ತುಮಕೂರು

ಕಾರ್ಯಕರ್ತರ ವಿಜಯೋತ್ಸವ

Published On :

ತುರುವೇಕೆರೆ: ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದ ಹನುಮೇಗೌಡರವರು ಗೆಲವಿನ ನಗೆ ಬೀರಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚಿ ಸಂಭ್ರಮಿಸಿದರು.
ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ಹಿರಿಯ ಕಾಂಗ್ರೆಸ್ ಮುಖಂಡ ಚೌದ್ರಿ ಟಿ ರಂಗಪ್ಪ ನವರ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಪಕ್ಷದ ಮುಖಂಡರಿಗೆ ಜಯಘೋಷ ಹಾಕಿ ಸಂತಸಪಟ್ಟರು. ಹಿರಿಯ ಮುಖಂಡ ಚೌದ್ರಿ ಟಿ ರಂಗಪ್ಪ ಮಾತನಾಡಿ ಮುದ್ದ ಹನುಮೇಗೌಡರ ಸರಳತೆ ಹಾಗೂ ಪ್ರಾಮಾಣಿಕತೆಗೆ ಜಿಲ್ಲೆಯ ಜನತೆ ಬೆಂಬಲಿಸಿದೆ. ತಾಲ್ಲೂಕಿನಲ್ಲೂ ಕಾಂಗ್ರೆಸ್ ಪ್ರಥಮ ಸ್ಥಾನ ಗಳಿಸಿದ್ದು ಹೆಮ್ಮೆ ತಂದಿದೆ.
ಸುಮಾರು 50 ಸಾವಿರಕ್ಕೂ ಹೆಚ್ಚು ಮತದಾರರು ಕಾಂಗ್ರೆಸ್‌ಗೆ ಒಲವು ನೀಡಿರುವುದು ಆಶಾದಾಯಕವಾಗಿದೆ ಎಂದರು. ಮುಖಂಡರಾದ ಕೆಪಿಸಿಸಿ ಸದಸ್ಯ ಹಾಗೂ ಮಾಜಿ ಶಾಸಕ ಎಸ್.ರುದ್ರಪ್ಪ, ಜಿಲ್ಲಾ ಪಂಚಾಯ್ತಿ ಸದಸ್ಯ ಉಗ್ರಪ್ಪ, ಪಟ್ಟಣ ಪಂಚಾಯ್ತಿ ಸದಸ್ಯ ಶ್ರೀನಿವಾಸ್, ಮಹೇಶ್, ಕೋಳಾಲ ನಾಗರಾಜು, ಶಿವರಾಜು, ದೊರೆಸ್ವಾಮಿ, ನಟರಾಜು ಮೊದಲಾದವರು ಸಂಭ್ರಮಾಚರಣೆಯಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.