ಬೆಂಗಳೂರಿನ ವ್ಯಕ್ತಿ ಅಸ್ತೂರಿನಲ್ಲಿ ಮರಕ್ಕೆ ನೇಣು
ಹನೂರು: ಬೆಂಗಳೂರಿನ ನಿವಾಸಿಯೊಬ್ಬರು ಸನಿಹದ ಅಸ್ತೂರು ಗ್ರಾಮದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ನಿವಾಸಿ ವಿಜಯೇಂದ್ರ (44) ಎನ್ನುವವರು ಆತ್ಮಹತ್ಯೆ ಮಾಡಿಕೊಂಡವರು. ಪೊನ್ನಾಚಿ ಮತ್ತು ಅಸ್ತೂರು ಗ್ರಾಮ ಮಾರ್ಗ ಮಧ್ಯದಲ್ಲಿನ ಮರಕ್ಕೆ ವಿಜಯೇಂದ್ರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ವಿಜಯೇಂದ್ರ ಹಾಗೂ ಪತ್ನಿ ವೀರಬಸಮ್ಮ ಬೆಂಗಳೂರಿನ ಖಾಸಗಿ ಬಟ್ಟೆ ಫ್ಯಾಕ್ಟರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕುಟುಂಬ ಕಲಹದಿಂದ ಪತ್ನಿ ವೀರಬಸಮ್ಮ ಅಸ್ತೂರು ಗ್ರಾಮದಲ್ಲಿದ್ದರು. ಪತ್ನಿ ನೋಡಲು ಬೆಂಗಳೂರಿನಿಂದ ಬಂದಿದ್ದ ಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ಥಳಕ್ಕೆ ವೃತ್ತನಿರೀಕ್ಷಕ ಮರಿಶೆಟ್ಟಿ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

