ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ವದ ಸಾಧನೆ
ಗುಬ್ಬಿ: ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರ, ಮಹಿಳೆಯರ ಸಣ್ಣ ಮತ್ತು ಅತೀ ಸಣ್ಣ ರೈತರನ್ನು ಸಂಘಟಿಸಿ ಸ್ವಾವಲಂಬನೆಯ ಜೊತೆಗೆ ಸ್ವಾಭಿಮಾನ ಬದುಕಿಗಾಗಿ ಜಿಲ್ಲೆಯಲ್ಲಿ 27481 ಪ್ರಗತಿಬಂಧು ಸ್ವಸಹಾಯ ಸಂಘಗಳ ರಚನೆ ಮಾಡಿದ್ದು ಒಟ್ಟು 2,80,000 ಸದಸ್ಯರು ಸೇರಿಕೊಂಡು ಈವರೆಗೆ ಒಟ್ಟು ರು.40 ಕೋಟಿ ಉಳಿತಾಯವನ್ನು ಮಾಡುವ ಮೂಲಕ ದಾಖಲೆ ಸೃಷ್ಟಿಸುವಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಮಹತ್ವದ ಸಾಧನೆ ಮಾಡಿದೆ ಎಂದು ಯೋಜನೆಯ ಜಿಲ್ಲಾ ನಿರ್ದೇಶಕ ಗಂಗಾಧರ ರೈ ತಿಳಿಸಿದರು.
ಗುಬ್ಬಿ ಪಟ್ಟಣದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ವರ್ಷದಲ್ಲಿ ಯೋಜನೆಯಡಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳ ಸಮಗ್ರ ವರದಿಯನ್ನು ವಿವರಿಸಿದರು. ಇಂದಿನ ಯುವಜನತೆ ಸಾಕಷ್ಟು ಮಂದಿ ದುರಭ್ಯಾಸಕ್ಕೆ ಬಲಿ ಬೀಳುವುದನ್ನು ತಪ್ಪಿಸುವದಕ್ಕೋಸ್ಕರ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಡಿಯಲ್ಲಿ 105 ಕಾಲೇಜಿನ 14455 ವಿದ್ಯಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಗಿದೆ ಎಂದರು.
ಸ್ವಉದ್ಯೋಗದ ದೃಷ್ಟಿಯಿಂದ ಮಾಹಿತಿ, ತರಬೇತಿಗಳನ್ನು ಪಡೆಯುವುದರ ಜೊತೆಗೆ ಸಾಲವನ್ನು ಕೂಡ ಪಡೆದು 16495 ಮಂದಿ ವಿವಿಧ ಉದ್ಯೋಗಗಳನ್ನು ಮಾಡುತ್ತಿರುವವರು ಎಂದ ಅವರು ಸ್ವಉದ್ಯೋಗಕ್ಕಾಗಿ ಇದುವರೆಗೆ 12.00 ಕೋಟಿ ಪ್ರಗತಿನಿಧಿ ಸಾಲವನ್ನು ಪಡೆದಿರುವರು. 1.15ಕೋಟಿ ಪ್ರಗತಿನಿಧಿ ವಿತರಿಸಲಾಗಿದೆ.ರೂ 50 ಲಕ್ಷ ನೇರವಾಗಿ ಅನುದಾನನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಿ.ಕೆ.ಪುರುಷೋತ್ತಮ್, ತಾಲೂಕು ನಿರ್ದೇಶಕ ಪ್ರವೀಣ್ ಕುಮಾರ್ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

