ಉಡುಪಿ

ಬುದ್ಧಿಮಾಂದ್ಯ ಮಕ್ಕಳಿಗೂ ಕ್ಷೀರಭಾಗ್ಯ ವಿಸ್ತರಣೆ: ಸೊರಕೆ

Published On :

ಉಡುಪಿ: ರಾಜ್ಯ ಸರ್ಕಾರ ಆರಂಭಿಸಿರುವ ಶಾಲಾ ವಿದ್ಯಾರ್ಥಿಗಳಿಗೆ ಹಾಲು ವಿತರಿಸುವ ಕ್ಷೀರಭಾಗ್ಯ ಯೋಜನೆಯನ್ನು ಮುಂದಿನ ದಿನಗಳಲ್ಲಿ ಬುದ್ಧಿಮಾಂದ್ಯ ಮಕ್ಕಳಿಗೂ ವಿಸ್ತರಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಪ್ರಕಟಿಸಿದ್ದಾರೆ.
ಅವರು ಗುರುವಾರ ಇಲ್ಲಿನ ಒಳಕಾಡಿನ ಸರ್ಕಾರಿ ಸಂಯುಕ್ತ ಶಾಲೆಯಲ್ಲಿ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ, ಕ್ಷೀರಭಾಗ್ಯ ಯೋಜನೆಗೆ ವಿದ್ಯಾರ್ಥಿಗಳಿಗೆ ಸಾಂಕೇತಿಕವಾಗಿ ಹಾಲನ್ನು ವಿತರಿಸುವುದರ ಮೂಲಕ ಚಾಲನೆ ನೀಡಿದರು.
ಶಿಕ್ಷಣದಲ್ಲಿ ಪ್ರಥಮ ಸ್ಥಾನ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯಲ್ಲಿ ಕ್ಷೀರಬಾಗ್ಯ ಯೋಜನೆಯನ್ನು ಯಶಸ್ವಿಗೊಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಬೇಕು ಎಂದವರು ಅಧಿಕಾರಿಗಳಿಗೆ ಗುರಿ ನೀಡಿದರು.   
ಸರ್ಕಾರಿ ಶಾಲೆಗಳನ್ನು ಮುಚ್ಚಬೇಕು ಎನ್ನುವವರಿಗೆ ಈ ಒಳಕಾಡು ಶಾಲೆಯನ್ನು ತೋರಿಸಬೇಕು ಎಂದ ಅವರು, ಕನ್ನಡ ಶಾಲೆಗಳು ಯಾವ ರೀತಿ ನಡೆಯಬೇಕು ಎಂಬುವುದಕ್ಕೆ ಈ ಶಾಲೆ ಮಾದರಿ ಎಂದು ಅಭಿಪ್ರಾಯಪಟ್ಟರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಸಕ ಉಡುಪಿ ಪ್ರಮೋದ್ ಮಧ್ವರಾಜ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷ ಉಪೇಂದ್ರ ನಾಯಕ್, ವಿದ್ಯಾಂಗ ಉಪನಿರ್ದೆಶಕ ನಾಗೇಂದ್ರ ಮಧ್ಯಸ್ಥ, ತಾಪಂ ಅಧ್ಯಕ್ಷೆ ಗೌರಿ ಪೂಜಾರ್ತಿ, ಮಂಗಳೂರು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಮೃತ್ ಶೆಣೈ, ನಗರಸಭಾ ಸದಸ್ಯೆ ಗೀತಾ ರವಿ ಶೇಟ್, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷೆ ಇಂದು ರಮಾನಂದ ಭಟ್, ಶಿಕ್ಷಣಾಧಿಕಾರಿ ಅಶೋಕ್ ಕಾಮತ್ ಮತ್ತಿತರರು ಇದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಬಿ. ರಾವ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.