ಉಡುಪಿ

ಇಂದಿನಿಂದ ಶೆಟ್ಟರ್, ವರುಣ್ ಗಾಂಧಿ ಪ್ರಚಾರ

Published On :

ಉಡುಪಿ: ಜಿಲ್ಲೆಯಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಬುಧವಾರ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಡಿ.ವಿ. ಸದಾನಂದ ಗೌಡ, ಗುರುವಾರ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಶುಕ್ರವಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವರುಣ್ ಗಾಂಧಿ ಆಗಮಿಸಲಿದ್ದಾರೆ.
ಈ ಬಗ್ಗೆ ಮಂಗಳವಾರ ಬಿಜೆಪಿ ಜಿಲ್ಲಾಧ್ಯಕ್ಷ ಉದಯ ಕುಮಾರ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ವಿವರಗಳನ್ನು ನೀಡಿದ್ದಾರೆ.
ಬುಧವಾರ ಡಿ.ವಿ. ಸದಾನಂದ ಗೌಡರು ಬೆಳಗ್ಗೆ 9ರಿಂದ ಮಧ್ಯಾಹ್ನ 2.30ರವರೆಗೆ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಾರೆ. 3ರಿಂದ ರಾತ್ರಿ 10ರವರೆಗೆ ಕಾರ್ಕಳ ಕ್ಷೇತ್ರದ ಕಲ್ಯ, ಹಿರ್ಗಾನ, ಕುಕ್ಕುಂದೂರಿನಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಮುಖ್ಯಮಂತ್ರಿ ಶೆಟ್ಟರ್ ಏ. 25ರಂದು ಸಂಜೆ 5.30ಕ್ಕೆ ಬೈಂದೂರು ಕ್ಷೇತ್ರದ ಅರೆಶಿರೂರು ಹೆಲಿಪ್ಯಾಡಿಗೆ ಆಗಮಿಸಿ, 6 ಗಂಟೆಗೆ ಉಪ್ಪುಂದದಲ್ಲಿ, 7 ಗಂಟೆಗೆ ಕೋಟೇಶ್ವರ, 8 ಗಂಟೆಗೆ ಬ್ರಹ್ಮಾವರದಲ್ಲಿ ನಡೆಯುವ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಲಿದ್ದಾರೆ. ನಂತರ ಉಡುಪಿಯಲ್ಲಿದ್ದು, ಮರುದಿನ ಬೆಳಗ್ಗೆ ಚಿತ್ರದುರ್ಗಕ್ಕೆ ತೆರಳಲಿದ್ದಾರೆ.
ವರುಣ್ ಗಾಂಧಿ ಅವರು 26ರಂದು ಮಧ್ಯಾಹ್ನ 12 ಗಂಟೆಗೆ ಕಾಪು ಕ್ಷೇತ್ರದ ಕಾಪು, ಬಳಿಕ 1.30ರಿಂದ ಉಡುಪಿ ಕ್ಷೇತ್ರದ ಉಡುಪಿಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಾರೆ. ಸಂಜೆ 4 ಗಂಟೆಗೆ ಕಾರ್ಕಳ ಕ್ಷೇತ್ರದ ಹೆಬ್ರಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ಯಾಮಲ ಕುಂದರ್ ಮತ್ತು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಟಪಾಡಿ ಶಂಕರ ಪೂಜಾರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.