ಭರವಸೆ ನೀಡದೆ ಕೆಲಸ ಮಾಡುವೆ
ಕ.ಪ್ರ. ವಾರ್ತೆ, ಚಿತ್ರದುರ್ಗ, ಮೇ 16
ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏನು ಆಗಬೇಕೆಂಬುದು ಗೊತ್ತಿದೆ. ಅದನ್ನು ಹೇಳುವುದಿಲ್ಲ, ಮಾಡಿ ತೋರಿಸುತ್ತೇನೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಇಲ್ಲದಿದ್ದರೆ ಏನಂತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ಸರ್ಕಾರದ ನೆರವಿನಿಂದ ಕೆಲಸ ಮಾಡಿಸಲಾಗುವುದು ಎಂದು ಸಂಸದರಾಗಿ ಆಯ್ಕೆಯಾದ ಕಾಂಗ್ರೆಸ್‌ನ ಬಿ.ಎನ್. ಚಂದ್ರಪ್ಪ ಹೇಳಿದರು.
ಸದಸ್ಯರಾಗಿ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗಲೇ ಯಾವುದೇ ಭರವಸೆಯನ್ನು ಮತದಾರರಿಗೆ ನೀಡುವುದಿಲ್ಲ. ಚುನಾವಣೆ ಸಮಯದಲ್ಲಿಯೂ ಮತದಾರರಿಗೆ ಯಾವುದೇ ಆಶ್ವಾಸನೆ ನೀಡದೆ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರವಾಗಿ ಮುಗಿಸುವುದು ನನ್ನ ಗುರಿಯಾಗಿದ್ದು, ಈ ಭಾಗದ ಜನತೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಲಾಗುವುದೆಂದು ಹೇಳಿದರು.
ನನ್ನ ಇಂದಿನ ಗೆಲವಿಗೆ ಕ್ಷೇತ್ರದ ಮತದಾರರು, ಇಬ್ಬರು ಸಚಿವರು, ಹಾಲಿ ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರ ಶ್ರಮ ಇದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

