ತುಮಕೂರು

ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿ

Published On :

ಗುಬ್ಬಿ: ಇಂದಿನ ಸ್ಪರ್ಧಾತ್ಮಕಯುಗದಲ್ಲಿ ಮಕ್ಕಳಿಗೆ ಶೈಕ್ಷಣಿಕ ಪ್ರಗತಿಯ ಜೊತೆಗೆ ವಿವಿಧ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಬಗ್ಗೆ ಹೆಚ್ಚಿನ ಆಸಕ್ತಿ ಮೂಡಿಸುವತ್ತ ಬೇಸಿಗೆ ಶಿಬಿರಗಳು ಹೆಚ್ಚು ಸಹಕಾರಿಯಾಗುತ್ತವೆ ಎಂದು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿ ಎಸ್. ಪುಟ್ಟಸ್ವಾಮಿ ತಿಳಿಸಿದರು.
 ಪಟ್ಟಣದ ಸ್ತ್ರೀಶಕ್ತಿ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆವತಿಯಿಂದ ಆಯೋಜಿಸಿದ್ದ 10 ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ರಜೆ ಅವಧಿಯಲ್ಲಿ ಮಕ್ಕಳು ದೂರದರ್ಶನಗಳತ್ತ ವಾಲುವ ಸಂದರ್ಭದಲ್ಲಿ ಮಕ್ಕಳಿಗೆ ಗುಣಾತ್ಮಕ ಕೌಶಲ್ಯ ಮೂಡಿಸುವಂತಹ ಪಠ್ಯೇತರ ಚಟುವಟಿಕೆಗಳನ್ನು ಕಲಿಸಿಕೊಡುವ ಮೂಲಕ ಅವರನ್ನು ಸುಸಂಸ್ಕೃತರನ್ನಾಗಿಸಲು ಬೇಸಿಗೆ ಶಿಬಿರಗಳು ಹೆಚ್ಚು ಮಹತ್ವ ಪೂರ್ಣವಾಗುತ್ತವೆ ಎಂದರು.
ಹೊಸ ಆಯಾಮ: ಇಂದಿನ ಮಕ್ಕಳಿಗೆ ನಮ್ಮ ಸಂಸ್ಕೃತಿ ಪರಂಪರೆಗಳಂತಹ ಮಹತ್ವ ಪೂರ್ಣವಾದ ಕೌಶಲ್ಯಗಳು ಅತ್ಯವಶ್ಯಕವಿದ್ದು ಬೇಸಿಗೆ ಶಿಬಿರಗಳಲ್ಲಿ ಮಕ್ಕಳ ಬೌದ್ಧಿಕ ಮತ್ತು ಮಾನಸಿಕ ಬದುಕಿಗೆ ಪೂರಕವಾದ ಕಲೆ, ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಯಾಧಾರಿತ ತರಬೇತಿಗಳು ಮಕ್ಕಳಲ್ಲಿ ಹೊಸ ಆಯಾಮ ನೀಡಲಿವೆ ಎಂದ ಅವರು ಮಕ್ಕಳಲ್ಲಿ ಓದಿನ ಜೊತೆ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬೆಳವಣಿಗೆಗಳಿಗೆ ಪೂರಕವಾದ  ತರಬೇತಿಗಳ ಅವಶ್ಯಕತೆ ಇದ್ದು ಈ ನಿಟ್ಟಿನಲ್ಲಿ ಬೇಸಿಗೆ ಶಿಬಿರಗಳು ಹೆಚ್ಚು ಮಹತ್ವ ಪೂರ್ಣವಾಗಲಿದ್ದು ಮಕ್ಕಳು ಇಂತಹ ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗವಹಿಸುವ ಮೂಲಕ ಆದರ್ಶ ವ್ಯಕ್ತಿಗಳಾಗಿ ರೂಪುಗೊಳ್ಳುವಂತೆ ಕರೆ ನೀಡಿದರು.
Ú ಅಧ್ಯಕ್ಷತೆ ವಹಿಸಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೆ.ಆರ್. ಹೊನ್ನೇಶಪ್ಪ ಇಲಾಖೆವತಿಯಿಂದ 10 ದಿನಗಳ ಕಾಲ ಬೇಸಿಗೆ ಶಿಬಿರವನ್ನು ನಡೆಸಿದ್ದು ಸುಮಾರು 60 ರಿಂದ 70 ಮಕ್ಕಳು ಇದರ ಸದುಪಯೋಗ ಪಡೆದುಕೊಂಡು ಶಿಬಿರದಲ್ಲಿ ವಿಶೇಷವಾಗಿ ಯೋಗ, ಸಂಗೀತ, ನೃತ್ಯ, ಚಿತ್ರಕಲೆ, ಕರಕುಶಲಕಲೆಗಳ ಬಗ್ಗೆ ತರಬೇತಿಯನ್ನು ಪಡೆದುಕೊಂಡಿರುತ್ತಾರೆ. ಶಿಬಿರದಲ್ಲಿ ಮಕ್ಕಳು ಕ್ರಿಯಶೀಲರಾಗಿ ಭಾಗವಹಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು.
ತುಮಕೂರಿನ ಹೆಸರಾಂತ ಮಿಮಿಕ್ರಿ ಈಶ್ವರಯ್ಯರವರು ಮುಖ್ಯ ಅತಿಥಿಗಳು ಭಾಗವಹಿಸಿ ಮಕ್ಕಳ ಪಾತ್ರದ ಬಗ್ಗೆ ತಿಳಿಸಿ ವಿವಿಧ ಹಾಸ್ಯ, ನಗೆಚಟಾಕಿ ಹಾರಿಸುವದರೊಂದಿಗೆ ವಿವಿಧ ಪ್ರಾಣಿಗಳ ಧ್ವನಿಗಳ ಸದ್ದು ಮಾಡುತ್ತಾ ಮಕ್ಕಳನ್ನು ನಗೆಗಡಲಿನಲ್ಲಿ ತೇಲಿಸಿದರು. ಮಕ್ಕಳಿಂದ ವಿವಿಧ ಕಾರ್ಯಕ್ರಮಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾದ ಪ್ರಸಾದ್, ರಮೇಶ್, ಶ್ರೀಮತಿ ಲಲಿತ ಹಾಗೂ ಕಚೇರಿಯ ಸಿಬ್ಬಂದಿ, ಮೇಲ್ವಿಚಾರಕರು, ಮಕ್ಕಳ ಪೋಷಕರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.