32ಪೊಲೀಸ್ ವಸತಿ ಗೃಹಕ್ಕೆ ರು. 57 ಲಕ್ಷ ಮಂಜೂರು
ಕೊರಟಗೆರೆ: ತಾಲೂಕಿನಲ್ಲಿ ಪೊಲೀಸರಿಗೆ ಸುರಕ್ಷಿತ ಸೂರು ಕಲ್ಪಿಸುವುದಕ್ಕಾಗಿ ಗೃಹಮಂತ್ರಿಗಳಿಗೆ ಮನವಿ ಮಾಡಿದ್ದೆ. ಈ ಹಿನ್ನಲೆಯಲ್ಲಿ ಈಗ 32 ಪೊಲೀಸ್ ವಸತಿ ಗೃಹಕ್ಕೆ 57 ಲಕ್ಷ ರು. ಮಂಜೂರಾಗಿ ಕಾಮಗಾರಿ ಪ್ರಾರಂಭವಾಗಿರುವುದಾಗಿ ಶಾಸಕ ಪಿ.ಆರ್. ಸುಧಾಕರ್ ಲಾಲ್ ತಿಳಿಸಿದರು. ಅವರು ಪೊಲೀಸ್ ವಸತಿ ಗೃಹ ದುರಸ್ಥಿ ಕಾಮಗಾರಿ ಪರಿಶೀಲಿಸಿ ಮಾತನಾಡಿ ನನ್ನ ಮನವಿಗೆ ಸರ್ಕಾರ ಸ್ಪಂದಿಸಿದೆ. ಈಗ ಕಾಮಗಾರಿಯನ್ನು ನಿರ್ಮಿತಿ ಕೇಂದ್ರ ನಿರ್ವಹಿಸುತ್ತಿದೆ. ಕಾಮಗಾರಿ ಪರಿಶೀಲ ಮಾಡಿದ್ದು ಮುಖ್ಯವಾಗಿ ವಸತಿ ಗೃಹಕ್ಕೆ ತುರ್ತಾಗಿ ಅವಶ್ಯವಿರುವಂತಹ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ. ಇದರಂತೆಯೇ ಕಾಮಗಾರಿ ಪ್ರಾರಂಭವಾಗಿದ್ದು ಕೆಲವೇ ದಿನಗಳಲ್ಲಿ ಪೊಲೀಸರಿಗೆ ಉತ್ತಮ ವಸತಿ ಗೃಹಗಳು ನಿರ್ಮಾಣವಾಗಲಿವೆ ಎಂದರು. ಶಾಸಕರೊಂದಿಗೆ ಜೆಡಿಎಸ್ ಕಾರ್ಯಾಧ್ಯಕ್ಷ ನರಸಿಂಹರಾಜು, ಮಾವತ್ತೂರು ಗ್ರಾ.ಪಂ ಅಧ್ಯಕ್ಷ, ಸಬ್ ಇನ್ಸ್ಪೆಕ್ಟರ್ ರವಿಕುಮಾರ್ ಸೇರಿದಂತೆ ಇತರೆ ಮುಖಂಡರುಗಳು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

