ನಗರದಲ್ಲಿ ಮತದಾನ ಇಳಿಮುಖ ಆತಂಕಕಾರಿ: ಡಿಸಿ
ಉಡುಪಿ: ಮತದಾನದಲ್ಲಿ ಪಾಲ್ಗೊಳ್ಳುವ ನಗರ ಪ್ರದೇಶದ ಮತದಾರರ ಸಂಖ್ಯೆ ಕಡಿಮೆಯಾಗುತ್ತಿರುವುದು ಒಂದು ಆತಂಕದ ವಿಚಾರವಾಗಿದೆಯೆಂದು ಉಡುಪಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಎಂ.ಟಿ.ರೇಜು ತಿಳಿಸಿದ್ದಾರೆ.
ಇಲ್ಲಿನ ನಗರದ ಜೋಡುಕಟ್ಟೆ ಮಾರ್ಗವಾಗಿ ಸಿಟಿಬಸ್ ನಿಲ್ದಾಣದವರೆಗೆ ಸ್ವೀಪ್ ಕಾರ್ಯಕ್ರಮದಂಗವಾಗಿ ಸರ್ಕಾರಿ ಅಧಿಕಾರಿ ಸಿಬ್ಬಂದಿಗಳ ಬೃಹತ್ ಜಾಥಾ ಉದ್ಘಾಟಿಸಿ ಮಾತನಾಡಿ, ಪ್ರಜಾ ಪ್ರಾತಿನಿಧ್ಯ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಎಲ್ಲಾ ಮತದಾರರು ಮತದಾನ ಮಾಡುವುದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಭಾಕರ ಶರ್ಮ ಮಾತನಾಡಿ, ನಗರ ಪ್ರದೇಶದ ಮತದಾರರನ್ನು ಮತದಾನ ಕೇಂದ್ರಕ್ಕೆ ಆಕರ್ಷಿಸಲು ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಹಕರಿಸಬೇಕೆಂದರಲ್ಲದೆ, ಇಂತಹ ಜಾಥಾವನ್ನು ಎಲ್ಲಾ ತಾಲೂಕು ಮಟ್ಟದಲ್ಲಿ ನಡೆಸಲಾಗುವುದೆಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕುಮಾರ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ಮಂಜುನಾಥಯ್ಯ, ಜಿ.ಪಂ. ಉಪಕಾರ್ಯದರ್ಶಿ ಡಿ.ಪ್ರಾಣೇಶ್ ರಾವ್, ಮುಖ್ಯ ಯೋಜನಾಧಿಕಾರಿ ವಿಜಯಕುಮಾರ್ ಶೆಟ್ಟಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗೇಶ್, ಸ್ವೀಪ್ ನೋಡಲ್ ಅಧಿಕಾರಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಎಂ.ಜುಂಜಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಂದ್ರ ಮಧ್ಯಸ್ಥ, ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ರೀಟಾ ಮಾಡ್ತ ಮತ್ತಿತರರು ಇದ್ದರು.
--
ನವೀನ್ಚಂದ್ರ ಶೆಟ್ಟಿ ನೇಮಕ
ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸದಸ್ಯರಾಗಿರುವ ತಾಲೂಕಿನ ಅಮಾಸೆಬೈಲು ಸಮೀಪದ ಹಣೆಜಡ್ಡಿನ ನವೀನ್ಚಂದ್ರ ಶೆಟ್ಟಿ ಅವರನ್ನು ಕಾಂಗ್ರೆಸ್ನ ರಾಜ್ಯ ಚುನಾವಣಾ ಪ್ರಚಾರ ಸಭೆಯ ಸದಸ್ಯರನ್ನಾಗಿ ನಿಯುಕ್ತಿಗೊಳಿಸಿ ಸಮಿತಿಯ ಅಧ್ಯಕ್ಷ ವೀರಣ್ಣ ಮತ್ತಿಕಟ್ಟೆ ಆದೇಶಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

