆ, 16 ದ್ವಿತೀಯ ದರ್ಜೆ ಹಾಗೂ ಉಳಿದ 24 ತೃತೀಯ ದರ್ಜೆ ಫಲಿತಾಂಶ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಮುಖ್ಯ ಶಿಕ್ಷಕ ಶಾಸಮರು ನಾಗರಾಜುರವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

