ಉಡುಪಿ: ಎನ್ಎಸ್ಎಸ್ ಘಟಕ ಉದ್ಘಾಟನೆ
ಉಡುಪಿ: ಇಲ್ಲಿನ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ 2013- 14ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವನ್ನು ಕಾರ್ಕಳ ಶ್ರೀ ವೆಂಕಟರಮಣ ಸ್ವಾಮಿ ಮಹಿಳಾ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ, ಎನ್.ಎಸ್.ಎಸ್. ಯೋಜನಾಧಿಕಾರಿಯಾಗಿ ರಾಜ್ಯ ಪ್ರಶಸ್ತಿ ಪುರಸ್ಕೃತೆ ಪ್ರೊ. ಉಷಾ ನಾಯಕ್ ಉದ್ಘಾಟಿಸಿದರು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ, ನ್ಯಾಯವಾದಿ ಪ್ರದೀಪ್ ಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಪ್ರಾಂಶುಪಾಲೆ ಡಾ. ಮಾಧವಿ ಎಸ್. ಭಂಡಾರಿ ಅವರು ಶುಭ ಹಾರೈಸಿದರು. ಎನ್.ಎಸ್.ಎಸ್. ಯೋಜನಾಧಿಕಾರಿ ರಮಾನಂದ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.ಎನ್.ಎಸ್.ಎಸ್. ವಿದ್ಯಾರ್ಥಿನಿ ಪ್ರತಿನಿಧಿ ಶರ್ಮಿಳಾ ಕಾರ್ಯಕ್ರಮ ನಿರ್ವಹಿಸಿದರು. ಎನ್.ಎಸ್.ಎಸ್. ಮುಖಂಡ ಅವಿನಾಶ್ ಎಸ್. ಭಟ್ ವಂದಿಸಿದರು.
ಇಂದು ಸಚಿವ ಬಾಬು ರಾವ್ ಚಿಂಚನಸೂರ ಉಡುಪಿಗೆ
ಉಡುಪಿ: ರಾಜ್ಯ ಜವಳಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಬಾಬು ರಾವ್ ಚಿಂಚನಸೂರ 6ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 11.30 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಬಂದರು ಹಾಗೂ ಕಡಲು ಕೊರೆತ ಸಮಸ್ಯೆಗೆ ಸಂಬಂಧಪಟ್ಟ ಸಭೆಯಲ್ಲಿ ಭಾಗವಹಿಸುವರು.
ನೋಟ್ ಪುಸ್ತಕ ವಿತರಣೆ
ಪರ್ಕಳ: ಅಂಜಾರು ಓಂತಿಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಉಚಿತ ನೋಟ್ ಪುಸ್ತಕಗಳನ್ನು ಇತ್ತೀಚೆಗೆ ರೋಟರಿ ಅಧ್ಯಕ್ಷ ಎಸ್.ಎನ್. ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾಯವಾದಿ ಪಿ. ಶ್ರೀನಿವಾಸ ನಾಯಕ್ ವಿತರಿಸಿದರು. ಶಿಕ್ಷಣ ತಜ್ಞ ಬಿ. ಗುರುವಪ್ಪ ಮಾಸ್ತರ್, ಬಿ.ಎಚ್. ಶೆಟ್ಟಿಗಾರ್, ಗೋಪಾಲಕೃಷ್ಣ ಆಚಾರ್, ಹರೀಶ್ ಕುಲಾಲ್, ಶಾಲಾ ಮುಖ್ಯ ಶಿಕ್ಷಕಿ ಶಾಲಿನಿ, ರೋಟರಿ ಕಾರ್ಯದರ್ಶಿ ಬಿ. ಅನಂತರಾಮ ಭಟ್, ಸಹಶಿಕ್ಷಕಿ ವಿಜಯಾ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

