ಮೋದಿ ಜನತೆ ಪ್ರಶ್ನೆಗೆ ಉತ್ತರಿಸಲಿ
ಉಡುಪಿ: ಬಿಜೆಪಿ ಪರ ಚುನಾವಣಾ ಪ್ರಚಾರಕ್ಕೆ ಬರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕೋಟ್ಯಾಂತರ ರು. ಭ್ರಷ್ಟಾಚಾರ ಮಾಡಿರುವ ಬಗ್ಗೆ, ರಾಜ್ಯದಲ್ಲಿ ಬಿಜೆಪಿ ಒಡೆದು 3 ಹೋಳಾಗಿರುವ ಬಗ್ಗೆ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ಪ್ರಗತಿಯ ಕುಸಿತದ ಬಗ್ಗೆ ರಾಜ್ಯದ ಜನತೆಗೆ ಉತ್ತರ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ಸವಾಲು ಹಾಕಿದ್ದಾರೆ.
ಭಾನುವಾರ ಅವರು ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸುವುದಕ್ಕೆ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದರು.
ಜೆಡಿಎಸ್ ಪಕ್ಷದ ನೆರವಿಲ್ಲದೇ ಯಾವುದೇ ಪಕ್ಷ ಸರ್ಕಾರ ರಚಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ, ದೇವೇಗೌಡರು ಹೇಳಿರುವುದರ ಬಗ್ಗೆ ತಾನು ತಲೆಕೆಡಿಸಿಕೊಳ್ಳುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಬೆಂಬಲದ ಅಗತ್ಯ ಇಲ್ಲದೇ ಸ್ವಂತ ಬಲದಿಂದ ಸರ್ಕಾರ ರಚಿಸುತ್ತದೆ ಎಂದವರು ಹೇಳಿದರು.
ಕಾಂಗ್ರೆಸ್ ಪಕ್ಷದೊಳಗೆ ಟಿಕೆಟು ಸಿಗದವರ ಭಿನ್ನಮತವನ್ನು ಶಮನಗೊಳಿಸಲಾಗಿದೆ.
ಕಾಂಗ್ರೆಸ್ ಶಿಸ್ತಿನ ಪಕ್ಷ, ಇಲ್ಲಿನ ಶಿಸ್ತಿಗೆ ಭಂಗ ತರಬೇಡಿ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ, ಆಗ ಭಿನ್ನಮತೀಯರಿಗೆ ಸರ್ಕಾರ ಅಥವಾ ಪಕ್ಷದಲ್ಲಿ ಸೂಕ್ತ ಸ್ಥಾನಮಾನಗಳನ್ನು ನೀಡಲಾಗುತ್ತದೆ ಎಂದು ಡಾ. ಪರಮೇಶ್ವರ್ ಹೇಳಿದರು. ಎಸ್.ಎಂ. ಕೃಷ್ಣ ಅವರಿಗೆ ಪಕ್ಷದಲ್ಲಿ ಯಾವುದೇ ಮುನಿಸಿರಲಿಲ್ಲ, ಅವರು ಚುನಾವಣಾ ಪ್ರಚಾರ ಯಾವಾಗ ಆರಂಭಿಸುತ್ತಾರೆ ಎನ್ನುವುದು ಹೇಳಿರಲಿಲ್ಲ. ಆದ್ದರಿಂದ ಸ್ವಲ್ಪ ಗೊಂದಲಗಳಾಗಿತ್ತು. ಈಗ ಪ್ರಚಾರಕ್ಕೆ ಬರುವುದಾಗಿ ಹೇಳಿದ್ದಾರೆ. ಸಮಸ್ಯೆ ಬಗೆಹರಿದಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

