ಬಿಜೆಪಿ ಸಂಘಟನೆಯಲ್ಲಿ ಉತ್ಸಾಹ ತೋರಿಸಿ
ಪಾವಗಡ: ಬದಲಾವಣೆ ಹಿನ್ನಲೆಯಲ್ಲಿ ತಾಲೂಕಿನ ಯುವಕರು ಒಗ್ಗಟ್ಟಾಗಿ ಬಿಜೆಪಿ ಪ್ರಬಲ ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ ಎಂದು ತಾ.ಬಿಜೆಪಿ ಯುವ ಮುಖಂಡ ಕೃಷ್ಣಾರೆಡ್ಡಿ ಅವರು ಮನವಿ ಮಾಡಿದ್ದಾರೆ.
ನರೇಂದ್ರ ಮೋದಿಯವರು 15ನೇ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದ ರೆಡ್ಡಿ, ಪಟ್ಟಣದಲ್ಲಿ ಅಭಿಮಾನಿಗಳ ಬಳಿ ತೆರಳಿ ಸಿಹಿ ಹಂಚಿದರು.
ಇಲ್ಲಿನ ಎಸ್ಎಸ್ಕೆ ಭವನದ ಮುಂದೆ ಮಾತನಾಡಿದ ಅವರು ದೇಶ ಬದಲಾವಣೆಯತ್ತ ದಾಪುಗಾಲು ಹಾಕಿದೆ. ದೇಶದ ಆಡಳಿತ ಬದಲಾವಣೆ ಹಿನ್ನಲೆಯಲ್ಲಿ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಸಂತಸದ ಸಂಗತಿ ಎಂದರು.
ಚುನಾವಣೆಯಲ್ಲಿ ಮೋದಿ ಅಲೆ ಹಾಗೂ ಈ ಭಾಗದ ಮಾಜಿ ಸಂಸದ ಜನಾರ್ದನಸ್ವಾಮಿ ಅವರು ಕೈಗೊಂಡ ಜನಪರ ಯೋಜನೆಗಳಿಂದ ರಾಜ್ಯ ರೈತ ಮೋರ್ಚ ಅಧ್ಯಕ್ಷ ಪಾವಗಡ ಎಸ್.ಶಿವಪ್ರಸಾದ್ ನೇತೃತ್ವದಲ್ಲಿ ಯುವಕರು, ಬುದ್ಧಿಜೀವಿಗಳು ಬಿಜೆಪಿಗೆ ಮತ ನೀಡಿದ ಸುಮಾರು 30ಸಾವಿರಕ್ಕಿಂತ ಹೆಚ್ಚಿನ ಮತಗಳು ತಾಲೂಕಿನಿಂದ ಬಿಜೆಪಿಗೆ ಲಭಿಸಿವೆ ಎಂದರು.
ನದಿ ಮೂಲದ ಶಾಶ್ವತ ಕುಡಿಯುವ ನೀರಿನ ಅನುಷ್ಠಾನ ಮತ್ತು ಕೈಗಾರಿಕೆ, ಶೈಕ್ಷಣಿಕ ಪ್ರಗತಿ ಸೇರಿದಂತೆ ಮಹತ್ತರ ಕಾರ್ಯಗಳು ಮತ್ತು ತಾಲೂಕು ಸರ್ವತೊಮುಖ ಅಭಿವೃದ್ಧಿ ಆಗಬೇಕಾದರೆ ಅದು ಬಿಜೆಪಿಯಿಂದ ಮಾತ್ರ ಸಾಧ್ಯ. ಸಂಘಟಿತರಾಗಿ ತಾಲೂಕಿನಲ್ಲಿ ಬಿಜೆಪಿ ಬಲಪಡಿಸಿ ಎಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

