'ಮಕ್ಕಳ ಪ್ರತಿಭೆಗೆ ಬೇಸಿಗೆ ಶಿಬಿರ ಪೂರಕ'
ಮಾಗಡಿ: ಶಾಲಾ ಮಕ್ಕಳಿಗೆ ಪೂರಕ ಶಿಕ್ಷಣ ನೀಡುವಲ್ಲಿ ಬೇಸಿಗೆ ಶಿಬಿರ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಶಿಕ್ಷಣ ಫೌಂಡೇಶನ್ ಮುಖ್ಯಸ್ಥ ಸಾರಥಿ ನುಡಿದರು.
ಅವರು ಮಾಗಡಿ ತಾಲೂಕಿನ ಹರ್ತಿಗೇಟ್ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೂರಕ ಶಿಕ್ಷಣ ಕುರಿತು ಬೇಸಿಗೆ ಶಿಬಿರದ ಸಮಾರೋಪದಲ್ಲಿ ಭಾಗವಹಿಸಿ ಮಾತನಾಡಿ, ಇತ್ತೀಚಿನ ದಿನಗಲ್ಲಿ ಗ್ರಾಮೀಣ ಮಕ್ಕಳು ನಗರ ಪ್ರದೇಶದ ಮಕ್ಕಳೊಂದಿಗೆ ಸ್ಪರ್ಧಾತ್ಮಕ ಪೈಪೋಟಿ ನೀಡುವುದು ತುಂಬ ಕಷ್ಟವಾಗುತ್ತಿದೆ. ಸರ್ಕಾರ ಉಚಿತ ಸೌಲತ್ತುಗಳನ್ನು ಒದಗಿಸುತ್ತಿದೆ. ಮುಖ್ಯಶಿಕ್ಷಕರು, ಸಹಶಿಕ್ಷಕರಿಗೂ ತರಬೇತಿ ನೀಡುವ ಮೂಲಕ ಗ್ರಾಮೀಣ ಮಕ್ಕಳ ಅಭ್ಯುದಯಕ್ಕೆ ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡಿರುವುದು ನಿಜಕ್ಕೂ ಅಭಿನಂದನಾರ್ಹವಾದುದು ಎಂದರು.
ಸರ್ಕಾರದ ಸೌಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ರಜಾ ದಿನಗಳಲ್ಲಿಯೂ ಮಕ್ಕಳಿಗೆ ಪೂರಕ ಶಿಕ್ಷಣ ನೀಡಲಾಗುತ್ತಿದೆ. ಅದರಲ್ಲೂ ಮುಖ್ಯವಾಗಿ 9ನೇ ತರಗತಿ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಗಣಿತ ಬೋಧನೆ ಸೇರಿದಂತೆ ಅಗತ್ಯ ಕಾರ್ಯಕ್ರಮಗಳನ್ನು ನೀಡಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ, ಮಕ್ಕಳ ಭವಿಷ್ಯ ರೂಪಿಸಲು ಪ್ರೋತ್ಸಾಹ ಅಗತ್ಯವಿದೆ ಎಂದು ಮುಖ್ಯ ಶಿಕ್ಷಕ ಟಿ.ಎ.ವಾಸುದೇವ್ ಹೇಳಿದರು. ಜಿಪಂ ಸದಸ್ಯ ವಿಜಯಕುಮಾರ್, ತಾ.ಪಂ. ಮಾಜಿ ಉಪಾಧ್ಯಕ್ಷ ಹೆಬ್ಬಾಳಪಾಳ್ಯದ ನಾಗರಾಜು ಅತಿಥಿ ಉಪಾಧ್ಯಾಯ ಬಿ.ಎನ್. ನಾಗರಾಜು ಹಾಗೂ ಪೋಷಕರು, ಶಾಲಾ ಸಹಶಿಕ್ಷಕರು, ಸಿಬ್ಬಂದಿ ವರ್ಗ ಹೆಚ್ಚಿನ ಸಹಕಾರ ನೀಡುತ್ತಿದ್ದು, ಕಳೆದ ಎರಡು ವರ್ಷಗಳಿಂದ ಹರ್ತಿ ಸರ್ಕಾರಿ ಪ್ರೌಢಶಾಲೆಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಲಭಿಸಿದ್ದು, ಸಾಧನೆ ಮೆರೆದಿದ್ದೇವೆ ಎಂದು ಎಸ್ಡಿಎಂ.ಎಸಿ ಅಧ್ಯಕ್ಷ ವಸಂತಕುಮಾರ್ ತಿಳಿಸಿದರು. ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

