ಶೆಟ್ಟರಿಗೆ ಕಾರ್ಪೊರೇಟರ್ಗಳ ಬೆಂ'ಬಲ'
ಮಂಗಳೂರು: ಮಂಗಳೂರು ಉತ್ತರ ವಿಧಾನಸಭೆ ಕ್ಷೇತ್ರದಲ್ಲಿ ವಿಜಯಕುಮಾರ್ ಶೆಟ್ಟಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಣೆ ವಿರುದ್ಧ ಸುರತ್ಕಲ್ ವ್ಯಾಪ್ತಿಯ 11 ಕಾರ್ಪೊರೇಟರ್ಗಳು, ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ರಾಜಿನಾಮೆ ನಿರ್ಧಾರ ಕೈಗೊಂಡಿದ್ದಾರೆ.
'ಕೃಪಾ ಆಳ್ವರಿಗೆ ನೀಡಬಾರದು. ವಿಜಯ ಕುಮಾರ್ ಶೆಟ್ಟರಿಗೆ ಟಿಕೆಟ್ ಕೊಡಬೇಕು. ಶೆಟ್ಟರು ಅನನ್ಯ ಕೆಲಸ ಮಾಡುತ್ತಿದ್ದಾರೆ. ಶೆಟ್ಟರಿಗೆ ಟಿಕೆಟ್ ನಿರಾಕರಿಸಿದರೆ ಸಾಮೂಹಿಕ ರಾಜಿನಾಮೆ ನೀಡುತ್ತೇವೆ' ಎಂಬ ಒಕ್ಕಣೆ ಪತ್ರವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ರಮಾನಾಥ ರೈ ಅವರಿಗೆ ನೀಡಲು ತೆರಳುತ್ತಿದ್ದೇವೆ ಎಂದು ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುಸೇನ್ ಕಾಟಿಪಳ್ಳ ಕನ್ನಡಪ್ರಭಕ್ಕೆ ತಿಳಿಸಿದ್ದಾರೆ.
ಪ್ರತಿಜ್ಞೆ ಭಂಗ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಮೊದಲ ಚುನಾವಣೆ ಪ್ರಚಾರ ಸಭೆಯಲ್ಲಿ ಮಹಾನಗರ ಪಾಲಿಕೆಗೆ ಆಯ್ಕೆಯಾದ ಕಾಂಗ್ರೆಸ್ ಸದಸ್ಯರು ಮತ್ತು ಟಿಕೆಟ್ ಆಕಾಂಕ್ಷಿಗಳ ಕೈಯಿಂದ ತಾವು ಭಿನ್ನಮತ ಮಾಡುವುದಿಲ್ಲ, ಕಾಂಗ್ರೆಸ್ ಬಿಡುವುದಿಲ್ಲ ಎಂದು ಜನಾರ್ದನ ಪೂಜಾರಿ ಪ್ರತಿಜ್ಞೆ ಮಾಡಿಸಿದ್ದರು. ಮಹಾನಗರ ಪಾಲಿಕೆ ಮೊದಲ ಅಧಿವೇಶನ ನಡೆದಿಲ್ಲ, ಪ್ರಮಾಣ ವಚನ ಸ್ವೀಕರಿಸಿಲ್ಲ. ಹೀಗಾಗಿ ಅವರು ಇನ್ನೂ ಅಧಿಕೃತವಾಗಿ ಕಾರ್ಪೊರೇಟರ್ಗಳಲ್ಲ. ಪ್ರಮಾಣ ವಚನ ಸ್ವೀಕರಿಸುವ ಮುನ್ನವೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಿಗೆ ರಾಜಿನಾಮೆ ಸಲ್ಲಿಸಿರುವುದು ಕಾಂಗ್ರೆಸ್ಗೆ ಹಿನ್ನಡೆಯಾಗಿದೆ.
ಸುರತ್ಕಲ್ ಕ್ಷೇತ್ರದಲ್ಲಿ ವಿಜಯಕುಮಾರ್ ಶೆಟ್ಟಿ 1985 ಮತ್ತು 99ರಲ್ಲಿ ಶಾಸಕರಾಗಿದ್ದವರು. 94ರಲ್ಲಿ ಬಿಜೆಪಿಯ ಕುಂಬ್ಳೆ ಸುಂದರರಾವ್ ವಿರುದ್ಧ, 2004ರಲ್ಲಿ ಬಿಜೆಪಿ ಅಭ್ಯರ್ಥಿ ಕೃಷ್ಣ ಪಾಲೆಮಾರ್ ವಿರುದ್ಧ ಸೋತಿದ್ದರು. 2008ರಲ್ಲಿ ಸ್ಪರ್ಧಿಸಿರಲಿಲ್ಲ.
'ಕಾಂಗ್ರೆಸ್ ಪ್ರಮಾಣಿಕ ಕಾರ್ಯಕರ್ತನಾಗಿ 35 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಕ್ಷೇತ್ರದ ಜನರಿಗೆ ಎರಡು ರಾಜೀವ ನಗರ ನಿರ್ಮಿಸಿದ್ದೇನೆ. ಅನೇಕ ಅಭಿವೃದ್ಧಿ ಕೆಲಸ ಮಾಡಿದ್ದೇನೆ.
ಇದೇ ಆಧಾರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಪದಾಧಿಕಾರಿಗಳು ರಾಜಿನಾಮೆ ನೀಡಿದ್ದಾರೆ ಎಂಬ ಮಾಹಿತಿಯಷ್ಟೇ ಬಂದಿದೆ, ಹೆಚ್ಚಿನ ವಿಚಾರ ಗೊತ್ತಿಲ್ಲ ಎನ್ನುತ್ತಾರೆ ವಿಜಯ ಕುಮಾರ್ ಶೆಟ್ಟಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

