ಅರಣ್ಯ ಇಲಾಖೆ ಪ್ರಕೃತಿ ಸಮತೋಲನ ಕಾಪಾಡುವ ಹೊಣೆ ಹೊರಲಿ: ಸೊರಕೆ
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಹಲವಾರು ಪರಿಸರ ಮಾರಕ ಉದ್ದಿಮೆಗಳು ತಲೆ ಎತ್ತುತ್ತಿದ್ದು, ಪ್ರಕೃತಿಯ ಸಮತೋಲನ ತಪ್ಪಿ ಹೋಗುತ್ತಿದೆ. ಆದ್ದರಿಂದ ಅರಣ್ಯ ಇಲಾಖೆ ಈ ಪ್ರಾಕೃತಿಕ ಸಮತೋಲನ ಕಾಪಾಡುವ ಹೊಣೆ ಹೊರಬೇಕು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಮತ್ತು ನಗರಾಭಿವೃದ್ಧಿ ಸಚಿವ ವಿನಯಕುಮಾರ್ ಸೊರಕೆ ಅವರು ಸಚಿವ ಬಿ. ರಮಾನಾಥ ರೈಗೆ ಸಲಹೆ ನೀಡಿದ್ದಾರೆ.
ಮಂಗಳವಾರ ನಗರದ ಶ್ರೀಮತಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸ್ಮಾರಕ ಸಭಾಭವನದಲ್ಲಿ ಅರಣ್ಯ ಇಲಾಖೆಯ ಕುಂದಾಪುರ ವಿಭಾಗ ಮತ್ತು ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ನಡೆದ ಲಕ್ಷ ವೃಕ್ಷ ಅಭಿಯಾನದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಡೀಮ್ಡ್ ಫಾರೆಸ್ಟ್ನಿಂದ ತೊಂದರೆ: ಅರಣ್ಯ ಇಲಾಖೆ ಗುರುತಿಸಿರುವ ಡೀಮ್ಡ್ ಫಾರೆಸ್ಟ್ ನಿಯಮಗಳಿಂದಾಗಿ ಗ್ರಾಮೀಣ ಭಾಗದ ಬಡರೈತರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆಯೂ ಅರಣ್ಯ ಸಚಿವ ಸೂಕ್ತ ಕ್ರಮ ಕೈಗೊಳ್ಳಬೇಕು. ರಾಜ್ಯದ ನಕ್ಸಲ್ ಪೀಡಿತ ಪ್ರದೇಶ ಅಭಿವೃದ್ಧಿಗೊಳಿಸಿದರೆ ನಕ್ಸಲ್ ಸಮಸ್ಯೆ ಬಗೆಹರಿಯುತ್ತದೆ, ಇದಕ್ಕೂ ಅರಣ್ಯ ಇಲಾಖೆಯ ಸಹಕಾರಬೇಕು ಎಂದು ಸೊರಕೆ ಹೇಳಿದರು.
ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ ಅರಣ್ಯ ಮತ್ತು ಪರಿಸರ ಸಚಿವ ಬಿ. ರಮಾನಾಥ ರೈ, ಪರಿಸರ ಸಂರಕ್ಷಣಾ ಕಾರ್ಯಕ್ರಮಗಳು ಕೇವಲ ಸಾಂಕೇತಿಕವಾಗಿರದೇ ಪರಿಣಾಮಕಾರಿಯಾಗಿ ಜಾರಿಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಶಾಸಕ ಪ್ರಮೋದ್ ಮಧ್ವರಾಜ್ ಅಧ್ಯಕ್ಷತೆ ವಹಿಸಿದ್ದರು. ಯುವಜನ ಸೇವೆ, ಕ್ರೀಡೆ ಮತ್ತು ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್, ಜಿ.ಪಂ. ಅಧ್ಯಕ್ಷ ಉಪೇಂದ್ರ ನಾಯಕ್, ಉಪಾಧ್ಯಕ್ಷೆ ಮಮತಾ ಆರ್. ಶೆಟ್ಟಿ, ರಾಜ್ಯದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎ.ಕೆ. ಸಿಂಗ್, ಜಿಲ್ಲಾ ಸಿಆರ್ಝೆಡ್ ಪ್ರಾದೇಶಿಕ ನಿರ್ದೇಶಕ ಬಾಲಚಂದ್ರ ಟಿ., ಜಿಲ್ಲಾ ಸಾಮಾಜಿಕ ಅರಣ್ಯ ವಿಭಾಗದ ಎಸ್. ಮಹಮ್ಮದ್ ಅಕ್ಬರ್, ಜಿಪಂ ಸಿಇಒ ಕೆ. ಪ್ರಭಾಕರ ಶರ್ಮ ಇದ್ದರು.
ಕುಂದಾಪುರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪಿ. ಮಂಜುನಾಥ ಶೆಟ್ಟಿ ಸ್ವಾಗತಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

