ಉಡುಪಿ

ಕಳತ್ತೂರು: ವೈದ್ಯಕೀಯ ಶಿಬಿರ

Published On :

ಪಡುಬಿದ್ರಿ: ಇಲ್ಲಿನ ಕಳತ್ತೂರು ಕುಶಲ ಶೇಖರ ಶೆಟ್ಟಿ ಸಭಾಂಗಣದಲ್ಲಿ ಇತ್ತೀಚೆಗೆ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆ ಮತ್ತು ದೇರಳಕಟ್ಟೆ ಯೆನೆಪೋಯ ದಂತ ವೈದ್ಯಕೀಯ ಆಸ್ಪತ್ರೆಯ ತಜ್ಞ ವೈದ್ಯರಿಂದ ಬೃಹತ್ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿದ ಕಳತ್ತೂರು ಕುಶಲ ಶೇಖರ ಶೆಟ್ಟಿ ಟ್ರಸ್ಟ್ ಅಧ್ಯಕ್ಷ, ಅನಿವಾಸಿ ಭಾರತೀಯ ಉದ್ಯಮಿ ಶೇಖರ ಬಿ. ಶೆಟ್ಟಿ ಕಳತ್ತೂರು ಮಾತನಾಡಿ, ಶಸ್ತ್ರಚಿಕಿತ್ಸೆ ಹಾಗೂ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಟ್ರಸ್ಟ್‌ನಿಂದ ವೆಚ್ಚ ಭರಿಸಲಾಗುತ್ತದೆ. ಮುಂದಿನ ದಿನಗಳಲ್ಲೂ ಈ ಕಾರ್ಯಕ್ರಮವನ್ನು ಮುಂದುವರಿಸುತ್ತೇವೆ ಎಂದರು. ಸತ್ಯಸಾಯಿ ಸೇವಾ ಸಮಿತಿ ಮುಖ್ಯಸ್ಥ ಸುರೇಂದ್ರ ಬೈಂದೂರು ಹಾಗೂ ವಿನಯ ಕುಮಾರ್ ಇದ್ದರು.
ಶಿರ್ವ: ಕ್ಷೀರಭಾಗ್ಯಕ್ಕೆ ಚಾಲನೆ
ಉಡುಪಿ: ಶಿರ್ವದ ಸಂತ ಜೋಸೆಫ್ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಕ್ಷೀರಭಾಗ್ಯ ಯೋಜನೆ ಕಾರ್ಯಕ್ರಮವನ್ನು ಬೆಳ್ಮಣ್ ಗ್ರಾ.ಪಂ. ಅಧ್ಯಕ್ಷ ಶಂಕರ್ ಕುಂದರ್ ಸೂಡ ಉದ್ಘಾಟಿಸಿದರು. ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಹಾಗೂ ಶಾಲೆ ಹಳೆ ವಿದ್ಯಾರ್ಥಿ ಸಂಘದ ಗೌರವ ಅಧ್ಯಕ್ಷ ಗ್ರೆಗೊರಿ ಮಿನೇಜಸ್ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ಕಾನ್ವೆಂಟಿನ ಮುಖ್ಯಸ್ಥೆ ಸಿಸ್ಟರ್ ಉಷಾ ಸ್ಟೆಲ್ಲಾ, ಹಿರಿಯ ಶಿಕ್ಷಕಿ ಜುಲಿಯಾನ ಮೊರಾಸ್, ಲವಿನಾ ಪಿಂಟೊ, ಹರ್ಷೇಂದ್ರ ಕುಮಾರ್ ಜೈನ್, ವರೋನಿಕಾ, ಗೀತಾ, ಅಮಿತಾ ಇದ್ದರು. ಬಿ. ಪುಂಡಲೀಕ ಮರಾಠೆ ನಿರೂಪಿಸಿದರು. ಶಾಲೆಯ ಮುಖ್ಯ ಶಿಕ್ಷಕಿ ಸಿಸ್ಟರ್ ಮೋನಿಕಾ ವಂದಿಸಿದರು.
9ರಂದು ಮಲ್ಲಿಗೆ ಕೃಷಿ ಮಾಹಿತಿ ಸಭೆ
ಉಡುಪಿ: ಜಿಲ್ಲಾ ಕೃಷಿಕ ಸಂಘ ಮತ್ತು ಉಡುಪಿ ಮಲ್ಲಿಗೆ ಬೆಳೆಗಾರರ ಸಂಘದ ಆಶ್ರಯದಲ್ಲಿ  9 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿಯ ರೆಸಿಡೆನ್ಸಿ ಹೋಟೇಲಿನ ಸಭಾಂಗಣದಲ್ಲಿ ಕೃಷಿ ಮಾಹಿತಿ ಸಭೆ ನಡೆಯಲಿದೆ. ಮಲ್ಲಿಗೆ ಕೃಷಿಗೆ ರಾಷ್ಟ್ರೀಯ ಮಾನ್ಯತೆ ದೊರಕಿಸಿ ಕೊಡುವುದರಿಂದ ವಿಫುಲ ಮಾರುಕಟ್ಟೆ ಅವಕಾಶದ ಹಿನ್ನಲೆಯಲ್ಲಿ ಕೃಷಿಕರು ಮಲ್ಲಿಗೆ ಬೆಳೆಯನ್ನು ಬೆಳೆಯಲು ಬೇಕಾದ ಸರ್ವ ರೀತಿಯ ಮಾಹಿತಿ ನೀಡಲಾಗುತ್ತದೆ. ಜೊತೆಗೆ ತೋಟಗಾರಿಕೆ, ಕೃಷಿ ಕುರಿತ ಮಾಹಿತಿ, ರೋಗ ಹತೋಟಿ ಕ್ರಮಗಳ ಬಗ್ಗೆ ತಿಳಿಸಲಾಗುವುದು. ಕೃಷಿಕರು, ಕೃಷಿ ಆಸಕ್ತರು ಭಾಗವಹಿಸಿ ಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ತೆಕ್ಕಟ್ಟೆ: ದೀಕ್ಷಿತ್ ರಾಜ್ಯ ಮಟ್ಟಕ್ಕೆ ಆಯ್ಕೆ
ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ಸೇವಾ ಸಂಗಮ ವಿದ್ಯಾಕೇಂದ್ರ ಪ್ರೌಢಶಾಲೆಯ ವಿದ್ಯಾರ್ಥಿ ದೀಕ್ಷಿತ್ ಇತ್ತೀಚೆಗೆ ಮಣಿಪಾಲದ ಎಂಐಟಿಯಲ್ಲಿ ಶಿಕ್ಷಣ ಇಲಾಖೆ ವತಿಯಿಂದ ನಡೆದ ವಿಜ್ಞಾನ ಇನ್‌ಸ್ಪಾಯರ್ ಅವಾರ್ಡ್ ಸ್ಪರ್ಧೆಯಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.