ಉಡುಪಿ

ಉಡುಪಿ ಜಿಲ್ಲೆ: 9 ನಾಮಪತ್ರ ಸಲ್ಲಿಕೆ

Published On :

ಉಡುಪಿ: ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ 5ನೇ ದಿನವಾದ ಮಂಗಳವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 9 ಮಂದಿ ಅಭ್ಯರ್ಥಿಗಳು ನಾಮಪತ್ರಗಳು ಸಲ್ಲಿಸಿದ್ದಾರೆ. ಇದರೊಂದಿಗೆ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಇದುವರೆಗೆ ಒಟ್ಟು 27 ನಾಮಪತ್ರಗಳು ಸಲ್ಲಿಕೆಯಾಗಿವೆ.
 ಮಂಗಳವಾರ ಕಾಂಗ್ರೆಸ್‌ನಿಂದ 1, ಬಿಜೆಪಿಯಿಂದ 1, ಬಿಎಸ್ಪಿ ಪಕ್ಷದಿಂದ 1, ಜೆಡಿಯು ಪಕ್ಷದಿಂದ 1 ಮತ್ತು ಪಕ್ಷೇತರ 5 ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.  ಸೋಮವಾರ ನಾಮಪತ್ರ ಸಲ್ಲಿಸಿದ್ದ ಕಾಪು ಕ್ಷೇತ್ರದ ಅಭ್ಯರ್ಥಿ ಲಾಲಾಜಿ ಮೆಂಡನ್ ಮಂಗಳವಾರ ಪುನಃ ನಾಮಪತ್ರ ಸಲ್ಲಿಸಿದ್ದಾರೆ. ಇದೇ ಕ್ಷೇತ್ರದಲ್ಲಿ ಅಮೀರ್ ಹಂಜಾ (ಪಕ್ಷೇತರ), ಅಬ್ದುಲ್ ಹಕೀಂ (ಪಕ್ಷೇತರ), ರೋನಾಲ್ಡ್ ಕ್ಯಾಸ್ಟೆಲಿನೋ (ಪಕ್ಷೇತರ), ಶ್ರೀಕಾಂತ ಬಿ. ಆಚಾರ್ಯ (ಪಕ್ಷೇತರ) ನಾಮಪತ್ರ ಸಲ್ಲಿಸಿದ್ದಾರೆ.
ಕಾರ್ಕಳ ಕ್ಷೇತ್ರಕ್ಕೆ ಹಾಲಿ ಶಾಸಕ ಎಚ್. ಗೋಪಾಲ ಭಂಡಾರಿ (ಕಾಂಗ್ರೆಸ್) ಭಾರಿ ಸಂಖ್ಯೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ತಾಲೂಕು ಕಚೇರಿಗೆ ತೆರಳಿ ತಮ್ಮ ನಾಮಪತ್ರ ಸಲ್ಲಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಉದಯ (ಬಿಎಸ್ಪಿ), ಮಂಜುನಾಥ ಕೆ. (ಜೆಡಿಯು), ಶ್ರೀಧರ ಪೇದೆಮನೆ (ಪಕ್ಷೇತರ) ಮತ್ತು ಗಣೇಶ್ ಪ್ರಸಾದ್ ಶೆಟ್ಟಿ (ಪಕ್ಷತರ) ನಾಮಪತ್ರ ಸಲ್ಲಿಸಿದ್ದಾರೆ. ಕುಂದಾಪುರ ಮತ್ತು ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಮಂಗಳವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.